ಶಿವಮೊಗ್ಗ, (ಡಿಸೆಂಬರ್ 29): ಬೆಂಗಳೂರು, ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆಗಳಲ್ಲಿ ಶಾಲೆ ಮಕ್ಕಳಿಂದ ಶೌಚಾಯಲ ಸ್ವಚ್ಛಗೊಳಿಸಿದ ಪ್ರಕರಣಗಳಿ ಬೆಳಕಿಗೆ ಬಂದಿವೆ. ಮತ್ತೊಂದೆಡೆ ಶಾಲೆಯಲ್ಲಿ ಸ್ವಚ್ಛ ಮಾಡುವವರಿಲ್ಲ ಎನ್ನುವ ಆರೋಪಗಳು ಶಿಕ್ಷಕರಿಂದ ಬಂದಿವೆ. ಇದರಿಂದ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ, ಶಾಲೆ ಸ್ವಚ್ಛಗೊಳಿಸುವ ಜವಾಬ್ದಾರಿಯನ್ನು ಎಸ್‌ಡಿಎಂಸಿ ಸಮಿತಿಗೆ (SDMC committee) ನೀಡುವ ತೀರ್ಮಾನಕ್ಕೆ ಬಂದಿದೆ. ಈ ಸಂಬಂಧ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಶೌಚಾಲಯ ಸ್ವಚ್ಛತೆ ಜವಾಬ್ದಾರಿಯನ್ನು ಎಸ್‌ಡಿಎಂಸಿ ತೆಗೆದುಕೊಳ್ಳಬೇಕು. ಈ ಸಂಬಂಧ ಅಧಿಸೂಚನೆ ಹೊರಡಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಶಾಲೆಯಲ್ಲಿ ಸ್ವಚ್ಛತೆ ಕಾಪಾಡುವುದು ಕೇವಲ ಶಿಕ್ಷಕರ ಹೊಣೆಯಲ್ಲ. ಎಸ್‌ಡಿಎಂಸಿ ಸಹ ಜವಾಬ್ದಾರಿ ತೆಗೆದುಕೊಳ್ಳಬೇಕು. ಶಾಲೆಯ ಮಕ್ಕಳಿಂದ ಯಾವುದೇ ಕೆಲಸ ಮಾಡಿಸಬಾರದು. ಕೆಟ್ಟ ಕಲಸಗಳನ್ನು ಮಾಡಿದ ಇಲಾಖೆಗೆ, ರಾಜ್ಯಸರ್ಕಾರಕ್ಕೆ ಕೆಟ್ಟ ಹೆಸರು ಬರಲು ಕಾರಣವಾಗುತ್ತೆ. ಹೀಗಾಗಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಟಿವಿ9 ಇಂಪ್ಯಾಕ್ಟ್: ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ; ಶಿಕ್ಷಕ ಅಮಾನತ್ತು
ಮೊನ್ನೇ ಅಷ್ಟೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಕೀನ್ ಮಾಡಿಸಲಾಗಿತ್ತು. ಈ ಸಂಬಂಧ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆ ಮುಖ್ಯಗುರುಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಇನ್ನು ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಯೊಂದರಲ್ಲೂ ಸಹ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಲಾಗಿತ್ತು. ಈ ಸಂಬಂಧ ತಪ್ಪಿಸ್ಥರನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಪ್ರಕರಣ ಸಹ ದಾಖಲಾಗಿದೆ.
ಹೀಗೆ ಮೇಲಿಂ ಮೇಲೆ ಇಂತಹ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ತಪಿಸ್ಥತ ಶಿಕ್ಷಕರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಸಂಘ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ, ಶಾಲೆಯಲ್ಲಿ ಸ್ವಚ್ಛಗೊಳಿಸುವ ಸಿಬ್ಬಂದಿ ಇಲ್ಲ. ಕೂಡಲೇ ಶಾಲೆಗಳಿಗೆ ಸ್ವಚ್ಛತೆ ಮಾಡುವವರನ್ನು ನೇಮಕ ಮಾಡಬೇಕೆಂದು ಮನವಿ ಮಾಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ