ಶಿವಮೊಗ್ಗ: ರಸ್ತೆ ಅಗಲೀಕರಣ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು

ಕುಂದಾಪುರ-ಶಿವಮೊಗ್ಗ ಹೆದ್ದಾರಿಯ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಶಿವಮೊಗ್ಗ: ರಸ್ತೆ ಅಗಲೀಕರಣ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು
ಗುಡ್ಡ ಕುಸಿತ
Image Credit source: tv9 kannada
Edited By:

Updated on: Apr 09, 2026 | 9:23 PM

ಶಿವಮೊಗ್ಗ, ಏಪ್ರಿಲ್​ 09: ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿದು (Landslide) ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್​ನಲ್ಲಿ ನಡೆದಿದೆ. ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕುಂದಾಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್​ ಘಾಟ್​ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆದಿತ್ತು. ಈ ವೇಳೆ ಗುಡ್ಡ ಕುಸಿದು ದುರ್ಘಟನೆ ಸಂಭವಿಸಿದೆ. ಕಾಮಗಾರಿಯ ನಿರ್ವಹಣೆ ಮಾಡುತ್ತಿದ್ದ ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಸುಮಂತ ಮತ್ತು ಪರಮೇಶ್​ ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ನಗರ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ​

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ

ಸದ್ಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಚರಣೆ ನಡೆದಿದ್ದು, ರಾತ್ರಿ ಹಿನ್ನೆಲೆ ಅಡ್ಡಿಯುಂಟಾಗಿದೆ. ಘಟನಾ ಸ್ಥಳಕ್ಕೆ ಹೊಸನಗರ ತಹಶೀಲ್ದಾರ್‌ ಭರತ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಕುಂದಾಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

ಅನುಮಾನಾಸ್ಪದವಾಗಿ ಯುವಕ ಸಾವು

ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ಶಿವಮೊಗ್ಗದ ತುಂಗಾನಗರ ಬಳಿಯ ಕಾಮತ್ ಲೇಔಟ್​ನಲ್ಲಿ ನಡೆದಿದೆ. ಶಿವಮೊಗ್ಗದ ಮೇಲಿನ ತುಂಗಾನಗರ ನಿವಾಸಿಯಾಗಿರುವ ಮಂಜುನಾಥ್ ಮೃತ ಯುವಕ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ: ಕೊಲೆ ಮಾಡುವಷ್ಟು ಆಗಿದ್ದೇನು?

ಮಂಜುನಾಥ್​ ಅಡಕೆ ಆರಿಸುವ ಕೆಲಸ ಮತ್ತು ಗಾರೆ ಕೆಲಸ ಮಾಡುತ್ತಿದ್ದರು. ಒಂದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದರು. ನಿರಂತರವಾಗಿ ಕುಡಿತದ್ದರು. ನಿನ್ನೆ ಮನೆಯಿಂದ ಹೋಗಿದ್ದ ಮಂಜುನಾಥ್ ಇಂದು ಶವವಾಗಿ ಪತ್ತೆ ಆಗಿದ್ದಾರೆ. ಸ್ಥಳಕ್ಕೆ ಸೋಕೋ ಟೀಮ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:04 pm, Thu, 9 April 26

Follow Us