AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಬಾಳೆಬರೆ ಘಾಟ್​ನಲ್ಲಿ ಭಾರಿ ವಾಹನಗಳ ಸಂಚಾರ ಬಂದ್, ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಭಾರಿ ಮಳೆಯ ಕಾರಣ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬಾಳೆಬರೆ ಘಾಟ್‌ನಲ್ಲಿ ಮಣ್ಣು ಕುಸಿತ ಸಂಭವಿಸಿದೆ. ಸುರಕ್ಷತಾ ಕಾರಣಗಳಿಂದ, ಜಿಲ್ಲಾಧಿಕಾರಿಗಳು ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ. ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಮಳೆ ಮುಂದುವರಿದರೆ ಮಣ್ಣು ಕುಸಿತದ ಅಪಾಯ ಮುಂದುವರಿಯುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಶಿವಮೊಗ್ಗ: ಬಾಳೆಬರೆ ಘಾಟ್​ನಲ್ಲಿ ಭಾರಿ ವಾಹನಗಳ ಸಂಚಾರ ಬಂದ್, ಪರ್ಯಾಯ ಮಾರ್ಗ ವಿವರ ಇಲ್ಲಿದೆ
ಬಾಳೆಬರೆ ಘಾಟ್​ನಲ್ಲಿ ಭಾರಿ ವಾಹನಗಳ ಸಂಚಾರ ಬಂದ್
Basavaraj Yaraganavi
| Updated By: Ganapathi Sharma|

Updated on: Aug 07, 2025 | 11:15 AM

Share

ಶಿವಮೊಗ್ಗ, ಆಗಸ್ಟ್ 7: ಭಾರಿ ಮಳೆಗೆ ಮಣ್ಣು ಕುಸಿತವಾದ ಕಾರಣ ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ ತಾಲೂಕಿನ ಬಾಳೆಬರೆ ಘಾಟ್​​ನಲ್ಲಿ (Balebare Ghat) ಘನ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ. ಭಾರಿ ವಾಹಮಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಅವರು ಸೂಚನೆ ನೀಡಿದ್ದಾರೆ. ಪರ್ಯಾಯ ಮಾರ್ಗಗಳ ವಿವರವನ್ನೂ ಆದೇಶದಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳಬರೆ ಘಾಟ್ 42.10 ರಿಂದ 42.20 ರಲ್ಲಿನ ಹೇರ್ ಪಿನ್ ತಿರುವಿನಲ್ಲಿ ಮೇ ಅಂತ್ಯದಲ್ಲಿ ಬಿದ್ದಂತಹ ಮಳೆಯಿಂದ ಕಾಂಕ್ರಿಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಪ್ರಸ್ತುತ ಮಣ್ಣು ಕುಸಿತವಾಗಿರುವ ಭಾಗದಲ್ಲಿ ತಾತ್ಕಾಲಿಕವಾಗಿ ದುರಸ್ಥಿ ಕಾರ್ಯ ಕೈಗೊಳ್ಳಲಾಗಿದೆ. ಮತ್ತೆ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ, ಸುರಕ್ಷತಾ ದೃಷ್ಟಿಯಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟಿ ಮಾರ್ಗ ವ್ಯಾಪ್ತಿಯಲ್ಲಿ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲದವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಭಾರಿ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಲು ಲೋಕೋಪಯೋಗಿ ಇಲಾಖೆಯ ಶಿವಮೊಗ್ಗ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಕೋರಿರುತ್ತಾರೆ. ಅದರಂತೆ ಈ ಆದೇಶ ಹೊರಡಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಪ್ರಸ್ತಾವನೆಯಂತೆ ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧಿಕ್ಷಕರು, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಮತ್ತು ಜಿಲ್ಲಾಧಿಕಾರಿಗಳು, ಉಡುಪಿ ಜಿಲ್ಲೆ ಇವರ ಉಲ್ಲೇಖ (2) (3) (4) ವರದಿಗಳನ್ವಯ, SH-52 ರ ಬಾಳೆಬರೆ ಘಾಟ್ ನಲ್ಲಿ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ ಭಾರಿ ವಾಹನಗಳ ಸಂಚಾರ ನಿಷೇದ ಮಾಡಿ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬಹುದಾಗಿ ವರದಿ ಸಲ್ಲಿಸಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಆದೇಶಲ್ಲಿ ಉಲ್ಲೇಖಿಸಿದ್ದಾರೆ.

ಬಾಳೆಬರೆ ಘಾಟ್​ನಲ್ಲಿ ಭಾರಿ ವಾಹನಗಳ ಸಂಚಾರ ಬಂದ್: ಪರ್ಯಾಯ ಮಾರ್ಗಗಳ ವಿವರ

  • ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ-52 ರಸ್ತೆಯ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು (ತೀರ್ಥಹಳ್ಳಿ-ರಾವ ಕಾನುಗೋಡು ಮಾಸ್ತಿಕಟ್ಟೆ-ಹುಲಿಕಲ್ ಘಾಟ್-ಹೊಸಂಗಡಿ-ಸಿದ್ದಾಪುರ-ಮೂಲಕ ಕುಂದಾಪುರ ರಾಹ-52) ಮಾರ್ಗಕ್ಕೆ ಬದಲಾಗಿ ತೀರ್ಥಹಳ್ಳಿ-ರಾವ-ಕಾನುಗೋಡು-ನಗರ ಕೊಲ್ಲೂರು -ಕುಂದಾಪುರ ರಸ್ತೆಯಾಗಿ ಸಂಚರಿಸುವುದು.
  • ನಗರ ಸಿದ್ದಾಪುರ ರಾಜ್ಯ ಹೆದ್ದಾರಿ-278 ರಸ್ತೆ, ತೀರ್ಥಹಳ್ಳಿಯಿಂದ ಯಡೂರು ಹುಲಿಕಲ್, ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು (ತೀರ್ಥಹಳ್ಳಿ ಯಡೂರು- ಸುಳಗೋಡು-ಮಾಸ್ತಿಕಟ್ಟೆ-ಹುಲಿಕಲ್ ಘಾಟ್- ಹೊಸಂಗಡಿ-ಸಿದ್ದಾಪುರ-ಮೂಲಕ ಕುಂದಾಪುರ ಸೇರುವ ರಸ್ತೆ) ತೀರ್ಥಹಳ್ಳಿ ಯಡೂರು- ಮಾಸ್ತಿಕಟ್ಟೆ-ಕಾನುಗೋಡು-ನಗರ-ಕೊಲ್ಲೂರು-ಕುಂದಾಪುರ ಮಾರ್ಗವಾಗಿ ಸಂಚರಿಸುವು.
  • ಶಿವಮೊಗ್ಗ/ ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು (ಶಿವಮೊಗ್ಗ-ಸಾಗರ ಕಡೆಯಿಂದ ಹೊಸನಗರ- ನಗರ- ಮಾಸ್ತಿಕಟ್ಟೆ- ಹುಲಿಕಲ್ ಘಾಟ್- ಹೊಸಂಗಡಿ- ಸಿದ್ದಾಪುರ- ಮೂಲಕ ಕುಂದಾಪುರ ಸೇರುವ ರಸ್ತೆ) ಶಿವಮೊಗ್ಗ ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಮೂಲಕ ಹೊನ್ನಾವರ ಅನಂತರ ಹೊನ್ನಾವರ ದಿಂದ-ಭಟ್ಕಳ-ಬೈಂದೂರು-ಕುಂದಾಪುರ ರಸ್ತೆ ಮೂಲಕ ತೆರಳಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!