ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯತಿ ಸದಸ್ಯರ ನಡುವೆ ಹೊಡೆದಾಟ! ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

| Updated By: sandhya thejappa

Updated on: Jan 15, 2022 | 10:44 AM

ಸಭೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಗಲಾಟೆ ನಡೆದಿದೆ. ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡಯಿತು.

ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯತಿ ಸದಸ್ಯರ ನಡುವೆ ಹೊಡೆದಾಟ! ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು
ಗ್ರಾಮ ಪಂಚಾಯತಿ ಸದಸ್ಯರು ಹೊಡೆದಾಡಿಕೊಂಡಿದ್ದಾರೆ.
Follow us on

ಶಿವಮೊಗ್ಗ: ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯತಿ ಸದಸ್ಯರಿಬ್ಬರು ಹೊಡೆದಾಡಿಕೊಂಡಿದ್ದಾರೆ. ತೀರ್ಥಹಳ್ಳಿ (Thirthahalli) ತಾಲೂಕಿನ ಕೋಣಂದೂರಿನಲ್ಲಿ ಗುರುವಾರ ಬೆಳಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇಬ್ಬರು ಗ್ರಾಮ ಪಂಚಾಯತಿ ಸದಸ್ಯರು ಹೊಡೆದಾಡಿಕೊಂಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಓರ್ವರು ಗಂಭೀರ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಭೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಗಲಾಟೆ ನಡೆದಿದೆ. ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡಯಿತು. ಬಳಿಕ ಇಬ್ಬರು ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಸುರೇಶ್​ಗೆ ಗಂಭೀರ ಗಾಯವಾಗಿದೆ. ಸದ್ಯ ಸುರೇಶ್ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಕೋಣಂದೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು ದಾಖಲಾಗಿದೆ.

ಆಹಾರ ಇಲ್ಲದೆ ಕಂಗಾಲಾದ ಬೀದಿ ನಾಯಿಗಳು                                                                                                                                          ಗದಗದಲ್ಲಿ ಆಹಾರ ಇಲ್ಲದೆ ಬೀದಿ ನಾಯಿಗಳು ಕಂಗಾಲಾಗಿವೆ. ಪಂಡಿತ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದಲ್ಲಿ ಶ್ವಾನಗಳು ಆಹಾರಕ್ಕಾಗಿ ಗೋಳಾಟ ನಡೆಸುತ್ತಿವೆ. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಬಹುತೇಕ ಅಂಗಡಿಗಳು ಬಂದ್ ಆಗಿರುವುದರಿಂದ ಆಹಾರ ಸಿಗದೆ ಶ್ವಾನಗಳ ಪರದಾಡುತ್ತಿವೆ. ಸಾರಿಗೆ ಇಲಾಖೆ ಚಾಲಕ ಹಾಗೂ ಕಂಡಕ್ಟರ್​ಗಳು​ ಆಹಾರ ನಿಡಿ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ

OnePlus 9RT: ಭಾರತದಲ್ಲಿ ಒನ್​ಪ್ಲಸ್ 9RT ಸ್ಮಾರ್ಟ್​ಫೋನ್ ಬಿಡುಗಡೆ: ಈ ಫೋನ್ ಖರೀದಿಗೆ ಕ್ಯೂ ಗ್ಯಾರಂಟೆ

ಕೊವಿಡ್ 19 ರೋಗಿಗಳ ಚಿಕಿತ್ಸೆ ವಿಚಾರದಲ್ಲಿ ಮತ್ತೆ ಎಡವಬೇಡಿ; ಬ್ಲ್ಯಾಕ್ ಫಂಗಸ್​ ಭೀಕರತೆ ನೆನಪಿಸಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಆರೋಗ್ಯ ತಜ್ಞರು

Published On - 10:34 am, Sat, 15 January 22