ಶಿವಮೊಗ್ಗ: ದೇವಸ್ಥಾನ ದೀಪೋತ್ಸವ ಮುಗಿಸಿ ಬರುವಾಗ ತಡರಾತ್ರಿ ಹಿಟ್ ಅಂಡ್ ರನ್​​ಗೆ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು, ಮಹಿಳೆ ಗಂಭೀರ

Hit and Run case: ಮಾಸ್ತಿಕಟ್ಚೆಯಿಂದ ಒಂದು ಕಿ.ಮೀ. ದೂರದ ಹುಲಿಕಲ್ ಮುಖ್ಯ ರಸ್ತೆಯಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಲಾರಿ ಹರಿದಿದೆ.

ಶಿವಮೊಗ್ಗ: ದೇವಸ್ಥಾನ ದೀಪೋತ್ಸವ ಮುಗಿಸಿ ಬರುವಾಗ ತಡರಾತ್ರಿ  ಹಿಟ್ ಅಂಡ್ ರನ್​​ಗೆ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು, ಮಹಿಳೆ ಗಂಭೀರ
ದೀಪೋತ್ಸವ ಮುಗಿಸಿ ಬರುವಾಗ ತಡರಾತ್ರಿ ಹಿಟ್ ಅಂಡ್ ರನ್​​ಗೆ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 11, 2022 | 12:01 PM

ಶಿವಮೊಗ್ಗ: ಹುಲಿಕಲ್ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಬರುವಾಗ ದುರ್ಘಟನೆ ಸಂಭವಿಸಿದೆ. ದೇವಸ್ಥಾನದ ದೀಪೋತ್ಸವ ಮುಗಿಸಿಕೊಂಡು ಬರುವಾಗ ಹಿಟ್ ಅಂಡ್ ರನ್ ಗೆ (Hit and Run case) ಅಪಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ (Hulikal Hosanagara Shivamogga) ಈ ಘಟನೆ ನಡೆದಿದ್ದು, ಹಿಟ್ ಅಂಡ್ ರನ್ ಗೆ ಇಬ್ಬರು ಸ್ಥಳದಲ್ಲೇ (Death) ಸಾವನ್ನಪ್ಪಿದ್ದಾರೆ.

ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಸ್ತಿಕಟ್ಚೆಯಿಂದ ಒಂದು ಕಿ.ಮೀ. ದೂರದ ಹುಲಿಕಲ್ ಮುಖ್ಯ ರಸ್ತೆಯಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಲಾರಿ ಹರಿದಿದೆ. ಲಾರಿ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.

ಅಪಘಾತದಿಂದಾಗಿ ಸುಮಾರು ಎರಡೂವರೆ ಘಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಮಾಸ್ತಿಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದ ಕೈ ಗ್ರಾಮದ ರವಿ (47) ಹಾಗೂ ಅವರ ಅಣ್ಣನ ಮಗ ಶ್ರಿಸಿರ (9) ಮೃತ ದುರ್ದೈವಿಗಳು. ರವಿಯವರ ಪತ್ನಿಯ ಕಾಲಿನ ಮೇಲೆ ಲಾರಿ ಹರಿದಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ನಗರ ಠಾಣೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಪಲ್ಟಿ; ಮಹಿಳೆ ಸಾವು, ಎಂಟು ಮಂದಿಗೆ ಗಂಭೀರ ಗಾಯ

ಕಾರವಾರ: ಶಾಲಾ ಬಸ್​ ಪಲ್ಟಿಯಾಗಿ 60 ವರ್ಷದ ಮಹಿಳೆ ಸಾವುನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಅರಬೈಲ್​ ಘಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಶಾಲಾ ಬಸ್ ಚಾಲಕ ಸೇರಿದಂತೆ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆ ರಜೆ ಹಿನ್ನೆಲೆ ಪ್ರವಾಸ ಕೈಗೊಳ್ಳಲಾಗಿತ್ತು. ಅದರಂತೆ ಹುಬ್ಬಳಿಯಿಂದ ಅಂಕೋಲಾ‌ ಮಾರ್ಗವಾಗಿ ಪ್ರವಾಸಕ್ಕೆ ತೆರಳುತ್ತಿದ್ದ ರಾಣಿಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರಕ್ಕೆ ಸೇರಿದ್ದ ಬಸ್, ರಾಣೆಬೆನ್ನೂರು ಸಿದ್ಧಾರೂಢ ನಗರದಿಂದ ಶಿರಸಿಯತ್ತ ಬರುತ್ತಿದ್ದಾಗ ಬನವಾಸಿಯ ಬುಗುಡಿಕೊಪ್ಪದಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಶಿರಸಿ- ಹಾವೇರಿ ರಾಷ್ಟ್ರೀಯ ಹೆದ್ದಾರಿ 766ಇ ಯಲ್ಲಿ ಈ ದುರ್ಘಟನೆ ನಡೆದಿದೆ.

ದುರ್ಘಟನೆಯಲ್ಲಿ ಕಸ್ತೂರಮ್ಮ ಎಂಬ 60 ವರ್ಷ ಪ್ರಾಯದ ಮಹಿಳೆ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ 8 ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಸ್ವರೂಪವಾದ ಗಾಯಗಳಾಗಿವೆ.

Published On - 10:59 am, Fri, 11 November 22