ತುಂಗಾ ಜಲಾಶಯ ಸಂಪೂರ್ಣ ಭರ್ತಿ, ಮೈದುಂಬಿ ಧುಮುಕುತ್ತಿರುವ ಜೋಗ್ ಫಾಲ್ಸ್

ಕರ್ನಾಟಕದಲ್ಲಿ ಮುಂಗಾರು ಮಳೆ ಭರ್ಜರಿ ಆರಂಭವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಎಡಬಿಡದೇ ಮಳೆ ದೋ ಅಂತ ಸುರಿಯುತ್ತಿದೆ. ಇನ್ನು ಮೊದಲ ಮುಂಗಾರು ಮಳೆಗೆ ಶಿವಮೊಗ್ಗದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮತ್ತೊಂದೆಡೆ ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ ಜೀವ ಕಳೆ ಬಂದಿದ್ದು, ಮೈದುಂಬಿ ಧುಮುಕುತ್ತಿದೆ.

ತುಂಗಾ ಜಲಾಶಯ ಸಂಪೂರ್ಣ ಭರ್ತಿ, ಮೈದುಂಬಿ ಧುಮುಕುತ್ತಿರುವ ಜೋಗ್ ಫಾಲ್ಸ್
ತುಂಗಾ ಜಲಾಶಯ, ಜೋಗ ಜಲಪಾತ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jun 27, 2024 | 3:28 PM

ಶಿವಮೊಗ್ಗ, (ಜೂನ್ 27): ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮಲೆನಾಡಿನ ಕೆಲಭಾಗದಲ್ಲಿ ಅಂದರೆ ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗಾಜನೂರು ಡ್ಯಾಂ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗಿದೆ. ಇಂದು (ಜೂನ್ 27) ತುಂಗಾ ಜಲಾಶಯದಿಂದ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಜಲಾಶಯದಿಂದ 5 ಸಾವಿರ ಕ್ಯೂಸೆಕ್ ನೀರು ಪವರ್ ಪ್ಯಾಂಟ್​ಗೆ ಬಿಡುಗಡೆ ಮಾಡಲಾಗಿದ್ದರೆ, ಎರಡು ಗೇಟ್ ಮೂಲಕ 1 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಬಿಡಲಾಗಿದೆ. ಸದ್ಯ ತುಂಗಾ ಜಲಾಶಯಕ್ಕೆ 6 ಸಾವಿರ ಕ್ಯೂಸೆಕ್ ನೀರು ಒಳ ಹರಿವು ಇದೆ. ಆ ಒಳ ಹರಿವಿನಷ್ಟೇ ನೀರನ್ನ ಜಲಾಶಯದಿಂದ ಹೊರ ಬಿಡಲಾಗಿದೆ. ಕಳೆದ ಒಂದು ವಾರದಿಂದ ಸುರಿದ ಉತ್ತಮ ಮಳೆಯಿಂದ 588.24 ಅಡಿಯಷ್ಟು ನೀರು ಸಂಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡಲಾಗಿದೆ. ಒಳಹರಿವು ಹೆಚ್ಚಾದರೆ ಹೊರ ಹರಿವನ್ನು ಕೂಡ ಹೆಚ್ಚಳ ಮಾಡಲಾಗುವುದು ಎಂದು ನದಿಪಾತ್ರದ ಜನರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಮಳೆ..ಮಳೆ..ಕರಾವಳಿ ಭಾಗಕ್ಕೆ ರೆಡ್​, ಮಲೆನಾಡಿಗೆ ಆರೆಂಜ್ ಅಲರ್ಟ್: ಬೆಂಗಳೂರಿನಲ್ಲಿ ವಾತಾವರಣ ಬದಲಾವಣೆ

ತುಂಗಾ ಜಲಾಶಯದ ಬಗ್ಗೆ ತಿಳಿದುಕೊಳ್ಳಿ

588.24 ಮೀಟರ್ ಎತ್ತರ ಹೊಂದಿರುವ ಈ ಜಲಾಶಯ 1.50 ಟಿಎಂಸಿ ಡೆಡ್ ಸ್ಟೋರೇಜ್ ಇದೆ. ಇನ್ನು 3.24 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಅಣೆಕಟ್ಟೆಗೆ 21 ಕ್ರಸ್ಟ್ ಗೇಟುಗಳು ಇವೆ. ಅತಿ ಚಿಕ್ಕ ಜಲಾಶಯವಾಗಿರುವುದರಿಂದ ಕರ್ನಾಟಕದಲ್ಲೇ ಮೊದಲು ತುಂಬುವ ಅಣೆಕಟ್ಟು ಎಂಬ ಖ್ಯಾತಿ ಹೊಂದಿರುವ ಈ ಜಲಾಶಯ ಹೊಂದಿದ್ದು, ಈ ಜಲಾಶಯದಿಂದಲೇ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತದೆ.

ಈ ಅಣೆಕಟ್ಟಿಯ ಎಡ ಮತ್ತು ಬಲ ಕಾಲುವೆಯ ಮೂಲಕ ಶಿವಮೊಗ್ಗ ತಾಲೂಕು ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿಗೂ ನೀರು ಹರಿಸಲಾಗುತ್ತದೆ. ತುಂಗಾ ಮೇಲ್ದಂಡೆ ಯೋಜನೆಯ ಮೂಲಕ ಶಿವಮೊಗ್ಗ, ಹೊನ್ನಾಳಿ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿಗಳಿಗೆ ನೀರು ಹರಿಸಲಾಗುತ್ತದೆ.

ಮೈದುಂಬಿ ಧುಮುಕುತ್ತಿರುವ ಜೋಗ

ಇನ್ನು ಬೇಸಿಗೆ ಕಾಲದಲ್ಲಿ ನೀರಿಲ್ಲದೇ ಬತ್ತಿ ಹೋಗಿದ್ದ ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ ಇದೀಗ ಜೀವ ಕಳೆಬಂದಿದೆ. ಹೌದು…ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಶಿವಮೊಗ್ಗದ ಸಾಗರ ತಾಲೂಕಿನ ಜೋಗ್ ಫಾಲ್ಸ್ ಮೈದುಂಬಿ ಧುಮುಕುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ