ಇಬ್ಬರು ಮಕ್ಕಳು ಸೇರಿದಂತೆ ಐವರ ಮೇಲೆ ಹುಚ್ಚು ನಾಯಿ ದಾಳಿ: 6 ವರ್ಷದ ಬಾಲಕಿಗೆ ಗಂಭೀರ ಗಾಯ

6 ವರ್ಷದ ಮಗು ಸೇರಿದಂತೆ ಐವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಹೊಳೆಬೆಳಗಲು ಗ್ರಾಮದಲ್ಲಿ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಬೀದಿನಾಯಿಗಳ ದಾಳಿಯಿಂದ ಬಾಲಕಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಕರ್ನಾಟಕದ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ಘಟನೆ ನಡೆದಿದೆ.

ಇಬ್ಬರು ಮಕ್ಕಳು ಸೇರಿದಂತೆ ಐವರ ಮೇಲೆ ಹುಚ್ಚು ನಾಯಿ ದಾಳಿ: 6 ವರ್ಷದ ಬಾಲಕಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on:Sep 02, 2023 | 5:57 PM

ಶಿವಮೊಗ್ಗ, ಸೆಪ್ಟೆಂಬರ್​ 2: ಇಬ್ಬರು ಮಕ್ಕಳು ಸೇರಿದಂತೆ ಐವರ ಮೇಲೆ ಹುಚ್ಚು ನಾಯಿ (Dog) ದಾಳಿ ಮಾಡಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಹೊಳೆಬೆಳಗಲು ಗ್ರಾಮದಲ್ಲಿ ನಡೆದಿದೆ. ನಂಜುಂಡಪ್ಪ ಹಾಗೂ ವಾಣಿ ದಂಪತಿಯ 6 ವರ್ಷದ ಬಾಲಕಿ ಬೇಬಿ ಮೇಲೆ ನಾಯಿ ದಾಳಿ ಮಾಡಿದೆ. ಶಾಲೆ ಮುಗಿಸಿ ಬಾಲಕಿ ಮನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಬೇಬಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸದ್ಯ ಗಾಯಾಳು ಬಾಲಕಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಸಣ್ಣಪುಟ್ಟ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್​ ಆಗಿದ್ದಾರೆ. ಮಗುವಿನ ಪೋಷಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯತ್​ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿ ನಾಯಿ ಸೆರೆ ಹಿಡಿಯುವಂತೆ ಹೊಳೆಬೆಳಗಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬಾಲಕಿ ಮೇಲೆ ಎರಗಿದ ಬೀದಿ ನಾಯಿಗಳ ಹಿಂಡು: ಗಂಭೀರ ಗಾಯ

ಆನೇಕಲ್: ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕಿ ಗಂಭೀರ ಗಾಯಗೊಂಡಿರುವಂತಹ ಘಟನೆ ಕರ್ನಾಟಕದ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ.

ಇದನ್ನೂ ಓದಿ: Sidlaghatta KRIDL Scam: ಪಂಚಾಯತ್‌ರಾಜ್ ಇಲಾಖೆಯಲ್ಲಿ ಬಗೆದಷ್ಟೂ ಬಯಲಾಗ್ತಿದೆ ಹಗರಣ, ಕಾಮಗಾರಿ ಮಾಡದೆಯೇ ಬಿಲ್ ಡ್ರಾ ಮಾಡಿ ಅವ್ಯವಹಾರ ಆರೋಪ

ನಾಯಿ ದಾಳಿ ವೇಳೆ ಕಿರುಚಾಟ ಕೇಳಿ ಬಾಲಕಿಯನ್ನ ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಗಂಭೀರ ಗಾಯಾಳು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೀದಿ ನಾಯಿಗಳ ದಾಳಿ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ.

ಐವರು ಪ್ರವಾಸಿಗರ ಮೇಲೆ ಹುಚ್ಚು ನಾಯಿ ದಾಳಿ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ನ ಬೃಂದಾವನದಲ್ಲಿ ಹುಚ್ಚುನಾಯಿ ಹಾವಳಿ ಹೆಚ್ಚಳವಾಗಿದ್ದು, ಬೃಂದಾವನ ವೀಕ್ಷಣೆಗೆ ಬಂದಿದ್ದ ಐವರು ಪ್ರವಾಸಿಗರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿ ಕಚ್ಚಿದೆ. ಹುಚ್ಚು ನಾಯಿ ದಾಳಿಗೆ ಸಿಲುಕಿದ ಐವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.  ಬೃಂದಾವನ ಅಧಿಕಾರಿಗಳ ವಿರುದ್ದ ಪ್ರವಾಸಿಗರು ಆಕ್ರೋಶ ಹೊರಹಾಕಿದ್ದಾರೆ.

ರಸ್ತೆ ಬದಿ‌ ಮಲಗಿದ್ದ ಮೂರು ಶ್ವಾನಗಳ‌ ಮೇಲೆ ಹಾಯ್ದ ಅಪರಿಚಿತ ವಾಹನ

ದಾವಣಗೆರೆ: ರಸ್ತೆ ಬದಿ‌ ಮಲಗಿದ್ದ ಶ್ವಾನಗಳನ ಮೇಲೆ ವ್ಯಕ್ತಿಯೊಬ್ಬ ಕಾರು ಚಲಾಯಿಸಿಕೊಂಡು ಹೋಗಿರುವಂತಹ ಘಟನೆ ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕರೇಕಟ್ಟೆ ಗ್ರಾಮದ ಜಂಬಣ್ಣ ವೃತ್ತದ ಬಳಿ ನಡೆದಿತ್ತು. ಒಂದು ಶ್ವಾನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೇರಡು ಶ್ವಾನಗಳಿಗೆ ಸ್ಥಳೀಯರಿಂದ ಚಿಕಿತ್ಸೆ ನೀಡಲಾಗಿತ್ತು.

ಶ್ವಾನಗಳ ಮೇಲೆ ಅಪರಿಚಿತ ವಾಹನ ಹಾಸಿದ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅಮಾನವೀಯವಾಗಿ ವರ್ತಿಸಿ ಶ್ವಾನಗಳ ಸಾವುಗೆ ಕಾರಣನಾದ ಕಾರ್ ಚಾಲಕನ ಪತ್ತೆಗೆ ಗ್ರಾಮಸ್ಥರು ಆಗ್ರಹಿಸಿದ್ದರು. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:49 pm, Sat, 2 September 23

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್