ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ಶವ ಪತ್ತೆ, ಕೊಲೆ ಮಾಡಿ ಆಗುಂಬೆ ಅರಣ್ಯದಲ್ಲಿ ಬಿಸಾಡಿದ್ದ ಸ್ನೇಹಿತ

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ಶವವಾಗಿ ಪತ್ತೆಯಾಗಿದ್ದಾಳೆ. ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಪೂಜಾಳನ್ನು ಕೊಲೆ ಮಾಡಿ ಬಳಿಕ ಶವ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿಯ ಅರಣ್ಯ ಪ್ರದೇಶ ಬಿಸಾಡಲಾಗಿದೆ. ಹಾಗಾದ್ರೆ, ಈ ಕೊಲೆ ನಡೆದಿದ್ದು ಯಾಕೆ? ಯಾರು? ಇಲ್ಲಿದೆ ಮಾಹಿತಿ

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ಶವ ಪತ್ತೆ, ಕೊಲೆ ಮಾಡಿ ಆಗುಂಬೆ ಅರಣ್ಯದಲ್ಲಿ ಬಿಸಾಡಿದ್ದ ಸ್ನೇಹಿತ
ಪೂಜಾ, ಮಣಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jul 07, 2024 | 4:19 PM

ಶಿವಮೊಗ್ಗ, (ಜುಲೈ 07) : ಕಾಣೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಶವ ಪತ್ತೆಯಾಗಿದೆ. ಜೂನ್ 30ರಂದು ಕಾಣೆಯಾಗಿದ್ದ ಆಗುಂಬೆಯ ಕುಶಾಲ್ ಎಂಬುವರ ಪುತ್ರಿ ಪೂಜಾ (24) ಮೃತದೇಹ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಇನ್ನು ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಪೂಜಾಳ ಸ್ನೇಹಿತನನನ್ನು ವಿಚಾರನೆ ನಡೆಸಿದಾಗ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದಬಂದಿದೆ. ಕತ್ತು ಹಿಸುಕಿ ಕೊಂದು ಬಳಿಕ ಹೊಂಡದಲ್ಲಿ ಶವ ಹಾಕಿದ್ದಾಗಿ ನಾಲೂರಿನ ಮಣಿ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ ಏಕಾಏಕಿ ಕಾಣೆಯಾಗಿದ್ದಳು. ಮನೆಗೆ ವಾಪಸ್ ಬರದ ಹಿನ್ನೆಲೆಯಲ್ಲಿ ಪೂಜಾ ಪೋಷಕರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಆಗುಂಬೆ ಪೊಲೀಸ್ ಠಾಣೆಯಲ್ಲಿ ತಂದೆ ಕುಶಾಲ್ ಮಿಸ್ಸಿಂಗ್‌ ಕಂಪ್ಲೇಟ್‌ ಕೊಟ್ಟಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆಗಿಳಿದಾಗ ಪೂಜಾಳ ಶವವು ಪತ್ತೆಯಾಗಿತ್ತು. ಬಳಿಕ ಆಕೆಯ ಫೋನ್‌ ಕಾಲ್‌ ಲಿಸ್ಟ್‌ ತೆಗೆದು ಮಿಸ್ಸಿಂಗ್‌ ಆದ ಕೊನೆ ದಿನ ಯಾರೆಲ್ಲ ಕರೆ ಮಾಡಿದ್ದರು ಅವರನ್ನೆಲ್ಲ ಪೊಲೀಸರು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ನಿತ್ಯ ಬಯ್ಯುತ್ತಾರೆಂದು ಹೋಟೆಲ್​ ಮಾಲೀಕನ ಹತ್ಯೆಗೆ ಸ್ಕೆಚ್ ಹಾಕಿದ ಕೆಲಸಗಾರ

ಈ ವೇಳೆ ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ ಮಣಿಕಂಠ ಎನ್ನುವಾತನನ್ನು ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರಣೆ ನಡೆಸಿದ್ದಾರೆ. ಆ ವೇಳೆ ಪೂಜಾಳನ್ನು ಕೊಂದಿದ್ದಾಗಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಹಣಕಾಸಿ‌ ವಿಚಾರಕ್ಕೆ ಜಗಳ ನಡೆದು ಕೊಲೆ ಮಾಡಿ ಬಳಿಕ ಆಗುಂಬೆ ಅರಣ್ಯ ಪ್ರದೇಶದಲ್ಲಿ ಬಿಸಾಡಿ ಹೋಗಿದ್ದಾನೆ ಎನ್ನುವ ಅಂಶ ತಿಳಿದುಬಂದಿದೆ.

ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು,  ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Sun, 7 July 24

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ