ಶಿವಮೊಗ್ಗದಲ್ಲಿ ಗೆದ್ದೇ ಗೆಲ್ಲುತ್ತೇನೆ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಈಗಾಗಲೇ ಟಿಕೆಟ್ ಪಡೆದುಕೊಂಡಿರುವ ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಶಿವಮೊಗ್ಗದಲ್ಲಿ ಈಗಾಗಲೇ ಮನೆ ಮಾಡಿದ್ದೇನೆ. ಓಡಾಟಕ್ಕೆ ಸಮಸ್ಯೆ ಇಲ್ಲ. ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದಿದ್ದಾರೆ. ಹಾಗಾದರೆ, ನಟ ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿ ಗೀತಾ ಬಗ್ಗೆ ಹೇಳಿದ್ದೇನು? ಇಲ್ಲಿದೆ ಮಾಹಿತಿ.

ಶಿವಮೊಗ್ಗದಲ್ಲಿ ಗೆದ್ದೇ ಗೆಲ್ಲುತ್ತೇನೆ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್
ಗೀತಾ ಶಿವರಾಜ್ ಕುಮಾರ್
Edited By:

Updated on: Mar 10, 2024 | 9:25 PM

ಬೆಂಗಳೂರು, ಮಾ.10: ನಾನು ಲೋಕಸಭೆ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಶಿವಮೊಗ್ಗ (Shivamogga) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ​ಕುಮಾರ್ (Geetha Shivaraj Kumar) ಹೇಳಿದ್ದಾರೆ. ಕಾಂಗ್ರೆಸ್​​ ಪಕ್ಷದಿಂದ ಟಿಕೆಟ್ ಪಡೆದ ಹಾಗೂ ಸಿದ್ಧತೆಗಳ ಬಗ್ಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಎಲ್ಲರೂ ಪರಿಚಿತರೇ ಇದ್ದಾರೆ. ಹೊಸಬರು ಯಾರಿಲ್ಲ. ಹೀಗಾಗಿ ಗೆಲ್ಲುವ ಭರವಸೆ ಇದೆ ಎಂದರು.

ಕಳೆದ ಒಂಬತ್ತು ವರ್ಷಗಳ ಹಿಂದೆ ಚುನಾವಣೆಗೆ ನಿಂತಿದ್ದೆ. ಆದರೆ ನಾನು 17 ದಿನ ಕೆಲಸ ಮಾಡಿದ್ದೆ. ಹೀಗಾಗಿ ಸೋಲಾಗಿತ್ತು ಅನಿಸುತ್ತದೆ. ಈ ಬಾರಿ ಹೆಚ್ಚಿನ ಸಮಯ ಶಿವಮೊಗ್ಗದಲ್ಲಿ ಇರುತ್ತೇನೆ. ನನ್ನ ಸಹೋದರ ಸಹ ಬೆಂಬಲವಾಗಿ ಇದ್ದಾನೆ. ಶಿವಮೊಗ್ಗದಲ್ಲಿ ಈಗಾಗಲೇ ಮನೆ ಮಾಡಿದ್ದೇನೆ. ಓಡಾಟಕ್ಕೆ ಸಮಸ್ಯೆ ಇಲ್ಲ. ಚುನಾವಣೆಯಲ್ಲಿ ಯಾರು ಭಾಗಿ ಆಗುತ್ತಾರೆ ಎಂದು ಇನ್ನೂ ಪ್ಲಾನ್ ಮಾಡಿಲ್ಲ, ಶಿವಣ್ಣ ಬರುವುದು ಖಚಿತ ಎಂದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಗೀತಾಗೆ ನನ್ನ ಫುಲ್ ಸಪೋರ್ಟ್: ಶಿವರಾಜ್ ಕುಮಾರ್

ಪತ್ನಿ ಗೀತಾಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿರುವ ಬಗ್ಗೆ ಮಾತನಾಡಿದ ನಟ ಶಿವರಾಜ್ ಕುಮಾರ್, ಗೀತಾಗೆ ರಾಜಕೀಯ ಎಷ್ಟು ಮುಖ್ಯವೋ ನನಗೆ ಸಿನಿಮಾ ಅಷ್ಟೇ ಮುಖ್ಯ. ನನ್ನ ಬೆಂಬಲ ಖಂಡಿತ ಇರುತ್ತದೆ. ಇದು ಚುನಾವಣೆ ಮಾತ್ರ, ನಾನು ಗೆಲ್ಲುತ್ತೇನೆ ಎಂಬ ಭರವಸೆ ಇರಲೇಬೇಕು ಎಂದರು. ಪ್ರಚಾರದ ಬಗ್ಗೆ ಮಾತನಾಡಿದ ಅವರು, ನನ್ನ ಒತ್ತಾಯಕ್ಕೆ ಯಾರು ಕೂಡ ಗೀತಾ ಪರ ಪ್ರಚಾರಕ್ಕೆ ಬರುವುದು ಬೇಡ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Sun, 10 March 24