ಶಿವಮೊಗ್ಗ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಕೆಎಸ್​​​ಆರ್​ಟಿಸಿ ಚಾಲಕ-ಕಂ-ನಿರ್ವಾಹಕ

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಶಿವಮೊಗ್ಗ ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿಯೇ ಚಾಲಕ-ಕಂ-ನಿರ್ವಾಹಕ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ. ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ-ಕಂ-ನಿರ್ವಾಹಕ.

ಶಿವಮೊಗ್ಗ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಕೆಎಸ್​​​ಆರ್​ಟಿಸಿ ಚಾಲಕ-ಕಂ-ನಿರ್ವಾಹಕ
ಆತ್ಮಹತ್ಯೆಗೆ ಯತ್ನಿಸಿದ ಕೆಎಸ್​ಆರ್​ಟಿಸಿ ಸಿಬ್ಬಂದಿ
Follow us
Basavaraj Yaraganavi
| Updated By: ವಿವೇಕ ಬಿರಾದಾರ

Updated on: Mar 23, 2024 | 6:28 PM

ಶಿವಮೊಗ್ಗ, ಮಾರ್ಚ್​ 23: ಅಧಿಕಾರಿಗಳ ಕಿರುಕುಳಕ್ಕೆ (Harassment) ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ (Driver come conductor) ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ (Shivamogga) ನಗರದ ಕೆಎಸ್​​​ಆರ್​ಟಿಸಿ (KSRTC) ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ-ಕಂ-ನಿರ್ವಾಹಕ.

ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಈ ವಿಚಾರ ಮೇಲಿನ ಅಧಿಕಾರಿಗಳಿಗೂ ತಿಳಿದಿದೆ. ಮೇಲಿನ ಅಧಿಕಾರಿಗಳ ಬೆಂಬಲದೊಂದಿಗೆ ಕೆ. ರೇಣುಕಾ ಅವರು ಬಸವರಾಜು ಟಿ.ವಿ ಮತ್ತು ಮತ್ತೋರ್ವ ಚಾಲಕ ಸಿ. ಮಹೇಶ್ವರ ವಿರುದ್ಧ ಹೊನ್ನಾಳಿ ಪೋಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್; ಕಣ್ಣೀರು ಹಾಕಿ ನೋವು ಹೇಳಿಕೊಂಡ ಸಿಬ್ಬಂದಿ

ಎಫ್​ಐಆರ್​​ ದಾಖಲಾಗುತ್ತಿದ್ದಂತೆ ಬಸವರಾಜು ಟಿ.ವಿ ​ಶಿವಮೊಗ್ಗ ವಿಭಾಗೀಯ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಆದರೆ ಶಿವಮೊಗ್ಗ ವಿಭಾಗದ ಅಧಿಕಾರಿಗಳು ಚಾಲಕ ಬಸವರಾಜು ಅವರಿಗೆ ಸ್ಪಂದಿಸಿಲ್ಲ. ಇದರಿಂದ ನೊಂದ ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆ ಯತ್ನಿಸಿದ್ದಾರೆ. ವಿಚಾರ ತಿಳಿದು ಅಕ್ಕ-ಪಕ್ಕದಲ್ಲಿದ್ದ ಸಿಬ್ಬಂದಿ ಅವರನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನನ್ನ ಸಾವಿಗೆ ಶಿವಮೊಗ್ಗ ವಿಭಾಗದ ಅಧಿಕಾರಿಗಳು ಹಾಗೂ ಮೆಕ್ಯಾನಿಕ್ ಕೆ. ರೇಣುಕಾ ಕಾರಣವೆಂದು ಬಸವರಾಜು ಟಿ.ವಿ ಡೆತ್ ನೋಟ್ ಬರೆದಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ