ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ-ಡಿಕೆ ಶಿವಕುಮಾರ್​​

ದೇವಸ್ಥಾನಗಳು ಯಾರ ಆಸ್ತಿಯೂ ಅಲ್ಲ, ರಾಮ ಮಂದಿರ ಪೂಜೆಗೆ ಅವಕಾಶ ನೀಡಿದ್ದೇ ರಾಜೀವ್ ಗಾಂಧಿಯವರು. ಧರ್ಮದ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಶಿವಮೊಗ್ಗದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ನಾವು ಗ್ಯಾರಂಟಿ ಯೋಜನೆ ನೀಡಿದ್ದು ಜಾತಿ ಮೇಲೆ ಅಲ್ಲ, ನೀತಿ ಮೇಲೆ ಎಂದರು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ-ಡಿಕೆ ಶಿವಕುಮಾರ್​​
ಡಿಕೆ ಶಿವಕುಮಾರ್​
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 24, 2024 | 3:08 PM

ಶಿವಮೊಗ್ಗ, ಫೆ.24: ಕಾಂಗ್ರೆಸ್ ಸರ್ಕಾರ ಬಲಿಷ್ಠವಾಗಿದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಶಿವಮೊಗ್ಗ(Shivamogga)ದಲ್ಲಿ ಮಾತನಾಡಿದ ಅವರು, ‘ದೇವಸ್ಥಾನಗಳು ಯಾರ ಆಸ್ತಿಯೂ ಅಲ್ಲ, ರಾಮ ಮಂದಿರ ಪೂಜೆಗೆ ಅವಕಾಶ ನೀಡಿದ್ದೇ ರಾಜೀವ್ ಗಾಂಧಿಯವರು. ಧರ್ಮದ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು. ಗ್ಯಾರಂಟಿ ಯೋಜನೆ ನೀಡಿದ್ದು ಜಾತಿ ಮೇಲೆ ಅಲ್ಲ, ನೀತಿ ಮೇಲೆ. ಹೆಚ್ಚುವರಿ 5 ಕೆಜಿ ಅಕ್ಕಿ ಕೇಳಿದ್ದಕ್ಕೆ ಕೇಂದ್ರ ಸರ್ಕಾರ ನೀಡಿಲ್ಲ. ಆದರೂ, ನಾವು ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡಿದ್ದೇವೆ. ದರಿದ್ರ ಲಕ್ಷ್ಮೀ ಹೋಗಿ, ಈಗ ಗೃಹಲಕ್ಷ್ಮೀ ಯೋಜನೆ ಜಾರಿ ಆಗಿದೆ ಎಂದರು.

ನಾನು ಮಾಜಿ ಸಿಎಂ ಬಂಗಾರಪ್ಪ ಅವರ ಶಿಷ್ಯ ಆಗಿರುವೆ

ಮಲೆನಾಡು ದೊಡ್ಡ ಇತಿಹಾಸ ಹೊಂದಿರುವ ಜಿಲ್ಲೆ ಆಗಿದೆ. ನಾನು ಮಾಜಿ ಸಿಎಂ ಬಂಗಾರಪ್ಪ ಅವರ ಶಿಷ್ಯ ಆಗಿರುವೆ. ಇನ್ನೂ ಎರಡು ಕ್ಷೇತ್ರ ಶಿವಮೊಗ್ಗದಲ್ಲಿ ಮಿಸ್ ಆಗಿದೆ. ವಿಧಾನಸಭೆ ಚುನಾವಣೆಯಲ್ಲಿ 141 ಕ್ಷೇತ್ರ ನನ್ನ ಗುರಿ ಇತ್ತು. ಕಾಂಗ್ರೆಸ್ ಸರಕಾರ ಬಲಿಷ್ಠ ಆಗಿದೆ. ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಇಂದು ಬಿಜೆಪಿ ಸ್ನೇಹಿತರು ಕಾರ್ಯಕ್ರಮಕ್ಕೆ ಬಂದಿಲ್ಲ. ಅರಳಿದ ಕಮಲ ಮುದೂಡಿದೆ. ತೆನೆ ಹೊತ್ತ ಮಹಿಳೆ ಬಿಟ್ಟು ಈಗ ಕುಮಾರಣ್ಣ ಕಮಲ ಹಿಡಿದ್ದಾರೆ ಎಂದು ಟಾಂಗ್​ ಕೊಟ್ಟರು.

ಇದನ್ನೂ ಓದಿ: ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಕಾಗಿರಲಿಲ್ಲ: ಸಿದ್ದರಾಮಯ್ಯ

ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಹಣದ ಉಳಿತಾಯ

ಗ್ಯಾರಂಟಿ ಯೋಜನೆಗಳ ಮಧ್ಯೆಯೂ ಸಾವಿರಕ್ಕೂ ಅಧಿಕ ಬಸ್ ಖರೀದಿ ಮಾಡಿದ್ದೇವೆ. ಮಹಿಳೆಯರ ಸುರಕ್ಷಿತ ಪಯಣಕ್ಕೆ ನೂತನ ಬಸ್ ವ್ಯವಸ್ಥೆ ಮಾಡಲಾಗಿದ್ದು, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಹಣದ ಉಳಿತಾಯ ಆಗಿದೆ. ದರಿದ್ರ ಲಕ್ಷ್ಮಿ ಹೋಗಿ ಈಗ ಗೃಹಲಕ್ಷ್ಮಿ ಯೋಜನೆ ಜಾರಿ ಆಗಿರುವುದು, ಇದೊಂದು ದೇಶದಲ್ಲೇ ಇತಿಹಾಸ ಸೃಷ್ಟಿ ಮಾಡಿದೆ. ಈ ಮೂಲಕ ಹೆಣ್ಣು ಕುಟುಂಬದ ಕಣ್ಣಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್