ಶಿವಮೊಗ್ಗ: ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಹೆರಿಗೆ ವಾರ್ಡ್‌ನ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿದ್ದ ತಕ್ಷಣ ಇಬ್ಬರು ಬಾಣಂತಿಯರನ್ನು ಜಿಲ್ಲಾಸ್ಪತ್ರೆಯ ಬೇರೊಂದು ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಅವರನ್ನು ಜಿಲ್ಲಾ ಆಸ್ಪತ್ರೆಯ ಬೇರೊಂದು ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿದೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಅಸ್ವಸ್ಥರಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿನಂದಿಸುವ ಕಾರ್ಯ ಸಾಗಿದೆ.
ಘಟನೆಯಲ್ಲಿ ಅಸ್ವಸ್ಥರಾಗಿರುವ ಇಬ್ಬರು ಸೆಕ್ಯುರಿಟಿ ಸಿಬ್ಬಂದಿಯನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.
ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ಹೆರಿಗೆ ವಾರ್ಡ್‌ನ ಐಸಿಯುನಲ್ಲಿ ಅವಘಡ ನಡೆದಿದೆ. ಕೂಡಲೇ ಐಸಿಯುನಲ್ಲಿದ್ದ ಬಾಣಂತಿಯರ ಸ್ಥಳಾಂತರ ಮಾಡಲಾಗಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ, ಯಾರಿಗೂ ಭಯ ಬೇಡ. ಐಸಿಯು ಬಿಟ್ಟು ಹೆರಿಗೆ ವಾರ್ಡ್‌ನಲ್ಲಿ ಸಮಸ್ಯೆ ಆಗಿಲ್ಲ. ಎಸಿ ಮಿಷನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ನಡೆದಿದೆ ಎಂದು ಜಿಲ್ಲಾಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರನ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: Shimoga: ಹೆಂಡತಿಯೊಂದಿಗೆ ವಿಡಿಯೋ ಕಾಲ್ನಲ್ಲಿ ಮಾತನಾಡುವಾಗಲೇ ನೇಣಿಗೆ ಶರಣಾದ ಶಿವಮೊಗ್ಗ ಜೈಲಿನ ವಾರ್ಡರ್
ಇದನ್ನೂ ಓದಿ: ಶಿವಮೊಗ್ಗ: ಬೈಕ್- ಕೆಎಸ್ಆರ್ಟಿಸಿ ನಡುವೆ ಅಪಘಾತ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ
Published On - 10:16 pm, Sun, 7 November 21