AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Na D’Souza passes away: ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ

ಖ್ಯಾತ ಕನ್ನಡ ಸಾಹಿತಿ ಡಾ. ನಾ. ಡಿಸೋಜಾ ಅವರು ಇಂದು ಸಂಜೆ 7.50ಕ್ಕೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತೀವ್ರ ನಷ್ಟವಾಗಿದೆ.

Na D'Souza passes away: ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ
ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 05, 2025 | 10:11 PM

Share

ಶಿವಮೊಗ್ಗ, ಜನವರಿ 05: ಖ್ಯಾತ ಹಿರಿಯ ಸಾಹಿತಿ ಡಾ. ನಾ ಡಿಸೋಜ (Na D’Souza) ಅವರು ಇಂದು ಸಂಜೆ 7.50ಕ್ಕೆ ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾ.ಡಿಸೋಜ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ತೀವ್ರ ನಷ್ಟಉಂಟಾಗಿದೆ. ಗಣ್ಯರ ಅಗಲಿಕೆಗೆ ಹಲವರು ಸಂತಾಪ ಸೂಚಿಸಿದ್ದಾರೆ.

ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ನಾ.ಡಿಸೋಜ ಅವರ ಪುತ್ರ ನವೀನ್ ನಾ.ಡಿಸೋಜ ತಿಳಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಎಂಎಲ್​ಸಿ ಧನಂಜಯ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​​ ಹಂಚಿಕೆ

ಡಾ. ನಾರ್ಬಟ್ ಡಿಸೋಜರವರು 1937 ಜೂನ್ 6ರಂದು ಜನಿಸಿದರು. ತಂದೆ ಎಫ್.ಪಿ.ಡಿಸೋಜ, ತಾಯಿ ರೂಪಿನಾ ಡಿಸೋಜ. ನಾ.ಡಿಸೋಜರವರು ಈವರೆಗೆ 37 ಕಾದಂಬರಿಗಳು, ನಾಲ್ಕು ನಾಟಕಗಳು, ಇಪ್ಪತ್ತೆಂಟು ಮಕ್ಕಳ ಕೃತಿಗಳು ಸೇರಿದಂತೆ ನೂರಾರು ಕತೆಗಳನ್ನು ಬರೆದಿದ್ದಾರೆ.

ಇವರ ಕಾದಂಬರಿ ‘ಕಾಡಿನ ಬೆಂಕಿ’ ಹಾಗೂ ‘ದ್ವೀಪ’ ಚಲನಚಿತ್ರಗಳಾಗಿ ‘ರಜತಕಮಲ’ ಹಾಗೂ ‘ಸ್ವರ್ಣಕಮಲ’ ಪ್ರಶಸ್ತಿಗಳನ್ನು ಪಡೆದುಕೊಂಡಿವೆ. ‘ಬಳುವಳಿ’ ಕಾದಂಬರಿ ಕೊಂಕಣಿಯಲ್ಲಿ ಚಲನಚಿತ್ರವಾಗಿದೆ. ‘ಸಾರ್ಕ್’ ದೇಶಗಳ ಸಾಹಿತಿಗಳ ಸಮ್ಮೇಳನದಲ್ಲಿ ಸ್ವಂತ ಕಥಾವಾಚನ ಮಾಡಿದ್ದರು.

ಪ್ರಶಸ್ತಿಗಳು

ಇವರ ‘ಮುಳುಗಡೆಯ ಊರಿಗೆ ಬಂದವರು’ ಕಿರು ಕಾದಂಬರಿಗೆ 2011ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ ದೊರೆತಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗುಲ್ವಾಡಿ ವೆಂಕಟರಾವ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಂಗಳೂರು ಸಂದೇಶ ಪ್ರಶಸ್ತಿ, ನವದೆಹಲಿ ಕಥಾ ಪ್ರಶಸ್ತಿ, ಪುತ್ತೂರು ನಿರಂಜನ ಸಾಹಿತ್ಯ ಪ್ರಶಸ್ತಿ ಮುಂತಾದವುಗಳಿಂದ ಪುರಸ್ಕೃತರಾಗಿದ್ದಾರೆ. 2014ರ ಜನವರಿಯಲ್ಲಿ ಮಡಿಕೇರಿಯಲ್ಲಿ ನಡೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ

ನಾ.ಡಿಸೋಜ ಅವರದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ ಎರಡೂ ಒಂದೇ. ಬರೆದಂತೆ ಬದುಕಿದವರು, ಬದುಕಿದಂತೆ ಬರೆದವರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಶ್ರೀಯುತರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ‌ ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:50 pm, Sun, 5 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ