ಶಿವಮೊಗ್ಗದಲ್ಲಿ ಫೆ 28ರವರೆಗೆ ನಿಷೇಧಾಜ್ಞೆ ವಿಸ್ತರಣೆ: ಜಿಲ್ಲಾಡಳಿತ ಘೋಷಣೆ

ಬಜರಂಗದಳ ಕಾರ್ಯಕರ್ತ ಹರ್ಷ ಶವಯಾತ್ರೆ ವೇಳೆ ನಗರದಲ್ಲಿ ವ್ಯಾಪಕವಾಗಿ ಹಿಂಸಾಚಾರ, ಗಲಭೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿತ್ತು

ಶಿವಮೊಗ್ಗದಲ್ಲಿ ಫೆ 28ರವರೆಗೆ ನಿಷೇಧಾಜ್ಞೆ ವಿಸ್ತರಣೆ: ಜಿಲ್ಲಾಡಳಿತ ಘೋಷಣೆ
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 25, 2022 | 8:44 PM

ಶಿವಮೊಗ್ಗ: ನಗರದಲ್ಲಿ ಪರಿಸ್ಥಿತಿ ತಹಬದಿಗೆ ಬಾರದ ಹಿನ್ನೆಲೆಯಲ್ಲಿ ಫೆ.28ರ ಬೆಳಿಗ್ಗೆ 9ರ ವರೆಗೂ ನಿಷೇಧಾಜ್ಞೆ ವಿಸ್ತರಣೆ ಮಾಡುವುದಾಗಿ ಜಿಲ್ಲಾಡಳಿತ ಘೋಷಿಸಿದೆ. ಬಜರಂಗದಳ ಕಾರ್ಯಕರ್ತ ಹರ್ಷ ಶವಯಾತ್ರೆ ವೇಳೆ ನಗರದಲ್ಲಿ ವ್ಯಾಪಕವಾಗಿ ಹಿಂಸಾಚಾರ, ಗಲಭೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿತ್ತು. ಇನ್ನೂ ಶಿವಮೊಗ್ಗ ನಗರದಲ್ಲಿ ಸಹಜ ಸ್ಥಿತಿ ನೆಲೆಸದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯ ಅವಧಿ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಸೇಲ್ವಮಣಿ ಆದೇಶ ಹೊರಡಿಸಿದ್ದಾರೆ. ಫೆ 26ರ ಶನಿವಾರ ಮತ್ತು ಫೆ 27ರ ಭಾನುವಾರ ಬೆಳಗ್ಗೆ 6ರಿಂದ 4 ಗಂಟೆಯವರೆಗೆ ಅಗತ್ಯ ವಸ್ತುಗಳ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ.

ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ. ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, 10 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಶಿವಮೊಗ್ಗದ 2ನೇ ಜೆಎಂಎಫ್ ಸಿ ಕೋರ್ಟ್​ಗೆ ಹಾಜರು ಪಡಿಸುವಂತೆ ನ್ಯಾಯಾಧೀಶೆ ಸನ್ಮತಿ ಆದೇಶ ಮಾಡಿದ್ದಾರೆ.

ಕಳೆದ ಭಾನುವಾರ (ಫೆ 20) ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹರ್ಷನನ್ನು ಕೊಲೆ ಮಾಡಿದ್ದರು. ಇದರಿಂದಾಗಿ ಶಿವಮೊಗ್ಗ ಈಗ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಕೊಲೆಯ ನಂತರ ಸಿಟ್ಟಿಗೆದ್ದ ಜನರು ಮನಬಂದಂತೆ ಕಲ್ಲು ತೂರಾಟ ನಡೆಸಿದರು. ಕಲ್ಲುತೂರಾಟ ನಿಯಂತ್ರಿಸಲು ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಕಾರಿನಲ್ಲಿ ಬಂದಿದ್ದ 4ರಿಂದ 6 ಜನರಿದ್ದ ಗುಂಪು, ಬಜರಂಗದಳ ಕಾರ್ಯಕರ್ತ ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿತು. ತೀವ್ರವಾಗಿ ಗಾಯಗೊಂಡಿದ್ದ ಹರ್ಷನನ್ನು ತಕ್ಷಣ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟರು.

ನಿಮ್ಮಲ್ಲಿ ನಾನು ಭಿಕ್ಷೆ ಕೇಳುತ್ತೇನೆ ಶಾಂತಿ ಕಾಪಾಡಿಕೊಳ್ಳಿ. ಮನೆಯವರ ಬಗ್ಗೆ ಯೋಚನೆ ಮಾಡಿ. ಎಲ್ಲರೂ ಆರಾಮಗಿರಿ, ಖುಷಿಯಾಗಿರಿ. ಹರ್ಷ ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾನೆ. ಹಿಂದೂ- ಮುಸ್ಲಿಂ ಎಲ್ಲರೂ ಮನುಷ್ಯರೇ. ಎಲ್ಲರಿಗೂ ನೋವಾಗುತ್ತದೆ. ಎಲ್ಲರಿಗೂ ರಕ್ತ ಬರುತ್ತದೆ. ಅಪ್ಪ-ಅಮ್ಮನ ಬಗ್ಗೆ ಯೋಚನೆ ಮಾಡಿ ಎಂದು ಹರ್ಷ ಸಹೋದರಿ ಅಶ್ವಿನಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Shivamogga: ಹರ್ಷ ಹತ್ಯೆ ಪ್ರಕರಣ: ಕೊಲೆಗೆ ಬಳಸಿದ್ದ ಕಾರು ಜಪ್ತಿ ಮಾಡಿದ ಪೊಲೀಸರು

ಇದನ್ನೂ ಓದಿ: ಮೃತ ಹರ್ಷ ಮೊಬೈಲ್ ಫೋನ್ ಪತ್ತೆಯಾಗಿಲ್ಲ, 10 ಆರೋಪಿಗಳ ಬಂಧನ; ಶಿವಮೊಗದಲ್ಲಿ ಎಸ್​ಪಿ ಮಾಹಿತಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ