ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಆರೋಗ್ಯ ಇಲಾಖೆ ಸಿಬ್ಬಂದಿ ಸಾವು, ಡೆಂಗ್ಯೂ ಶಂಕೆ

ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಗರಾಜ್ ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನಾಗರಾಜ್ ಸಕ್ಕರೆ ಕಾಯಿಲೆ, ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಜ್ವರ ಕಾಣಿಸಿಕೊಂಡಿದ್ದು ಮೃತಪಟ್ಟಿದ್ದಾರೆ.

ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಆರೋಗ್ಯ ಇಲಾಖೆ ಸಿಬ್ಬಂದಿ ಸಾವು, ಡೆಂಗ್ಯೂ ಶಂಕೆ
ನಾಗರಾಜ್
Follow us
Basavaraj Yaraganavi
| Updated By: ಆಯೇಷಾ ಬಾನು

Updated on:Jun 13, 2024 | 11:54 AM

ಶಿವಮೊಗ್ಗ, ಜೂನ್.13: ರಾಜ್ಯದಲ್ಲಿ ಡೆಂಗ್ಯೂ (Dengue) ಪ್ರಕರಣಗಳು ಹೆಚ್ಚಾಗಿದ್ದು ರಾಜ್ಯದಲ್ಲಿ ಡೆಂಗ್ಯೂಯಿಂದ ಬಲಿಯಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿಯಾಗಿದ್ದ ನಾಗರಾಜ್(35) ಎಂಬುವವರು ಡೆಂಗ್ಯೂನಿಂದ ಮೃತಪಟ್ಟಿದ್ದಾರೆ (Death) ಎಂಬ ಶಂಕೆ ವ್ಯಕ್ತವಾಗಿದೆ.

ಮೃತ ನಾಗರಾಜ್ ಅವರು ಕಳೆದ ಕೆಲ ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಆರೋಗ್ಯ ಇಲಾಖೆ ಸಿಬ್ಬಂದಿ ನಾಗರಾಜ್ ಮೃತಪಟ್ಟಿದ್ದಾರೆ. ಜೊತೆಗೆ ನಾಗರಾಜ್​ಗೆ ಶುಗರ್ ಕೂಡ ಇತ್ತು. ಹೀಗಾಗಿ ಈ ಸಾವು ಡೆಂಗ್ಯೂನಿಂದಲೇ ಸಂಭವಿಸಿದೆಯೇ ಎಂದು ನಿಖರವಾಗಿ ತಿಳಿದುಬಂದಿಲ್ಲ. ಶುಗರ್ ನಿಂದಲೂ ಬಳಲುತ್ತಿದ್ದ ನಾಗರಾಜ್​ಗೆ ಪ್ಲೇಟ್ ಲೆಟ್ 26,000 ಕುಸಿದಿತ್ತು.

ಇದನ್ನೂ ಓದಿ: ಮಳೆಗಾಲ ಆರಂಭವಾಗ್ತಿದ್ದಂತೆ ಸಾಂಕ್ರಾಮಿಕ ರೋಗಗಳ ಭೀತಿ; ಗ್ರಾಮೀಣ ಭಾಗದಲ್ಲಿ ಹೆಚ್ಚಾದ ಡೆಂಗ್ಯೂ, ಚಿಕನಗುನ್ಯಾ

ಸಾಗರ ತಾಲೂಕಿನ ತಾಳಗುಪ್ಪ ನಿವಾಸಿ ನಾಗರಾಜ್, ಸಾಗರದ ಸರಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹೊರಗುತ್ತಿಗೆ ಡಿ ದರ್ಜೆ ನೌಕರನಾಗಿದ್ದರು. ಇತ್ತೀಚೆಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಾಗರಾಜ್ ಅವರಿಗೆ ಸಕ್ಕರೆ ಕಾಯಿಲೆ, ಲೀವರ್ ಸಮಸ್ಯೆ ಕೂಡಾ ಇತ್ತು. ಈ ನಡುವೆ ಕೆಲ ದಿನಗಳಿಂದ ಜ್ವರ ಬಂದಿತ್ತು. ಆತನ ರಕ್ತ ಪರೀಕ್ಷೆಯಲ್ಲಿ ಡೆಂಗ್ಯೂ ಪಾಸಿಟಿವ್ ಬಂದಿದೆ.

ಡೆಂಗ್ಯೂದಿಂದಲೇ ಮೃತಪಟ್ಟಿದ್ದಾನೆಂದು ಖಚಿತವಾಗಿ ಹೇಳಲು ಬರುವುದಿಲ್ಲ. ಮುಂದಿನ ವೈದ್ಯಕೀಯ ಪರೀಕ್ಷೆ ಬಳಿಕ ಯಾವ ಕಾರಣದಿಂದ ಸಾವು ಎಂಬುವುದು ಖಚಿತವಾಗಲಿದೆ. ಇದೊಂದು ಶಂಕಿತ ಡೆಂಗ್ಯೂ ಸಾವಿನ ಪ್ರಕರಣ ಆಗಿದೆ ಎಂದು ಟಿವಿ9ಗೆ ಶಿವಮೊಗ್ಗ ಡಿಎಚ್ ಓ ಡಾ.ನಟರಾಜ್ ಮಾಹಿತಿ ನೀಡಿದ್ದಾರೆ.

ಕಾಫಿನಾಡು ಚಿಕ್ಕಮಗಳೂರಲ್ಲಿ 300ರ ಗಡಿ ದಾಟಿದ ಡೆಂಗ್ಯೂ

ಚಿಕ್ಕಮಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚಿಕ್ಕಮಗಳೂರು ತಾಲೂಕು ಒಂದರಲ್ಲೇ 250 ಪ್ರಕರಣಗಳಿದ್ದು ಜಿಲ್ಲೆಯಾದ್ಯಂತ 350 ಡೆಂಗ್ಯೂ ಪ್ರಕರಣಗಳು ತಾಂಡವವಾಡ್ತಿದೆ. ಅದೂ ಕಳೆದ ಎರಡು ತಿಂಗಳಲ್ಲೇ ಹೆಚ್ಚು. ಹೆಮ್ಮಾರಿ ಡೆಂಗ್ಯೂ ಈ ಪರಿ ಅಟ್ಯಾಕ್ ಮಾಡಿರೋದು ಆರೋಗ್ಯ ಇಲಾಖೆ ತಲೆ ಕೆಡಿಸಿಕೊಳ್ಳುವಂತೆ ಮಾಡಿದೆ. ಜ್ವರ ಕಾಣಿಸಿಕೊಂಡರೆ ಸಾಕು ಡೆಂಗ್ಯೂ ಕಂಫರ್ಮ್ ಅನ್ನುವ ರೀತಿ ಆಗಿದೆ ಸದ್ಯದ ಪರಿಸ್ಥಿತಿ.

ಮುಮ್ಮಿಗಟ್ಟಿ ಗ್ರಾಮದಲ್ಲಿ ಡೆಂಗ್ಯೂ ಆತಂಕ

ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ಡೆಂಗ್ಯೂ ಆತಂಕ ಹೆಚ್ಚಾಗಿದೆ. ಡಿಎಚ್‌ಒ ಡಾ. ಶಶಿ ಪಾಟೀಲ್ ಗ್ರಾಮಕ್ಕೆ ಭೇಟಿ ನೀಡಿದ್ದು ಡಿಎಚ್‌ಒಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ನಿನ್ನೆಯಷ್ಟೇ ಡೆಂಗ್ಯೂನಿಂದ 4 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಅನೇಕರಿಗೆ ತೀವ್ರ ಜ್ವರ ಕಂಡು ಬಂದಿದೆ. ಈ ಹಿನ್ನೆಲೆ ಮುಂಜಾಗ್ರತೆ ವಹಿಸದ ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ.

ಮೃತ ಬಾಲಕಿ ತಂದೆ ಬಸವರಾಜ ದೇಸಾಯಿ ಅವರು ಡಿಎಚ್‌ಒಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮೇ ತಿಂಗಳಿನಿಂದಲೇ ಗ್ರಾಮದಲ್ಲಿ ಪ್ರಕರಣಗಳಿವೆ. ಆದರೂ ಸರಿಯಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ. ಫಾಗಿಂಗ್ ಗೆ ಬೇಕಾಗೋ ಕೆಮಿಕಲ್ ಕೂಡ ನೀಡಿಲ್ಲ. ಗ್ರಾಪಂಗೆ ನೀಡಬೇಕಾದ ಸೌಲಭ್ಯಗಳನ್ನು ನೀಡಿಲ್ಲ. ಈಗ ಮಗು ಸತ್ತ ಮೇಲೆ ಬರ್ತಿರಾ? ಮೊದಲೇ ಇಡೀ ಗ್ರಾಮಕ್ಕೆ ಫಾಗಿಂಗ್ ವ್ಯವಸ್ಥೆ ಮಾಡಿಲ್ಲವೇಕೆ? ಈಗ ಬಂದಿದ್ದೀರಾ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:05 am, Thu, 13 June 24

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು