ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ ಕುಸಿದ ಎಲ್ಇಡಿ ಬೋರ್ಡ್, ನಾಲ್ವರಿಗೆ ಗಾಯ

| Updated By: ರಮೇಶ್ ಬಿ. ಜವಳಗೇರಾ

Updated on: Apr 15, 2024 | 7:29 PM

ಗೀತಾ ಶಿವಕುಮಾರ್ ಕುಮಾರ್ ಅವರು ಈ ಬಾರಿ ಮತ್ತೊಮ್ಮೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು, ಆದ್ರೆ, ಅವರ ರ್ಯಾಲಿ ವೇಳೆ ಒಂದು ಅವಘಡ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ ಕುಸಿದ ಎಲ್ಇಡಿ ಬೋರ್ಡ್, ನಾಲ್ವರಿಗೆ ಗಾಯ
Follow us on

ಶಿವಮೊಗ್ಗ, (ಏಪ್ರಿಲ್ 15): ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ರ‍್ಯಾಲಿ ವೇಳೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಶಿವಮೊಗ್ಗ (Shivamogga) ನಗರದ ಗಾಂಧಿ ಬಜಾರ್‌ನಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಭಾರಿ ಗಾತ್ರದ ಗಾತ್ರದ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ಖಾಸಗಿ ನ್ಯೂಸ್‌ ಚಾನೆಲ್‌ ವರದಿಗಾರ, ಮಹಿಳೆ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಈ ಪೈಕಿ ಮೆರವಣಿಗೆಗೆ ಬಂದಿದ್ದ ವ್ಯಕ್ತಿಗೆ ತೀವ್ರವಾಗಿ ಪೆಟ್ಟಾಗಿದ್ದು, ಸ್ಥಳೀಯುರ ಗಾಯಾಳುಗಳಿಗೆ ಆರೈಕೆ ಮಾಡಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಇನ್ನು ಗಾಯಾಳುಗಳನ್ನು ಕಂಡು ಕಾಣದಂತೆ ಕಾಂಗ್ರೆಸ್ ಮುಖಂಡರು ತೆರಳಿದ್ದಾರೆ ಎಂದು ಆರೋಪಗಳು ಕೇಳಿಬಂದಿದೆ.

ಏಕಾಏಕಿ ಕುಸಿದು ಭಾರಿ ಗಾತ್ರದ ಗಾತ್ರದ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಬಿದ್ದಿದ್ದು, ಇದರಿಂದ ಮೆರವಣಿಗೆಗೆ ಆಗಮಿಸಿದ ವ್ಯಕ್ತಿಗೆ ತೀವ್ರವಾಗಿ ಪೆಟ್ಟು ಬಿದ್ದು, ತಲೆಯಿಂದ ರಕ್ತ ಸುರಿದಿದೆ. ಕಣ್ಣೆದುರೇ ಅನಾಹುತ ಸಂಭವಿಸಿದರೂ ಕ್ಯಾರೆ ಎನ್ನದೆ ಕಾಂಗ್ರೆಸ್ ಮುಖಂಡರು ಮುಂದೆ ತೆರಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳೀಯರು ಗಾಯಾಳುಗಳನ್ನು ಆರೈಕೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಎಲ್‌ಇಡಿ ಬೋರ್ಡ್‌ ಅಳವಡಿಸಿದ್ದ ವ್ಯಕ್ತಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Shivarajkumar Net Worth: ಶಿವರಾಜ್​ಕುಮಾರ್ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು, ಸಾಲ ಎಷ್ಟು? ಗೀತಾ ಅಫಿಡವಿಟ್​ನಲ್ಲಿದೆ ಮಾಹಿತಿ

ಘಟನೆಯಲ್ಲಿ ಭದ್ರಾವತಿ ತಾಲ್ಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಅವರಿಗೆ ಸಹ ಗಾಯವಾಗಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಸಚಿವ ಮಧುಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಶಿವಮೊಗ್ಗ ಲೋಕಸಭಾ (Shivamogga Loksabha) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ನಾಮಪತ್ರ (Nomination) ಸಲ್ಲಿಸಿದರು. ಇಂದು (ಏಪ್ರಿಲ್ 15) ತಮ್ಮ ಅಪಾರ ಬೆಂಬಲರೊಂದಿಗೆ ಮೆರವಣಿಗೆ ಮೂಲಕ ತೆರಳಿ ಶಿವಮೊಗ್ಗ (Shivamogga) ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಇನ್ನು ಗೀತಾ ನಾಮಪತ್ರ ಸಲ್ಲಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅರ್ಜೆಂಟ್ ಅರ್ಜೆಂಟ್​ ಆಗಿ ಓಡೋಡಿ ಜಿಲ್ಲಾಧಿಕಾರಿ ಕಚೇರಿ ಆಗಮಿಸಿದರು. ಗೀತಾ ಶಿವರಾಜ್ ಕುಮಾರ್​​ ಅವರು ಡಿಕೆ ಶಿವಕುಮಾರ್ ಅವರ ರಾಜಕೀಯ ಗುರು ಎಸ್ ಬಂಗಾರಪ್ಪ ಪುತ್ರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನಾಮಪತ್ರ ಸಲ್ಲಿಕೆ ವೇಳೆ ಇರಬೇಕೆಂದು ಡಿಕೆ ಶಿವಕುಮಾರ್ ಓಡೋಡಿ ಬಂದಿದ್ದಾರೆ. ಬಳಿಕ ಎಲ್ಲರು ಒಟ್ಟಿಗೆ ಸೇರಿ ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:28 pm, Mon, 15 April 24