ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ, ಬಂಡಾಯ ಸ್ಪರ್ಧೆ ಖಚಿತ ಎಂದ ಕೆಎಸ್ ಈಶ್ವರಪ್ಪ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ಅವರು ಬಂಡಾಯ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದು, ಕಾರ್ಯಕರ್ತರು, ಅಭಿಮಾನಿಗಳ ಸಂಘಟನೆ ಆರಂಭಿಸಿದ್ದಾರೆ. ಈ ನಡುವೆ ಈಶ್ವರಪ್ಪ ನಿವಾಸದಲ್ಲಿ ನಡೆದ ಬಿಜೆಪಿ ಸಂಧಾನ ವಿಫಲಗೊಂಡಿದೆ. ಈ ಬಗ್ಗೆ ಮಾತನಾಡಿದ ಈಶ್ವರಪ್ಪ, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಹೇಳಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ, ಬಂಡಾಯ ಸ್ಪರ್ಧೆ ಖಚಿತ ಎಂದ ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ ಮತ್ತು ಬಿಎಸ್ ಯಡಿಯೂರಪ್ಪ
Follow us
| Updated By: Rakesh Nayak Manchi

Updated on:Mar 17, 2024 | 11:26 AM

ಶಿವಮೊಗ್ಗ, ಮಾ.17: ನಾಳೆ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮನ ಹಿನ್ನೆಲೆ ಬಿಎಸ್ ಯಡಿಯೂರಪ್ಪ (BS Yediyurappa) ಪುತ್ರ ಬಿವೈ ರಾಘವೇಂದ್ರ (BY Raghavendra) ವಿರುದ್ಧ ಬಂಡಾಯ ಘೋಷಣೆ ಮಾಡಿರುವ ಕೆಎಸ್ ಈಶ್ವರಪ್ಪ (KS Eshwarappa) ಅವರ ನಿವಾಸದಲ್ಲಿ ನಡೆದ ಬಿಜೆಪಿ ಸಂಧಾನ ವಿಫಲಗೊಂಡಿದೆ. ಬಿಜೆಪಿ ನಾಯಕರು ತಮ್ಮ ನಿವಾಸದಿಂದ ವಾಪಸ್ ಹೋದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, ನಾನು ಮೋದಿ ಪರ ಧ್ವನಿ ಎತ್ತುತ್ತೇನೆ. ಆದರೆ ಮೋದಿ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ ಎಂದು ಖಚಿತಪಡಿಸಿದ್ದಾರೆ. ಅಲ್ಲದೆ, ಇಂದು ಆರಗ ಜ್ಞಾನೇಂದ್ರ ಹಾಗೂ ಕೆಲವರು ನಿವಾಸಕ್ಕೆ ಬಂದಿದ್ದರು. ಆದರೆ ಯಾವುದೇ ಕಾರಣಕ್ಕೂ ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಹೇಳಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.

ನನ್ನ ಮಗನಿಗೆ ಟಿಕೆಟ್​ ಕೊಟ್ಟಿಲ್ಲ ಎಂದು ಸ್ಪರ್ಧಿಸುತ್ತಿಲ್ಲ. ಪಕ್ಷದಲ್ಲಿ ಅನೇಕ ಹಿಂದುತ್ವವಾದಿಗಳಿಗೆ ಮೋಸವಾಗಿದೆ. ಯಡಿಯೂರಪ್ಪ ಕುಟುಂಬದ ಹಿಡಿತದಲ್ಲಿ ಬಿಜೆಪಿ ಸಿಲುಕಿದೆ. ರಾಜ್ಯಾಧ್ಯಕ್ಷರು ಲಿಂಗಾಯತರೇ ಬೇಕು ಅಂದಿದ್ದರೆ ಯತ್ನಾಳ್​ ಅವರನ್ನು ಮಾಡಬೇಕಿತ್ತು. ಯತ್ನಾಳ್ ಅವ​​ರನ್ನ ಯಾಕೆ ಮಾಡಲಿಲ್ಲ? ಲಿಂಗಾಯತರು ಬೆಳೆಯುವುದು ಇವರಿಗೆ ಇಷ್ಟವಿಲ್ಲ ಓಕೆ. ಒಕ್ಕಲಿಗ ನಾಯಕರನ್ನಾದರೂ ಮಾಡಬಹುದಿತ್ತು. ಯಾಕೆ ಮಾಡಿಲ್ಲ ಎಂದು ಯಡಿಯೂರಪ್ಪ ಅವರನ್ನು ಪ್ರಶ್ನಿಸಿದರು.

ಇದನ್ನೂ ಓದಿ: ಕೆಎಸ್ ಈಶ್ವರಪ್ಪ ಸಂಧಾನ ವಿಫಲ; ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು

ಶೋಭಾ ಕರಂದ್ಲಾಜೆ ವಿರುದ್ಧ ಗೋಬ್ಯಾಕ್​ ಅಭಿಯಾನ ನಡೆದರೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ.ರವಿಗೆ ಟಿಕೆಟ್ ಯಾಕೆ​ ಕೊಡಿಸಲಿಲ್ಲ ಎಂದು ಯಡಿಯೂರಪ್ಪ ಅವರನ್ನು ಪ್ರಶ್ನಿಸಿದರು. ಪಕ್ಷವನ್ನ ಯಡಿಯೂರಪ್ಪ ಕಪಿಮುಷ್ಟಿಯಿಂದ ಮುಕ್ತಗೊಳಿಸಬೇಕು. ಪಕ್ಷ ಅಂದರೆ ತಾಯಿ, ತಾಯಿಯ ಕತ್ತು ಹಿಸುಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಎಲ್ಲರೂ ಕರೆಮಾಡಿ ನೀವು ಸ್ಪರ್ಧಿಸಬೇಕೆಂದು ಹೇಳುತ್ತಿದ್ದಾರೆ. ಎಲ್ಲ ಮೋರ್ಚಾದವರು ನನಗೆ ಕರೆ ಮಾಡುತ್ತಿದ್ದಾರೆ. ನೀವು ಚುನಾವಣಾ ನಿವೃತ್ತಿ ತೆಗೆದುಕೊಳ್ಳಬೇಡಿ ಅಂತಿದ್ದಾರೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು. ಅಲ್ಲದೆ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ ಅವರು, ನಾವು ದಿನನಿತ್ಯ ಕಾಂಗ್ರೆಸ್​ ಪಕ್ಷವನ್ನ ಟೀಕೆ ಮಾಡುತ್ತಿದ್ದೇವೆ. ಆದರೆ, ರಾಜ್ಯದಲ್ಲಿ ಬಿಜೆಪಿ ಕುಟುಂಬದ ಕೈಯಲ್ಲಿ ಸಿಲುಕಿದೆ ಎಂದರು.

ಇದನ್ನೂ ಓದಿ: ಯಡಿಯೂರಪ್ಪಗೆ ತಮ್ಮ ಮಕ್ಕಳು ಉದ್ಧಾರವಾಗೋದಷ್ಟೇ ಮುಖ್ಯ, ಪಕ್ಷದ ಸಂಘಟನೆ ಬೇಕಿಲ್ಲ: ಕೆಎಸ್ ಈಶ್ವರಪ್ಪ

ಇತ್ತೀಚೆಗೆ ಶಿವಮೊಗ್ಗದಲ್ಲಿ ಬೆಂಬಲಿಗರ ಸಭೆ ನಡೆಸಿದಾದ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ನಿರೀಕ್ಷೆ ಮೀರಿ ನನಗೆ ಬೆಂಬಲ ಸಿಕ್ಕಿದೆ. ಈಗಾಗಲೇ ನಾನು ಚುನಾವಣೆ ಸ್ಪರ್ಧೆ ನಿರ್ಧಾರ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ನಾನು ಹಿಂದೆ ಸರಿಯುವುದಿಲ್ಲ ಎಂದರು.

ನನ್ನ ಮಗನಿಗೆ ಟಿಕೆಟ್ ನೀಡಿದೆ ಮೋಸ ಮಾಡಿದ್ದಾರೆ. ತುಂಬಾ ನಾಯಕರಿಗೆ ಮೋಸ ಆಗಿದೆ. ಅವರಿಗೆ ಟಿಕೆಟ್ ಕೈತಪ್ಪಿಸಿದ್ದಾರೆ. ಕುಟುಂಬದ ಹಿಡಿತದಲ್ಲಿ ಪಕ್ಷ ಇದೆ. ಯಡಿಯೂರಪ್ಪ ಅವರ ಮೇಲೆ ವರಿಷ್ಠರು ನಂಬಿಕೆ ಇಟ್ಟಿದ್ದಾರೆ. ದೊಡ್ಡ ನಾಯಕರು ಎನ್ನುವ ಭ್ರಮೆಯಲ್ಲಿ ವರಿಷ್ಠರು ಇದ್ದಾರೆ. ಹಠ ಹಿಡಿದು ಮಗನಿಗೆ ರಾಜ್ಯಾಧ್ಯಕ್ಷ ಕೊಡಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ನಾನು ಕೊನೆಯವರೆಗೆ ಪಕ್ಷ ತಾಯಿ ಅಂತಾ ನಂಬಿದ್ದೇನೆ. ಪಕ್ಷ ಸೂಚನೆಯಂತೆ ನಾನು ನಡೆದುಕೊಂಡು ಬಂದಿದ್ದೇನೆ. ಈಗ ನಾನೂ ಸ್ಪರ್ಧೆ ಮಾಡುವ ಉದ್ದೇಶ ಕಪಿಮುಷ್ಠಿಯಿಂದ ಪಕ್ಷ ಹೊರಗೆ ಬರಬೇಕು. ಅಪ್ಪ ಮಕ್ಕಳ ಕೈಗೆ ಸಿಕ್ಕು ಪಕ್ಷ ಒದ್ದಾಡುತ್ತಿದೆ. ಯಡಿಯೂರಪ್ಪ ಕುಟುಂಬ ರಾಜಕಾರಣದಿಂದ ಪಕ್ಷ ಮುಕ್ತವಾಗಬೇಕಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:23 am, Sun, 17 March 24

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ