ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಸಿಎಂ ಬೊಮ್ಮಾಯಿಯವರಿಂದ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ

ವೈಯಕ್ತಿಕ ಲಾಭಕ್ಕಾಗಿ ಸರಕಾರಿ ನೌಕರರು ಕೆಲಸ ಮಾಡಬಾರದು. ಕಾನೂನೂ ಬದ್ಧವಾಗಿ ಕೆಲಸ ಮಾಡಬೇಕು. ಬಡವರ ಪರವಾಗಿ ನೀವು ಕೆಲಸ ಮಾಡಬೇಕು. ಶ್ರೀಮಂತರ ಪರವಾಗಿ ಕೆಲಸ ಮಾಡಬಾರದು. ಸರಕಾರಿ ನೌಕರರು ಮತ್ತು ಅಧಿಕಾರಿಗಳು ಫೈಲ್ ಗಳನ್ನು ಕೂಲಂಕುಷವಾಗಿ ಪರಿಶೀಲನೆ ಮಾಡಬೇಕು -ಸಿಎಂ ಬೊಮ್ಮಾಯಿ

ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಸಿಎಂ ಬೊಮ್ಮಾಯಿಯವರಿಂದ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ
ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಸಿಎಂ ಬೊಮ್ಮಾಯಿಯವರಿಂದ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ
Follow us
TV9 Web
| Updated By: ಆಯೇಷಾ ಬಾನು

Updated on: Apr 21, 2022 | 11:44 AM

ಶಿವಮೊಗ್ಗ: ಜಿಲ್ಲೆಯ ಪ್ರವಾಸಿ ಮಂದಿರದ ಆವರಣದಲ್ಲಿ ರಾಜ್ಯ ಸರಕಾರಿ ನೌಕರರ ದಿನಾಚರಣೆ ಮತ್ತು ಸರ್ವೋತ್ತಮ ಸೇವಾ ಪ್ರಶಸ್ತಿ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಅಶ್ವಥ್ ನಾರಾಯಣ, ಸಚಿವ ಬೈರತಿ ಬಸವರಾಜ್, ಲಕ್ಷಣ ಸವದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದಾರೆ.

ರಾಜ್ಯ ಮಟ್ಟದ ಸರಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿಗೆ ಸರಕಾರಿ ನೌಕರರ ಸಂಘದಿಂದ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ಮಾತನಾಡಿದ್ದು, ಸರ್ಕಾರಿ ದಿನಾಚರಣೆ ಈ ವರ್ಷದಿಂದ ಆರಂಭ ಆಗಿದೆ. ಇದೇ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ನೌಕರರಿಗೆ 10 ಜನರಿಗೆ ಸರ್ವೋತ್ತಮ ಪ್ರಶಸ್ತಿ ನೀಡಲಾಗುತ್ತಿದೆ. ತಲಾ 25 ಸಾವಿರ ರೂಪಾಯಿ ನಗದು ಪ್ರಶಸ್ತಿ ನೀಡಲಾಗುತ್ತಿದೆ. ಸಿಎಂ ಬೊಮ್ಮಾಯಿ ಅವರು ಕಡಿಮೆ ಅವಧಿಯಲ್ಲಿ ಸರಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಸಿದ್ದಾರೆ. ಸರಕಾರಿ ನೌಕರರು ಉತ್ತಮವಾಗಿ ಕೆಲಸ ನಿರ್ವಹಣೆ ಮೂಲಕ ಸರಕಾರಕ್ಕೆ ಹೆಸರು ತರಬೇಕೆಂದು ಕಿವಿಮಾತು ಹೇಳಿದ್ರು.

ವೈಯಕ್ತಿಕ ಲಾಭಕ್ಕಾಗಿ ಸರಕಾರಿ ನೌಕರರು ಕೆಲಸ ಮಾಡಬಾರದು ಇನ್ನು ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ಸರಕಾರಿ ನೌಕರರು ದಕ್ಷರು ಎನ್ನುವ ಹೆಗ್ಗಳಿಕೆ ದೇಶದಲ್ಲಿದೆ. ನೌಕರರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಣೆ ಮಾಡಬೇಕು. ನೌಕರರು ಆಡಳಿತ ಯಂತ್ರದ ಕುರಿತು ಸಂಪೂರ್ಣ ತಿಳವಳಿಕೆ ಇರಬೇಕು. ನಮ್ಮ ನಮ್ಮ ಪಾತ್ರ ನಿಷ್ಠೆಯಿಂದ ಮಾಡಿದರೆ ರಾಜ್ಯದ ಜನರಿಗೆ ನ್ಯಾಯ ಕೊಟ್ಪಂತೆ ಆಗುತ್ತದೆ. ವೈಯಕ್ತಿಕ ಲಾಭಕ್ಕಾಗಿ ಸರಕಾರಿ ನೌಕರರು ಕೆಲಸ ಮಾಡಬಾರದು. ಕಾನೂನೂ ಬದ್ಧವಾಗಿ ಕೆಲಸ ಮಾಡಬೇಕು. ಬಡವರ ಪರವಾಗಿ ನೀವು ಕೆಲಸ ಮಾಡಬೇಕು. ಶ್ರೀಮಂತರ ಪರವಾಗಿ ಕೆಲಸ ಮಾಡಬಾರದು. ಸರಕಾರಿ ನೌಕರರು ಮತ್ತು ಅಧಿಕಾರಿಗಳು ಫೈಲ್ ಗಳನ್ನು ಕೂಲಂಕುಷವಾಗಿ ಪರಿಶೀಲನೆ ಮಾಡಬೇಕು. ಆಡಳಿತ ಸುಧಾರಣೆ ಆಗಬೇಕಿದೆ. ಸರಕಾರಿ ನೌಕರರು ಸರಕಾರದ ಒಂದು ಭಾಗ ಆಗಿದ್ದಾರೆ. ಸರಕಾರದ ಯಂತ್ರದ ಮೇಲೆ ಪರಿಣಾಮ ಆಗುತ್ತದೆ. ಬದಲಾದ ಸ್ಥಿತಿಯಲ್ಲಿ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ಎಲ್ಲರೂ ತಂತ್ರಜ್ಞಾನ ಕಲಿಯಬೇಕು. ಇದರಿಂದ ಎಲ್ಲ ಕೆಲಸಗಳು ಬೇಗ ಆಗುತ್ತದೆ. ನಿಗದಿತ ಸಮಯದಲ್ಲಿ ನೌಕರರು ಕೆಲಸ ಮಾಡಿದರೆ ಜನರಿಗೆ ಉತ್ತಮ ಸೇವೆ ಸಿಗುತ್ತದೆ. ಇದರಿಂದ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ. ಇದನ್ನು ನಾನು ಸಿಎಂ ಆಗಿ ನಿಮ್ಮಿಂದ ಬಯಸುತ್ತೇನೆ.

ಜನಸಾಮಾನ್ಯರು ಮನೆ ಬಾಗಿಲಿಗೆ ನೀಡಬೇಕು . ಬೆವರಿಗೆ ಬೆಲೆ ಬರುವಂತೆ ಸರಕಾರಿ ನೌಕರರು ಕೆಲಸ ಮಾಡಬೇಕು. ಜನರಿಂದಲೇ ನಿಮಗೆ ಸಂಬಳ ಬರುತ್ತದೆ. ಎರಡು ಲಕ್ಷಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ. ಈ ನಡುವೆ ಸರಕಾರಿ ನೌಕರರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಷಡಾಕ್ಷರಿ ಉಡಾ ಇದ್ದಂಗೆ. ನಿಮ್ಮ ಮತ್ತು ನಮ್ಮ ಮೇಲೆ ಷಡಾಕ್ಷರಿಗೆ ನಿಯಂತ್ರಣ ಇದೆ. ಕ್ರಿಯಾಶೀಲ ರಾಜ್ಯಾಧ್ಯಕ್ಷರಾಗಿ ಷಡಾಕ್ಷರಿ ಸೇವೆ ಅವರ ಹಿಂದೆ ದೊಡ್ಡ ಪವರ್ ಹೌಸ್ ಇದೆ ಎಂದರು.

ಕೆಲವೇ ವರ್ಷದಲ್ಲಿ ಶಿವಮೊಗ್ಗ ಜಿಲ್ಲೆಯ ಚಿತ್ರಣ ಬದಲಾಗಲಿದೆ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ದೇಶದಲ್ಲಿ ಮೊದಲ ಬಾರಿಗೆ ಸರಕಾರಿ ನೌಕರ ದಿನಾಚರಣೆ ಆಚರಿಸಲಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ಈ ದಿನಾಚರಣೆ ರೂವಾರಿ. ಶಿವಮೊಗ್ಗ ಜಿಲ್ಲೆ ಸಮಗ್ರ ಅಭಿವೃದ್ಧಿ ಆಗುತ್ತದೆ. ದೇಶದಲ್ಲಿ 10 ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆಯಲ್ಲಿ ಶಿವಮೊಗ್ಗ ಕೂಡಾ ಒಂದಾಗಿದೆ. ಕೆಲವೇ ವರ್ಷದಲ್ಲಿ ಶಿವಮೊಗ್ಗ ಜಿಲ್ಲೆಯ ಚಿತ್ರಣ ಬದಲಾಗಲಿದೆ. ಸರ್ಕಾರಿ ನೌಕರರ ಸೇವೆ ಶ್ಲಾಘನೀಯ. ಅಧಿಕಾರಿಗಳಿಗೆ ಗೌರವ ನೀಡುವ ಪ್ರವೃತ್ತಿ ಸರಕಾರಿ ನೌಕರರು ರೂಢಿಸಿಕೊಳ್ಳಬೇಕು. ಇನ್ನೂ ಹೆಚ್ಚು ಪರಿಶ್ರಮದಿಂದ ಸೇವೆ ಸಲ್ಲಿಸಿ. ಸರಕಾರಗಳು ನಿಮ್ಮ ಜೊತೆ ಇರುತ್ತವೆ ಎಂದರು.

ಇದನ್ನೂ ಓದಿ: Masked Aadhaar: ಏನಿದು ಮಾಸ್ಕ್ಡ್ ಆಧಾರ್, ಇದರ ಪ್ರಯೋಜನ ಏನು, ಡೌನ್​ಲೋಡ್ ಹೇಗೆ?

PM Modi Address Today: ಇಂದು ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಭಾಷಣ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?