Breaking News: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಕಂಪ, ಭಾರಿ ಶಬ್ದಕ್ಕೆ ಬೆಚ್ಚಿಬಿದ್ದ ಜನ

| Updated By: ಆಯೇಷಾ ಬಾನು

Updated on: Oct 06, 2022 | 11:06 AM

Earthquake: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗಿನ ಜಾವ 3.55 ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

Breaking News: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಕಂಪ, ಭಾರಿ ಶಬ್ದಕ್ಕೆ ಬೆಚ್ಚಿಬಿದ್ದ ಜನ
ಭೂಕಂಪ (ಸಂಗ್ರಹ ಚಿತ್ರ)
Follow us on

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೂಮಿ ಕಂಪಿಸಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗಿನ ಜಾವ 3.55 ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಅಲ್ಲದೆ ಭೂಕಂಪದ ಜೊತೆ ಜನರಿಗೆ ಭಾರಿ ಶಬ್ಧ ಕೇಳಿಸಿದೆ. ಇದರಿಂದ ಜನರಲ್ಲಿ ಆತಂಕ ಉಂಟಾಗಿದೆ.

ಶಿರಾಳಕೊಪ್ಪದಲ್ಲಿ ಯಾವುದೇ ರೀತಿಯ ಭೂಕಂಪನ ಆಗಿಲ್ಲ

ಶಿರಾಳಕೊಪ್ಪದಲ್ಲಿ ಯಾವುದೇ ರೀತಿಯ ಭೂಕಂಪನ ಆಗಿಲ್ಲ ಎಂದು ಟಿವಿ9ಗೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೋಟೋ ಹರಿದಾಡ್ತಿದೆ. ಬೆಂಗಳೂರಿನ ಕೇಂದ್ರದಿಂದ ಮಾಹಿತಿಯನ್ನ ಪಡೆಯಲಾಗಿದೆ. ಎಲ್ಲೂ ಭೂಮಿ ಕಂಪಿಸಿದ ಬಗ್ಗೆ ದಾಖಲಾಗಿಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ, ಭಯ ಪಡುವ ಅಗತ್ಯವಿಲ್ಲ ಎಂದರು.

ವಿಜಯಪುರ ನಗರದಲ್ಲಿ ಮತ್ತೆ ಭಾರೀ ಸ್ಫೋಟದ ಸದ್ದು, ಭೂಕಂಪ

ವಿಜಯಪುರ: ನಗರದಲ್ಲಿ ಮತ್ತೆ ಭಾರೀ ಸ್ಫೋಟದ ಸದ್ದಿನೊಂದಿಗೆ ಭೂಮಿಯು ಕಂಪಿಸಿದೆ (Earthquake). ಕಂಪನದ ತೀವ್ರತೆಯು ರಿಕ್ಟರ್​ ಮಾಪಕದಲ್ಲಿ 2.5ರಷ್ಟು ದಾಖಲಾಗಿದೆ. ವಿಜಯಪುರ (Vijayapura) ಬಳಿಯ ಅಲಿಯಾಬಾದ್​​​​ ಭೂಕಂಪನದ ಕೇಂದ್ರವಾಗಿತ್ತು. ವಿಜಯಪುರ ನಗರದಲ್ಲಿ ಶುಕ್ರವಾರ ನಸುಕಿನಲ್ಲಿಯೂ ಮೂರು ಬಾರಿ ಲಘು ಭೂಕಂಪನವಾಗಿತ್ತು. ಶುಕ್ರವಾರ ಮುಂಜಾನೆ 3.45, 3.46 ಹಾಗೂ 5.56ಕ್ಕೆ ಭೂಕಂಪನ ದಾಖಲಾಗಿತ್ತು. ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ ಕ್ರಮವಾಗಿ 2.0, 1.9 ಮತ್ತು 3.2 ಎಂದು ದಾಖಲಾಗಿತ್ತು. ಜನರು ನಿದ್ದೆಯಲ್ಲಿದ್ದ ಕಾರಣ ಹೆಚ್ಚಿನವರಿಗೆ ಭೂಕಂಪನದ ಅನುಭವ ಅಷ್ಟಾಗಿ ಆಗಿರಲಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ವಿಜಯಪುರದಲ್ಲಿ ಪದೇಪದೆ ಭೂಕಂಪನದ ಅನುಭವ ಜನರಿಗೆ ಆಗುತ್ತಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: Cough Syrup: ಭಾರತದಲ್ಲಿ ತಯಾರಾದ ಶೀತ-ಕೆಮ್ಮಿನ ಔಷಧಿ ಸೇವಿಸಿ ಆಫ್ರಿಕಾದಲ್ಲಿ 66 ಮಕ್ಕಳ ಸಾವು

ವಿಜಯಪುರ ಜಿಲ್ಲೆಯಲ್ಲಿ ಪದೇಪದೆ ಭೂಕಂಪನ ಸಂಭವಿಸುತ್ತಿರುವ ವಿಚಾರವು ಈ ಹಿಂದೆ ವಿಧಾನ ಪರಿಷತ್​ನಲ್ಲಿಯೂ ಪ್ರಸ್ತಾಪವಾಗಿತ್ತು. ‘ಈ ಬಗ್ಗೆ ಸಮಗ್ರ ಪರಿಶೀಲನೆ ನಡೆಯಬೇಕು’ ಎಂದು ಸದಸ್ಯರಾದ ಸುನೀಲಗೌಡ ಪಾಟೀಲ ಒತ್ತಾಯಿಸಿದ್ದರು. ‘ಜಿಲ್ಲೆಯಲ್ಲಿ ಈವರೆಗೆ ಸುಮಾರು 52 ದಾರಿ ಭೂಕಂಪನವಾಗಿದೆ. ಮನೆಯ ಹೊರಗಡೆ ಮಲಗಬೇಕೆಂದರೆ ಮಳೆ ಇರುತ್ತದೆ. ಮನೆ ಒಳಗಡೆ ಕುಳಿತುಕೊಳ್ಳಬೇಕೆಂದರೆ ಭೂಕಂಪನದ ಭೀತಿಯಿದೆ. ಈ ಕುರಿತು ಜಿಲ್ಲಾಡಳಿತ ಮತ್ತು ಗಣಿ ಭೂವಿಜ್ಞಾನ ಇಲಾಖೆ ಸ್ಪಷ್ಟ ತಾಂತ್ರಿಕ ಮಾಹಿತಿ ನೀಡುತ್ತಿಲ್ಲ. ಹೀಗಾಗಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ತಜ್ಞರನ್ನು ಕರೆಯಿಸಿ ಭೂಕಂಪನಕ್ಕೆ ಕಾರಣ ಕುರಿತು ಅಧ್ಯಯನ ನಡೆಸಬೇಕು. ಈ ಮೂಲಕ ಜನರಲ್ಲಿರುವ ಭಯವನ್ನು ಹೊಗಲಾಡಿಸಬೇಕು’ ಎಂದು ಅವರು ಒತ್ತಾಯಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಕಂದಾಯ ಸಚಿವ ಆರ್‌.ಅಶೋಕ, ‘ವಿಜಯಪುರ ಜಿಲ್ಲೆಯಲ್ಲಿ 2021 ಮತ್ತು 2022ರಲ್ಲಿ ಭೂಕಂಪನ ಉಂಟಾಗಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಹಯೋಗದಲ್ಲಿ ರಾಷ್ಟ್ರಮಟ್ಟದ ಪ್ರತಿಷ್ಠಿತ ಸಂಸ್ಥೆಗಳ ವೈಜ್ಞಾನಿಕ ಅಧಿಕಾರಿಗಳ ತಂಡ ಜಿಲ್ಲೆಯ ಭೂಕಂಪನ ಪ್ರದೇಶಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಭೂಕಂಪಗಳ ಬಗ್ಗೆ ಅರಿವು ಮೂಡಿಸಿದೆ. ಮುಂದಿನ ದಿನಗಳಲ್ಲಿ ಭೂಕಂಪನ ಕುರಿತಂತೆ ಹೆಚ್ಚಿನ ಅಧ್ಯಯನ ನಡೆಸಲಾಗುವುದು’ ಎಂದು ಹೇಳಿದ್ದರು.

Published On - 8:33 am, Thu, 6 October 22