Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ- ಕುಮಾರಸ್ವಾಮಿ ಹೇಳಿಕೆ

HD Kumaraswamy on Prajwal Revanna scandal: ಹಾಸನದಲ್ಲಿ ಭಾರೀ ಸದ್ದು ಮಾಡಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣದಲ್ಲಿ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ ಎನ್ನುವ ತನ್ನ ನಿಲುವನ್ನು ಪುನರುಚ್ಚರಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡುತ್ತಿದ್ದ ಕುಮಾರಸ್ವಾಮಿ, ಸರ್ಕಾರದಿಂದ ತನಿಖೆಗೆ ಎಸ್​ಐಟಿ ರಚನೆ ಆಗಿದ್ದು, ತನಿಖೆಯಿಂದ ಸತ್ಯಾಂಶ ಹೊರಬರಲಿ. ಯಾರೇ ತಪ್ಪು ಮಾಡಿದರೂ ಅವರಿಗೆ ಕಠಿಣ ಶಿಕ್ಷೆ ಆಗಲಿ ಎಂದಿದ್ದಾರೆ. ಈ ಪೆನ್ ಡ್ರೈವ್ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಮತ್ತು ಅವರ ಮಗ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ- ಕುಮಾರಸ್ವಾಮಿ ಹೇಳಿಕೆ
ಎಚ್ ಡಿ ಕುಮಾರಸ್ವಾಮಿ ಸಂಗ್ರಹ ಚಿತ್ರ
Follow us
Basavaraj Yaraganavi
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Apr 29, 2024 | 10:48 AM

ಶಿವಮೊಗ್ಗ, ಏಪ್ರಿಲ್ 29: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಹಾಗೂ ತಮ್ಮ ಅಣ್ಣನ ಮಗ ಪ್ರಜ್ವಲ್ ರೇವಣ್ಣ (Prajwal Revanna pen drive scandal) ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆದರೆ, ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಅವರು ನೀಡಿಲ್ಲ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕುಮಾರಸ್ವಾಮಿ, ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲಿ ಎಂಬ ಅಭಿಪ್ರಾಯವನ್ನು ಪುನರುಚ್ಚರಿಸಿದ್ದಾರೆ.

ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆಗೆ ಸರ್ಕಾರ ಈಗಾಗಲೇ ಎಸ್​ಐಟಿ ರಚನೆ ಮಾಡಿದೆ. ತನಿಖೆಯಿಂದ ಸತ್ಯ ಹೊರಬರಲಿ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಲಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಆದ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಜ್ವಲ್ ಎಲ್ಲಿ ಹೋಗುತ್ತಾರೆ, ಏನು ಮಾಡುತ್ತಾರೆ ಎಂದು ತನಗೆ ಹೇಗೆ ಗೊತ್ತು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಹಾಸನದಲ್ಲಿ ಚುನಾವಣೆಗೆ ಮೂರು ದಿನ ಮೊದಲು ಪೆನ್ ಡ್ರೈವ್ ಮೂಲಕ ಅಪಪ್ರಚಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್​ ಶಾಸಕ ಒತ್ತಾಯ

14ರಲ್ಲಿ ಎನ್​ಡಿಎಗೆ 13 ಸ್ಥಾನ

ಇದೆ ವೇಳೆ, ರಾಜ್ಯದಲ್ಲಿ ಶುಕ್ರವಾರ ಚುನಾವಣೆ ಆದ 14 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ 13 ಸ್ಥಾನಗಳು ಸಿಗಲಿವೆ ಎನ್ನುವ ವಿಶ್ವಾಸವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಸುಮಲತಾ ಪ್ರಚಾರಕ್ಕೆ ಬರದೇ ಇದ್ದರ ಬಗ್ಗೆ…

ಮಂಡ್ಯದ ಹಾಲಿ ಸಂಸದೆ ಸುಮಲತಾ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಬಂದಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಅವರ ಪ್ರಚಾರ ಮಾಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು. ಸುಮಲತಾ ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದ್ದರು ಮಿತ್ರಪಕ್ಷ ಜೆಡಿಎಸ್ ಪರ ಪ್ರಚಾರ ಮಾಡದೇ ಹೋದದ್ದು ಕುತೂಹಲ ಮೂಡಿಸಿತ್ತು. ಈ ಬಗ್ಗೆ ಶಿವಮಗ್ಗದಲ್ಲಿ ಕುಮಾರಸ್ವಾಮಿ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದು, ಮಂಡ್ಯದಲ್ಲಿ ಪ್ರಚಾರಕ್ಕೆ ಆಹ್ವಾನಿಸಿದರೂ ಸುಮಲತಾ ಬರಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ಜೊತೆಗೆ ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು

ಪ್ರಚಾರಕ್ಕೆ ಬರುವಂತೆ ಸಂಸದೆ ಸುಮಲತಾ ಅವರಿಗೂ ಆಹ್ವಾನ ನೀಡಿದ್ದೆ. ಆದರೆ, ಬಂದಿಲ್ಲ. ಸುಮಲತಾ ಪ್ರಚಾರದ ಅವಶ್ಯಕತೆ ಕಂಡುಬಂದಿಲ್ಲ ಅನಿಸುತ್ತದೆ ಎಂದು ಎಚ್​ಡಿಕೆ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು