AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಸ್ವಚ್ಛತೆ ಹೊಣೆ ಎಸ್​ಡಿಎಂಸಿ ಸಮಿತಿಗೆ ನೀಡಲು ತೀರ್ಮಾನ, ಶೀಘ್ರದಲ್ಲೇ ಅಧಿಸೂಚನೆ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣಗಳು ಒಂದಾದ ಮೇಲೊಂದು ಬೆಳಕಿಗೆ ಬರುತ್ತಿವೆ. ಇದರಿಂದ ಎಚ್ಚೆತ್ತುಕೊಂಡು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಶಾಲೆ ಸ್ವಚ್ಛತೆ ಹೊಣೆ ಎಸ್​ಡಿಎಂಸಿ ಸಮಿತಿಗೆ ನೀಡಲು ತೀರ್ಮಾನ, ಶೀಘ್ರದಲ್ಲೇ ಅಧಿಸೂಚನೆ
ಶಿಕ್ಷಣ ಸಚಿವ ಮಧು ಬಂಗಾರಪ್ಪ
Basavaraj Yaraganavi
| Updated By: ರಮೇಶ್ ಬಿ. ಜವಳಗೇರಾ|

Updated on: Dec 29, 2023 | 5:23 PM

Share

ಶಿವಮೊಗ್ಗ, (ಡಿಸೆಂಬರ್ 29): ಬೆಂಗಳೂರು, ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆಗಳಲ್ಲಿ ಶಾಲೆ ಮಕ್ಕಳಿಂದ ಶೌಚಾಯಲ ಸ್ವಚ್ಛಗೊಳಿಸಿದ ಪ್ರಕರಣಗಳಿ ಬೆಳಕಿಗೆ ಬಂದಿವೆ. ಮತ್ತೊಂದೆಡೆ ಶಾಲೆಯಲ್ಲಿ ಸ್ವಚ್ಛ ಮಾಡುವವರಿಲ್ಲ ಎನ್ನುವ ಆರೋಪಗಳು ಶಿಕ್ಷಕರಿಂದ ಬಂದಿವೆ. ಇದರಿಂದ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ, ಶಾಲೆ ಸ್ವಚ್ಛಗೊಳಿಸುವ ಜವಾಬ್ದಾರಿಯನ್ನು ಎಸ್​ಡಿಎಂಸಿ ಸಮಿತಿಗೆ (SDMC committee) ನೀಡುವ ತೀರ್ಮಾನಕ್ಕೆ ಬಂದಿದೆ. ಈ ಸಂಬಂಧ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಶೌಚಾಲಯ ಸ್ವಚ್ಛತೆ ಜವಾಬ್ದಾರಿಯನ್ನು ಎಸ್‌ಡಿಎಂಸಿ ತೆಗೆದುಕೊಳ್ಳಬೇಕು. ಈ ಸಂಬಂಧ ಅಧಿಸೂಚನೆ ಹೊರಡಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಶಾಲೆಯಲ್ಲಿ ಸ್ವಚ್ಛತೆ ಕಾಪಾಡುವುದು ಕೇವಲ ಶಿಕ್ಷಕರ ಹೊಣೆಯಲ್ಲ. ಎಸ್‌ಡಿಎಂಸಿ ಸಹ ಜವಾಬ್ದಾರಿ ತೆಗೆದುಕೊಳ್ಳಬೇಕು. ಶಾಲೆಯ ಮಕ್ಕಳಿಂದ ಯಾವುದೇ ಕೆಲಸ ಮಾಡಿಸಬಾರದು. ಕೆಟ್ಟ ಕಲಸಗಳನ್ನು ಮಾಡಿದ ಇಲಾಖೆಗೆ, ರಾಜ್ಯಸರ್ಕಾರಕ್ಕೆ ಕೆಟ್ಟ ಹೆಸರು ಬರಲು ಕಾರಣವಾಗುತ್ತೆ. ಹೀಗಾಗಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಟಿವಿ9 ಇಂಪ್ಯಾಕ್ಟ್: ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ; ಶಿಕ್ಷಕ ಅಮಾನತ್ತು

ಮೊನ್ನೇ ಅಷ್ಟೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಕೀನ್ ಮಾಡಿಸಲಾಗಿತ್ತು. ಈ ಸಂಬಂಧ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆ ಮುಖ್ಯಗುರುಗಳನ್ನು ಸಸ್ಪೆಂಡ್ ಮಾಡಲಾಗಿದೆ.

ಇನ್ನು ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಯೊಂದರಲ್ಲೂ ಸಹ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಲಾಗಿತ್ತು. ಈ ಸಂಬಂಧ ತಪ್ಪಿಸ್ಥರನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಪ್ರಕರಣ ಸಹ ದಾಖಲಾಗಿದೆ.

ಹೀಗೆ ಮೇಲಿಂ ಮೇಲೆ ಇಂತಹ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ತಪಿಸ್ಥತ ಶಿಕ್ಷಕರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಸಂಘ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ, ಶಾಲೆಯಲ್ಲಿ ಸ್ವಚ್ಛಗೊಳಿಸುವ ಸಿಬ್ಬಂದಿ ಇಲ್ಲ. ಕೂಡಲೇ ಶಾಲೆಗಳಿಗೆ ಸ್ವಚ್ಛತೆ ಮಾಡುವವರನ್ನು ನೇಮಕ ಮಾಡಬೇಕೆಂದು ಮನವಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ