ಮರಳು ಲಾರಿ ಮಾಲೀಕರಿಂದ ಕಮಿಷನ್ ಆರೋಪ: ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಮುಂದಾದ ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ
ಸದ್ಯ ಒಂದು ವಾರದಿಂದ ಇಬ್ಬರ ನಡುವೆ ಅಕ್ರಮ ಮರಳು ವಿಚಾರವಾಗಿ ಆರೋಪ ಪ್ರತ್ಯಾರೋಪ ಜೋರಾಗಿತ್ತು. ಇದರ ಮುಂದುವರಿದ ಭಾಗವಾಗಿ ಈಗ ಹಾಲಪ್ಪ ಅವರು ಧರ್ಮಸ್ಥಳದಲ್ಲಿ ಆಣೆ ದಿನಾಂಕ ಫಿಕ್ಸ್ ಮಾಡಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಶಿವಮೊಗ್ಗ: ಮತ್ತೆ ಆಣೆ- ಪ್ರಮಾಣದ ವಿಚಾರಗಳು ರಾಜಕೀಯ ರಂಗದಲ್ಲಿ ಸದ್ದು ಮಾಡಿದೆ. ಮರಳು ಲಾರಿ ಮಾಲೀಕರಿಂದ ಕಮಿಷನ್ ಪಡೆದ ಬಗ್ಗೆ ಆಣೆ ಮಾಡಲು ರಾಜಕೀಯ ನಾಯಕರು ಮುಂದಾಗಿದ್ದಾರೆ. ಫೆಬ್ರವರಿ 12 ರಂದು ಧರ್ಮಸ್ಥಳದಲ್ಲಿ ಆಣೆ- ಪ್ರಮಾಣಕ್ಕೆ ದಿನ ನಿಗದಿ ಮಾಡಲಾಗಿದೆ. ಸಾಗರ ಬಿಜೆಪಿ ಶಾಸಕ ಹರತಾಳು ಹಾಲಪ್ಪ ವಿರುದ್ಧ ಆರೋಪ ಕೇಳಿಬಂದಿತ್ತು. ಮರಳು ಲಾರಿ ಮಾಲೀಕರಿಂದ ಕಮಿಷನ್ ಪಡೆದಿರುವ ಆರೋಪ ಕೇಳಿಬಂದಿತ್ತು.
ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಹರತಾಳು ಹಾಲಪ್ಪ ವಿರುದ್ಧ ಈ ಬಗ್ಗೆ ಆರೋಪ ಮಾಡಿದ್ದರು. ಆರೋಪದ ಹಿನ್ನೆಲೆ ಧರ್ಮಸ್ಥಳದಲ್ಲಿ ಆಣೆ- ಪ್ರಮಾಣಕ್ಕೆ ದಿನ ನಿಗದಿ ಮಾಡಲಾಗಿದೆ. ಆಣೆ ಪ್ರಮಾಣದ ಸವಾಲ್- ಪ್ರತಿಸವಾಲ್ ಹಾಕಲಾಗಿದೆ. ಇಬ್ಬರು ರಾಜಕೀಯ ನಾಯಕರು ಆಣೆ- ಪ್ರಮಾಣ ಮಾಡಲು ಫೆಬ್ರವರಿ 12ರ ದಿನಾಂಕ ನಿಗದಿ ಮಾಡಿಕೊಂಡಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ, ತಾಕತ್ತಿದ್ದರೆ ಹಾಲಪ್ಪನವರು ಕಮಿಷನ್ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಬೇಳೂರು ಗೋಪಾಲಕೃಷ್ಣ ಸವಾಲು ಹಾಕಿದ್ದರು. ನಾನು ಯಾವುದೇ ಕಮಿಷನ್ ಪಡೆದಿಲ್ಲ. ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲು ನಾನು ಸಿದ್ಧ ಎಂದು ಸಾಗರ ಬಿಜೆಪಿ ಶಾಸಕ ಹರತಾಳ ಹಾಲಪ್ಪ ತಿರುಗೇಟು ನೀಡಿದ್ದರು.
ಸದ್ಯ ಒಂದು ವಾರದಿಂದ ಇಬ್ಬರ ನಡುವೆ ಅಕ್ರಮ ಮರಳು ವಿಚಾರವಾಗಿ ಆರೋಪ ಪ್ರತ್ಯಾರೋಪ ಜೋರಾಗಿತ್ತು. ಇದರ ಮುಂದುವರಿದ ಭಾಗವಾಗಿ ಈಗ ಹಾಲಪ್ಪ ಅವರು ಆಣೆ ದಿನಾಂಕ ಫಿಕ್ಸ್ ಮಾಡಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: ಶಾಲೆಗೆ ಹೋಗದೆ ಮರಳು ದಂಧೆಯಲ್ಲಿ ಶಿಕ್ಷಕ ಭಾಗಿ, ವಿದ್ಯಾರ್ಥಿನಿಗೆ ಥಳಿಸಿದ ಆರೋಪದಲ್ಲಿ ಪೋಷಕರ ಧರಣಿ