ರಾಜ್ಯದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆ ಆಗಲಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಕೇಂದ್ರದಿಂದ ಪತ್ರ ಬರೆದಿದೆ. ಹುಬ್ಬಳ್ಳಿ, ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಜಾಗ ಗುರುತಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.

ರಾಜ್ಯದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆ ಆಗಲಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 10, 2022 | 4:43 PM

ಶಿವಮೊಗ್ಗ: ರಾಜ್ಯದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ (Forensic science laboratory) ಸ್ಥಾಪನೆ ಆಗಲಿದೆ ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದರು. ಈ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಕೇಂದ್ರದಿಂದ ಪತ್ರ ಬರೆದಿದೆ. ಹುಬ್ಬಳ್ಳಿ, ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಜಾಗ ಗುರುತಿಸುವ ಪ್ರಯತ್ನ ನಡೆದಿದೆ. ಶಿವಮೊಗ್ಗದಲ್ಲಿ ಎಫ್​ಎಸ್​ಎಲ್​​ ಲ್ಯಾಬ್ ಸ್ಥಾಪನೆ ಆಗಲಿದೆ ಎಂದು ಹೇಳಿದರು. ಭೂತಾನ್ ಚೀನಾ ಪಕ್ಕದಲ್ಲಿದೆ. ಕೆಲವೊಂದು ಕಾರಣಕ್ಕೆ ಅದರ ಜೊತೆ ವ್ಯಾಪಾರ ಮಾಡುವ ಅಗತ್ಯ ಇದೆ. ಸರ್ಕಾರ ಬದಲಾದಾಗ ಆ ದೇಶದೊಂದಿಗೆ ಮಾಡಿಕೊಂಡ ಒಪ್ಪಂದ ಬದಲಾಗುವುದಿಲ್ಲ. ಆ ದೇಶದಿಂದ ಕೇವಲ ಹಸಿ ಅಡಕೆ ಮಾತ್ರ ಬರಲಿದೆ. ಅದು ಸಮುದ್ರ ಮಾರ್ಗವಾಗಿ ಮಾತ್ರ ಬರಬೇಕಿದೆ. ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಹೇಳಿದರು.

ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿಯಾಗಿ ಕೆಲವರು ರೈತರನ್ನು ಶೋಷಣೆ ಮಾಡಲು ಯತ್ನಿಸುತ್ತಿದ್ದಾರೆ. ಎಲೆ ಚುಕ್ಕಿ ರೋಗ ಸಹ ಅಡಕೆ ರೈತರಿಗೆ ಮಾರಕವಾಗುತ್ತಿದೆ. ಅದಕ್ಕಾಗಿ ಸರ್ಕಾರ 8 ಪರಿಹಾರ ನೀಡಲು ಮುಂದಾಗಿದೆ. ಇದರಿಂದ ಸಣ್ಣ ರೈತರಿಗೆ ಅನುಕೂಲವಾಗಲಿದೆ. ಅಗತ್ಯ ಬಿದ್ದರೆ ಪರಿಹಾರ ಪ್ರಮಾಣ ಹೆಚ್ಚಳಕ್ಕೆ ಸರ್ಕಾರ ಗಮನ ಹರಿಸಲಿದೆ. ಸಾಮಾನ್ಯ ಪೇದೆ ನೇಮಕ ಸಂಬಂಧ ವಯೋಮಿತಿ ಕಡಿಮೆ ಮಾಡಲು ಸಾಧ್ಯವಿಲ್ಲ. ಭಾರತ್ ಜೋಡೋ ಯಾತ್ರೆಯಿಂದ ಬಿಜೆಪಿಗೆ ಏನೂ ನಷ್ಟವಿಲ್ಲ. ಉತ್ತರ ಭಾರತದಲ್ಲಿ ನೆಲೆಕಳೆದುಕೊಂಡಿರುವ ಕಾಂಗ್ರೆಸ್‌ ಇಲ್ಲಿ ತನ್ನ ಅಸ್ತಿತ್ವಕ್ಕೆ ಹುಡುಕಾಡುತ್ತಿದೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಭೂತಾನ್​ನಿಂದ ಅಡಿಕೆ ಆಮದು

ಕೇಂದ್ರ ಸರ್ಕಾರವು ಭೂತಾನ್​ನಿಂದ 17,000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ನಿರ್ಣಯ ತೆಗೆದುಕೊಂಡಿರುವುದು ಭಾರತದ ಪ್ರಮುಖ ಅಡಿಕೆ ಬೆಳೆಯುವ ರಾಜ್ಯವಾದ ಕರ್ನಾಟಕದಲ್ಲಿ ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದೆ. ‘ಸರ್ಕಾರವು ವ್ಯಾಪಾರಿಗಳು ಹಾಗೂ ಉದ್ಯಮಿಗಳ ಲಾಬಿಗೆ ಮಣಿದು ಬೆಳಗಾರರ ಹಿತಾಸಕ್ತಿಯನ್ನು ಬಲಿಕೊಟ್ಟಿದೆ’ ಎಂದು ‘ಅಡಿಕೆ ಪತ್ರಿಕೆ’ಯ ಸಂಪಾದಕ ಹಾಗೂ ಬೆಳಗಾರ ಶ್ರೀಪಡ್ರೆ ಆಕ್ಷೇಪಿಸಿದ್ದಾರೆ. ಆದರೆ ಸ್ವತಃ ಅಡಿಕೆ ಬೆಳೆಗಾರರೂ ಆಗಿರುವ ಹಾಗೂ ಅಡಿಕೆ ಬೆಳೆಯುವ ಪ್ರದೇಶವನ್ನೇ ಪ್ರತಿನಿಧಿಸುವ ಹಾಗೂ ಅಡಿಕೆ ಕಾರ್ಯಪಡೆಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ‘ಕೇಂದ್ರದ ನಿರ್ಧಾರದಿಂದ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ’ ಎಂದು ಆರಗ ಜ್ಞಾನೇಂದ್ರ ಪತ್ರಿಕಾ ಹೇಳಿಕೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

‘ಭೂತಾನ್​ನಿಂದ ಹಸಿ ಅಡಿಕೆ ಆಮದಿಗೆ ಕೇಂದ್ರ ಸರ್ಕಾರವು ತೆಗೆದುಕೊಂಡಿರುವ ನಿರ್ಧಾರದಿಂದ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಭೂತಾನ್​ಗೆ ಅಡಕೆ ಉತ್ಪನ್ನಗಳು ಆಮದಿಗಿಂತ ಹೆಚ್ಚು ರಫ್ತು ಆಗುತ್ತಿದೆ. ಭೂತಾನ್​ನಿಂದ ಕೇವಲ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಮಾತ್ರವೇ ಅನುಮತಿ ನೀಡಲಾಗಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ’ ಎಂದು ಹೇಳಿದ್ದಾರೆ.

ಕನಿಷ್ಠ ಬೆಲೆ ಷರತ್ತಿಲ್ಲದ ಆಮದು

ಭೂತಾನ್​ನಿಂದ ಪ್ರತಿ ವರ್ಷ ಕನಿಷ್ಠ ಆಮದು ಬೆಲೆ (Minimum Import Price – MIP) ಷರತ್ತು ಇಲ್ಲದಂತೆ 17,000 ಟನ್ ಅಡಿಕೆ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರವು ಕಳೆದ ಬುಧವಾರ (ಸೆ 28) ಅನುಮತಿ ನೀಡಿತ್ತು. 2017ರಲ್ಲಿ ದೇಶದ ರೈತರ ಆರ್ಥಿಕ ಹಿತ ಕಾಪಾಡಲೆಂದು ಪ್ರತಿ ಹಸಿ ಅಡಿಕೆಗೆ ₹ 251 ಎಂಐಪಿ ವಿಧಿಸಲಾಗಿತ್ತು. ಆದರೆ ಈ ಬಾರಿ ಎಂಐಪಿ ನಿರ್ಬಂಧಕ್ಕೂ ವಿನಾಯ್ತಿ ನೀಡಿ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿರುವುದು ಬೆಳೆಗಾರರಲ್ಲಿ ಆತಂಕ ಹುಟ್ಟುಹಾಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:32 pm, Mon, 10 October 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ