ನಕಲಿ ಹಕ್ಕುಪತ್ರ ಜಾಲ ಭೇದಿಸಿದ ಹೊಸನಗರ ತಹಶೀಲ್ದಾರ್; ತಾಲೂಕು ಕಛೇರಿ, ನ್ಯಾಯಾಲಯ ಸೇರಿ 48 ವಿವಿಧ ನಕಲಿ ಸೀಲ್ ಪತ್ತೆ
ನಕಲಿ ಹಕ್ಕುಪತ್ರ ತಯಾರಿಸಿ ಜನರನ್ನು ವಂಚಿಸುತ್ತಿದ್ದ ಪ್ರಕರಣವನ್ನು ಹೊಸನಗರ ತಹಶೀಲ್ದಾರ್ ಭೇದಿಸಿದ್ದಾರೆ. ಈ ವೇಳೆ ವ್ಯಕ್ತಿಯ ಮನೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್, ಕರ್ಣಾಟಕ ಬ್ಯಾಂಕ್, ಉಪನೊಂದಣಾಧಿಕಾರಿಗಳ ಕಛೇರಿ, ತಹಸೀಲ್ದಾರ್, ತಾಲೂಕು ಕಛೇರಿ, ನ್ಯಾಯಾಲಯ, ವಿವಿಧ ಗ್ರಾಮ ಪಂಚಾಯಿತಿ ಕಛೇರಿಗಳ 48 ವಿವಿಧ ನಕಲಿ ಸೀಲ್ಗಳು ಪತ್ತೆಯಾಗಿವೆ.
ಶಿವಮೊಗ್ಗ, ಸೆ.10: ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದಲ್ಲಿ ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆ ಮೇಲೆ ಹೊಸನಗರ ತಹಶೀಲ್ದಾರ್ ಎಚ್.ಜೆ.ರಶ್ಮಿ ಅವರು ದಾಳಿ ಮಾಡಿದ್ದು, ಈ ವೇಳೆ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್ ಪತ್ತೆಯಾಗಿದೆ. ಆರೋಪಿ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ. ಈ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ದಾಳಿ ಮಾಡಿದ್ದಾರೆ.
8 ವಿವಿಧ ಸೀಲ್, ನೂರಾರು ನಕಲಿ ಹಕ್ಕುಪತ್ರಗಳು ಜಪ್ತಿ
ಈ ವೇಳೆ ಆರೋಪಿಯ ಮನೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್, ಕರ್ಣಾಟಕ ಬ್ಯಾಂಕ್, ಉಪನೊಂದಣಾಧಿಕಾರಿಗಳ ಕಛೇರಿ, ತಹಸೀಲ್ದಾರ್, ತಾಲೂಕು ಕಛೇರಿ, ನ್ಯಾಯಾಲಯ, ವಿವಿಧ ಗ್ರಾಮ ಪಂಚಾಯಿತಿ ಕಛೇರಿಗಳ 48 ವಿವಿಧ ನಕಲಿ ಸೀಲ್ಗಳು, ನೂರಾರು ನಕಲಿ ಹಕ್ಕುಪತ್ರಗಳು, ಹಕ್ಕುಪತ್ರ ಮುದ್ರಿಸುವ ಕಾಗದ ಹಾಗೂ ನಕಲಿ ಸರ್ಕಾರಿ ದಾಖಲೆಗಳು ಸೇರಿದಂತೆ ಹಲವು ದಾಖಲಾತಿಗಳು ಪತ್ತೆಯಾಗಿವೆ. ಈ ಹಿನ್ನಲೆ ತಹಶೀಲ್ದಾರ್ ನಕಲಿ ದಾಖಲೆಗಳನ್ನು ವಶಕ್ಕೆ ಪಡೆದು, ಆರೋಪಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.
ಇದನ್ನೂ ಓದಿ: ಚಾಮರಾಜನಗರದಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿಸಿ ಸರ್ಕಾರಿ ಜಾಗವನ್ನೇ ಮಾರಾಟ ಮಾಡುವ ಜಾಲ ಬೆಳಕಿಗೆ
ಕರ್ತವ್ಯ ನಿರತ ಸರ್ಕಾರಿ ವೈದ್ಯನ ಮೇಲೆ ಹಲ್ಲೆ ಪ್ರಕರಣ; ಇಬ್ಬರ ಬಂಧನ
ಚಿಕ್ಕಮಗಳೂರು: ಕರ್ತವ್ಯ ನಿರತ ಸರ್ಕಾರಿ ವೈದ್ಯನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯನ ಮೇಲೆ ಹಲ್ಲೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಟಿಪ್ಪು ನಗರದ ನಿವಾಸಿಗಳಾದ ತಸೀಮಾ ,ಇರ್ಫಾನ್ ಬಂಧಿತ ಆರೋಪಿಗಳು. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿತ್ತು. ಇದೀಗ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಸೇವಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ವೆಂಕಟೇಶ ಮೇಲೆ ರೋಗಿಯ ಸಹೋದರಿ ತಸೀಮಾ ಹಲ್ಲೆ ನಡೆಸಿದ್ದರು. ಇನ್ನು ಈ ಹಲ್ಲೆ ಖಂಡಿಸಿ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿOPD ಬಂದ್ ಮಾಡಿ ಪ್ರತಿಭಟನೆ ವೈದ್ಯರು, ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:06 pm, Tue, 10 September 24