ಅರಣ್ಯವೇ ಇಲ್ಲದ ಪ್ರದೇಶದಿಂದ ಬಂದವರು ಅರಣ್ಯ ಸಚಿವರಾಗಿದ್ದಾರೆ: ಈಶ್ವರ ಖಂಡ್ರೆ ವಿರುದ್ಧ ಆರಗ ಜ್ಞಾನೇಂದ್ರ ವಾಗ್ದಾಳಿ

| Updated By: ವಿವೇಕ ಬಿರಾದಾರ

Updated on: Aug 02, 2023 | 2:34 PM

ಅರಣ್ಯವೇ ಇಲ್ಲದ ಪ್ರದೇಶದಿಂದ ಬಂದವರು ಅರಣ್ಯ ಸಚಿವರಾಗಿದ್ದಾರೆ. ಇದು ನಮ್ಮ ರಾಜ್ಯದ ದುರಂತ. ಮರ ಅಂದರೆ ಏನು, ನೆರಳು ಅಂದರೆ ಏನು ಎಂಬುವುದೇ ಗೊತ್ತಿಲ್ಲ. ಪಶ್ಚಿಮ ಘಟ್ಟದವರ ಸಮಸ್ಯೆ ಬಗ್ಗೆ ಸಚಿವ ಈಶ್ವರ ಖಂಡ್ರೆಗೆ ಅರಿವಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ವಾಗ್ದಾಳಿ ಮಾಡಿದರು.

ಅರಣ್ಯವೇ ಇಲ್ಲದ ಪ್ರದೇಶದಿಂದ ಬಂದವರು ಅರಣ್ಯ ಸಚಿವರಾಗಿದ್ದಾರೆ: ಈಶ್ವರ ಖಂಡ್ರೆ ವಿರುದ್ಧ ಆರಗ ಜ್ಞಾನೇಂದ್ರ ವಾಗ್ದಾಳಿ
ಶಾಸಕ ಆರಗ ಜ್ಞಾನೇಂದ್ರ (ಎಡಚಿತ್ರ) ಸಚಿವ ಈಶ್ವರ ಖಂಡ್ರೆ (ಬಲಚಿತ್ರ)
Follow us on

ಶಿವಮೊಗ್ಗ: ಅರಣ್ಯವೇ ಇಲ್ಲದ ಪ್ರದೇಶದಿಂದ ಬಂದವರು ಅರಣ್ಯ (Forest) ಸಚಿವರಾಗಿದ್ದಾರೆ. ಇದು ನಮ್ಮ ರಾಜ್ಯದ ದುರಂತ. ಮರ ಅಂದರೆ ಏನು, ನೆರಳು ಅಂದರೆ ಏನು ಎಂಬುವುದೇ ಗೊತ್ತಿಲ್ಲ. ಪಶ್ಚಿಮ ಘಟ್ಟದವರ ಸಮಸ್ಯೆ ಬಗ್ಗೆ ಸಚಿವ ಈಶ್ವರ ಖಂಡ್ರೆಗೆ (Eshwara Khandre) ಅರಿವಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ (Araga Jnanendra) ವಾಗ್ದಾಳಿ ಮಾಡಿದರು. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ತೀರ್ಥಹಳ್ಳಿಯ ತಾಲೂಕು ಕಚೇರಿ ಎದುರು ಮಾಜಿ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಅವರು ಉತ್ತರ ಕರ್ನಾಟಕ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ನೋಡಿದರೆ ಅಲ್ಲಿನವರ ಸ್ಥಿತಿ ಗೊತ್ತಾಗುತ್ತೆ. ಖಂಡ್ರೆ ತಲೆ ಕೂದಲಿನಿಂದ ಮುಚ್ಚಿಕೊಂಡಿದ್ದರಿಂದ ಉಳಿದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಆರಗ ಜ್ಞಾನೇಂದ್ರ ರಾಜ್ಯದ ಜನರಿಗೆ ಅಪಮಾನ ಮಾಡಿದ್ದಾರೆ

ಜಾತಿವಾದಿ, ಜನಾಂಗೀಯವಾದಿ ಬಿಜೆಪಿಯವರು ಕಲ್ಯಾಣ ಕರ್ನಾಟಕದವರನ್ನು ಅವಮಾನ ಮಾಡುವುಷ್ಟೇ ಅಲ್ಲದೆ, ರಾಜ್ಯದ ಜನರಿಗೆ ಆರಗ ಜ್ಞಾನೇಂದ್ರ ಅಪಮಾನ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಪಕ್ಷಾತೀತವಾಗಿ ಎಲ್ಲರೂ ಗೌರವ ಇಟ್ಟುಕೊಂಡಿದ್ದಾರೆ. ಆರಗ ಜ್ಞಾನೇಂದ್ರ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಹೇಳಿಕೆ ನೀಡಿದ್ದಾರೆ. ಆರಗ ಜ್ಞಾನೇಂದ್ರ ವಿರುದ್ಧ ಕಾನೂನು ರೀತಿಯ ಕ್ರಮ ಆಗಬೇಕು. ಆರಗರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ದೆಹಲಿಯಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಇದನ್ನೂ ಓದಿ: ಶಿವಮೊಗ್ಗ ಜನರ ಮೊಗದಲ್ಲಿ ಮೂಡಿದ ಸಂತಸ: ವಿಐಎಸ್​ಎಲ್​​​ ಪುನರಾರಂಭಕ್ಕೆ ಕೇಂದ್ರ ಒಪ್ಪಿಗೆ

ಏನದು ಈಶ್ವರ್​ ಖಂಡ್ರ ಹೇಳಿಕೆ

ಕಸ್ತೂರಿ ರಂಗನ್ ವರದಿ ಜಾರಿಗೆ ಬದ್ಧ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದರು. ಸಚಿವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ವರದಿ ಜಾರಿಯಾದರೆ ಗ್ರಾಮೀಣ ಭಾಗದ ಜನರ ಬದುಕಿಗೆ ತೀವ್ರ ಸಂಕಷ್ಟ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ವರದಿಯನ್ನು ಜಾರಿಗೊಳಿಸಬಾರದು ಎಂದು ಆಗ್ರಹ ಕೇಳಿಬರುತ್ತಿದೆ. ಈ ಸಂಬಂಧ ಮಂಗಳವಾರ ಬಿಜೆಪಿ ತೀರ್ಥಹಳ್ಳಿ ತಾಲೂಕು ಕಚೇರಿ ಎದರು ಪ್ರತಿಭಟನೆ ನಡೆಸಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ