Shivamogga: ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ಐವರಿಗೆ ಚಾಕು ಇರಿತ

ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಹೊಡೆಯುವ ವಿಚಾರವಾಗಿ 2 ಕೋಮಿನ ಗುಂಪು ನಡುವೆ ನಡುವೆ ವಾಗ್ವಾದ ನಡೆದಿದೆ. ಇದರ ಬೆನ್ನಲ್ಲೇ ಇದೇ ಶಿವಮೊಗ್ಗದ ನಗರದಲ್ಲಿ ತಡರಾತ್ರಿ ಗುಂಪು ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಐವರಿಗೆ ಚಾಕುವಿನಿಂದ ಇರಿಯಲಾಗಿದೆ.

Shivamogga: ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ಐವರಿಗೆ ಚಾಕು ಇರಿತ
ಸಾಂದರ್ಭಿಕ ಚಿತ್ರ
Follow us
Basavaraj Yaraganavi
| Updated By: ರಮೇಶ್ ಬಿ. ಜವಳಗೇರಾ

Updated on:Sep 22, 2023 | 9:38 AM

ಶಿವಮೊಗ್ಗ, (ಸೆಪ್ಟೆಂಬರ್ 22): ಹಳೇ ವೈಷಮ್ಯದ ಗುಂಪು ಗಲಾಟೆಯಲ್ಲಿ ಐವರಿಗೆ ಚಾಕು ಇರಿದಿರುವ ಘಟನೆ ಶಿವಮೊಗ್ಗದ (Shivamogga) ದ್ರೌಪದಮ್ಮ ಸರ್ಕಲ್​ನಲ್ಲಿ ಸೆಪ್ಟೆಂಬರ್ 21ರ ತಡರಾತ್ರಿ ನಡೆದಿದೆ. ಪವನ್ ಹಾಗೂ ಕಿರಣ್ ಎನ್ನುವರ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಐವರಿಗೆ ಚಾಕು ಇರಿದಿದ್ದಾರೆ. ಹಲ್ಲೆಗೊಳಗಾದವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ 2 ಕೋಮಿನ ಗುಂಪು ನಡುವೆ ವಾಗ್ವಾದ

ಮತ್ತೊಂದೆಡೆ ಕೇಸರಿ ಪಡೆ ಗಣೇಶ ವಿಸರ್ಜನೆ (Ganesha Visarjane) ಮೆರವಣಿಗೆ ವೇಳೆ ಪಟಾಕಿ ಹೊಡೆಯುವ ವಿಚಾರವಾಗಿ ಎರಡು ಕೋಮಿನ ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಶಿವಮೊಗ್ಗದ (Shivamogga) ಟ್ಯಾಂಕ್ ಮೊಹಲ್ಲಾ ಪ್ರಾರ್ಥನಾ ಮಂದಿರದ ಬಳಿ ಘಟನೆ ನಡೆದಿದೆ. ಎರಡು ಕೋಮಿನ ಗುಂಪು ನಡುವೆ ಮಾತಿನ ಚಕಮಕಿ ಶುರುವಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಎಸ್‌ಪಿ ಮಿಥುನ್ ಕುಮಾರ್ ಪರಿಸ್ಥಿತಿ ತಿಳಿಗೊಳಿಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:12 am, Fri, 22 September 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ