AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಹೆಚ್ಚಾಗಿದೆ ಮಳೆ ಆರ್ಭಟ: ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಎಲ್ಲ 7 ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ಶಿವಮೊಗ್ಗದಲ್ಲಿ ಹೆಚ್ಚಾಗಿದೆ ಮಳೆ ಆರ್ಭಟ: ಶಾಲೆಗಳಿಗೆ ರಜೆ ಘೋಷಣೆ
ಸಂಗ್ರಹ ಚಿತ್ರ
TV9 Web
| Edited By: |

Updated on:Jul 07, 2022 | 9:57 AM

Share

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ವ್ಯಾಪಕವಾಗಿ ಸುರಿಯುತ್ತಿರುವ (Heavy Rain) ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ 7 ತಾಲ್ಲೂಕುಗಳಿಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಜಿಲ್ಲೆಯ ಸೊರಬ, ಶಿಕಾರಿಪುರ, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ, ಹೊಸನಗರ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಿನ್ನೆಯೂ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಎಲ್ಲ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ನಿರಂತರ ಮಳೆಗೆ ಜನ ಜೀವನ ಅಸ್ತವ್ಯಸ್ತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಮುಂದುವರೆದಿದ್ದು, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಜೋಯಿಡಾ, ಕಾರವಾರದಲ್ಲಿ ರಾತ್ರಿಯಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ನಿನ್ನೆ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಪ್ರಾರಂಭವಾಗಿದೆ. ನಿರಂತರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆ ಮುಂದುವರೆದ ಹಿನ್ನಲೆ, ಮಕ್ಕಳ ಹಿತದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ರೆಡ್ ಅಲಟ್೯ ಘೋಷಿಸಿದ್ದು, ನದಿ ಪಾತ್ರದ ಮತ್ತು ತಗ್ಗು ಪ್ರದೇಶಗಳಲ್ಲಿರುವ ಜನ ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಮಂಗಳೂರು ಏರ್​ಪೋರ್ಟ್​​ ರನ್​ವೇ ಸಮೀಪ ರಸ್ತೆ ಕುಸಿತ

ಮಂಗಳೂರು: ಏರ್​ಪೋರ್ಟ್ ರನ್​ವೇ (Runway) ಬದಿಯಲ್ಲೇ ರಸ್ತೆ ಕುಸಿದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅದ್ಯಪಾಡಿ ಬಳಿ ಇರುವ ರನ್ ವೇ ಸಮೀಪ ಕುಸಿತವಾಗಿದ್ದು, ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್ ಮಾಡಲಾಗಿದೆ. ಏರ್​​ರ್ಪೋರ್ಟ್ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕ ಮಳೆ, ನೀರಿನ ಹೊರಹೊಮ್ಮುವಿಕೆಯಿಂದ ಕುಸಿತ ಉಂಟಾಗಿದೆ ಎನ್ನಲಾಗುತ್ತಿದೆ. ನಗರದಲ್ಲಿ ಭಾರೀ ಮಳೆ‌ ಮುಂದುವರೆದಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣವು ಸೂಕ್ಷ್ಮ ಟೇಬಲ್ ಟಾಪ್ ರನ್​ವೇ (Table Top Runway) ಹೊಂದಿರುವುದರಿಂದ ಈ ವಿದ್ಯಮಾನ ದೇಶದ ಗಮನ ಸೆಳೆದಿದೆ.

Published On - 9:54 am, Thu, 7 July 22

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ