AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ, ಶಿವಮೊಗ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ರೋಗಿಗಳು ಪರದಾಟ

ಬಡವರ ಪಾಲಿಗೆ ಸರ್ಕಾರಿ ಆಸ್ಪತ್ರೆಗಳೆ ಆಧಾರ, ಆದರೆ, ಶಿವಮೊಗ್ಗ, ಹಾಸನ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳು ಅವ್ಯವಸ್ಥೆಯ ಆಗರವಾಗಿದೆ. ಹೊಸನಗರ(Hosanagara) ತಾಲೂಕಿನ ರಿಪ್ಪನಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಲಕ್ಷ್ಮಮ್ಮ (57) ಎಂಬ ವೃದ್ಧೆ ಸಾವನ್ನಪ್ಪಿದ್ದಾರೆ. ಇತ್ತ ಹಾಸನದ ಬೇಲೂರಿನಲ್ಲಿ ವೈದ್ಯರಿಲ್ಲದೆ ರೋಗಿಗಳು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

ಹಾಸನ, ಶಿವಮೊಗ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ರೋಗಿಗಳು ಪರದಾಟ
ಶಿವಮೊಗ್ಗ, ಹಾಸನ ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವವಸ್ಥೆ
Basavaraj Yaraganavi
| Edited By: |

Updated on: Feb 23, 2024 | 9:38 PM

Share

ಶಿವಮೊಗ್ಗ, ಫೆ.23: ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ರಿಪ್ಪನಪೇಟೆ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಆಗರವಾಗಿದ್ದು, ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಲಕ್ಷ್ಮಮ್ಮ (57) ಎಂಬ ವೃದ್ಧೆ ಸಾವನ್ನಪ್ಪಿದ್ದಾರೆ. ತಡರಾತ್ರಿ ವೃದ್ಧೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಲೋ ಬಿಪಿ ಹಿನ್ನಲೆಯಲ್ಲಿ ವೃದ್ದೆ ಅಸ್ವಸ್ಥಗೊಂಡಿದ್ದರು. ಕೂಡಲೇ ಕುಟುಂಬಸ್ಥರು ರಿಪ್ಪನಪೇಟೆ ಸರ್ಕಾರಿ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಕರ್ತವ್ಯಕ್ಕೆ ಗೈರಾಗಿದ್ದು, ನರ್ಸ್​ಗಳಿಂದ ರೋಗಿಯ ತಪಾಸಣೆ ಮಾಡಿಸಲಾಗಿದೆ.

ಆದರೆ, ವೃದ್ಧೆಯ ಸ್ಥಿತಿ ಗಂಭೀರವಾದ ಹಿನ್ನಲೆ ಶಿವಮೊಗ್ಗ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸರ್ಕಾರಿ ಆಸ್ಪತ್ರೆಯ ನರ್ಸ್​ಗಳು ಸೂಚಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಅಂಬುಲೇನ್ಸ್ ಸಿಕ್ಕಿಲ್ಲ. ಪರಿಣಾಮ ವೃದ್ಧೆಗೆ ಸೂಕ್ತ ಚಿಕಿತ್ಸೆ ರಿಪ್ಪನಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಸಿಗದ ಹಿನ್ನಲೆ ರೋಗಿಯ ಕುಟುಂಬಸ್ಥರು ಪರದಾಟ ನಡೆಸಿದ್ದಾರೆ. ಒಂದು ಗಂಟೆ ಪರದಾಡಿದ ಬಳಿಕ ಖಾಸಗಿ ವಾಹನದಲ್ಲಿ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರಾದರೂ, ವೃದ್ಧೆ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:ಗದಗ ಜಿಮ್ಸ್​ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವ: ಸ್ನಾನಕ್ಕೆ ಬಿಸಿ ನೀರಿಲ್ಲದೆ ಪರದಾಡುತ್ತಿರುವ ಬಾಣಂತಿಯರು

ಬೇಲೂರು ತಾಲೂಕು ಆಸ್ಪತ್ರೆಯಲ್ಲಿಯೂ ನಿಲ್ಲದ ರೋಗಿಗಳ ಪರದಾಟ

ಹಾಸನ: ಜಿಲ್ಲೆಯ ಬೇಲೂರು ತಾಲೂಕು ಆಸ್ಪತ್ರೆಯಲ್ಲೂ ರೋಗಿಗಳು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ವೈದ್ಯರು, ನರ್ಸ್​ಗಳು ಬಾರದಿದ್ದರಿಂದ ರೋಗಿಗಳು ನೆಲದ ಮೇಲೆಯೇ ಮಲಗಿದ್ದಾರೆ. ವಿಚಾರ ತಿಳಿದು ಆಸ್ಪತ್ರೆಗೆ ಕರವೇ ಕಾರ್ಯಕರ್ತರು ಭೇಟಿ ನೀಡಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಆರೋಗ್ಯ ಅಧಿಕಾರಿಗಳಿಗೆ ಕರೆಮಾಡಿ ಮಾಹಿತಿ ನೀಡಿದ ಕಾರ್ಯಕರ್ತರು, ಬೇಲೂರು ತಾಲೂಕು ಆಸ್ಪತ್ರೆಗೆ ಸಿಬ್ಬಂದಿ ನೇಮಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್