ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆಯಾಗುತ್ತೆ, ಹೀಗಾಗಿ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ; ಬಿ ಸಿ ನಾಗೇಶ್

| Updated By: sandhya thejappa

Updated on: Sep 11, 2021 | 11:22 AM

ರಾಜ್ಯದಲ್ಲಿ 1ರಿಂದ 5ನೇ ತರಗತಿಯವರೆಗೆ ಶಾಲೆ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಶೀಘ್ರವೇ ತಾಂತ್ರಿಕ ಸಮಿತಿ ಸಭೆ ನಡೆಸುತ್ತೇವೆ. ಶಾಲೆ ಆರಂಭಿಸುವ ಬಗ್ಗೆ ತಾಂತ್ರಿಕ ಸಮಿತಿ ಜೊತೆ ಚರ್ಚಿಸುತ್ತೇವೆ.

ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆಯಾಗುತ್ತೆ, ಹೀಗಾಗಿ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ; ಬಿ ಸಿ ನಾಗೇಶ್
ಸಾಂದರ್ಭಿಕ ಚಿತ್ರ
Follow us on

ಶಿವಮೊಗ್ಗ: ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಈ ಬಗ್ಗೆ ಇನ್ನೂ ಯಾವುದೇ ನಿರ್ಣಯ ಕೈಗೊಂಡಿಲ್ಲ. ಪಠ್ಯ ಪೂರ್ಣಗೊಳಿಸಿದರೆ ಮಕ್ಕಳಿಗೆ ಅನುಕೂಲವಾಗುತ್ತದೆ. ಒಂದೂವರೆ ವರ್ಷ ಶಾಲೆಯಿಂದ ದೂರ ಉಳಿದಿದ್ದಾರೆ. ಇದನ್ನು ಬ್ರಿಡ್ಜ್ ಕೋರ್ಸ್​ನಲ್ಲಿ ಪೂರ್ಣಗೊಳಿಸಬೇಕಿದೆ. ಶಿಕ್ಷಕರ ಸಹಕಾರ ನೋಡಿ ಅಗತ್ಯಬಿದ್ದರೆ ತೀರ್ಮಾನಿಸುತ್ತೇವೆ. ಪಠ್ಯ ಕಡಿತಗೊಳಿಸುವ ಬಗ್ಗೆ ಪ್ರಯತ್ನ ಮಾಡುತ್ತೇವೆ ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ 1ರಿಂದ 5ನೇ ತರಗತಿಯವರೆಗೆ ಶಾಲೆ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಶೀಘ್ರವೇ ತಾಂತ್ರಿಕ ಸಮಿತಿ ಸಭೆ ನಡೆಸುತ್ತೇವೆ. ಶಾಲೆ ಆರಂಭಿಸುವ ಬಗ್ಗೆ ತಾಂತ್ರಿಕ ಸಮಿತಿ ಜೊತೆ ಚರ್ಚಿಸುತ್ತೇವೆ. ತಾಂತ್ರಿಕ ಸಮಿತಿ ಸಭೆ ಅನುಮತಿ ನೀಡಿದ ಬಳಿಕ ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಹಾಗೇ, 6, 7, 8ನೇ ತರಗತಿಗಳನ್ನು ಶಿಕ್ಷಕರು ಚೆನ್ನಾಗಿ ನಡೆಸಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೋಂಕು ಕಡಿಮೆ ಆಗುತ್ತಿದೆ. ಕೊವಿಡ್ ಹೆಚ್ಚಾದರೆ ಶಾಲೆ ತಕ್ಷಣ ನಿಲ್ಲಿಸುವ ಅವಕಾಶ ಇದೆ. ಶಾಲೆಗಳನ್ನು ತಕ್ಷಣ ನಿಲ್ಲಿಸುವ ಅವಕಾಶ ಸರ್ಕಾರಕ್ಕೆ ಇದೆ. ಕೊರೊನಾ ಹೆಚ್ಚಾದ ಸಂದರ್ಭದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಈ ವೇಳೆ ಶಿಕ್ಷಕರ ವರ್ಗಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಧ್ಯಾಪಕರು ಏಕೆ ಈ ರೀತಿ ವರ್ಗಾವಣೆ ಮಾಡುತ್ತಿದ್ದಾರೆ ಗೊತ್ತಿಲ್ಲ. ಕಳೆದ 3 ವರ್ಷದಿಂದ ಶಿಕ್ಷಕರ ವರ್ಗಾವಣೆ ನೆನೆಗುದಿಗೆ ಬಿದ್ದಿದೆ. ಮೂರು ವರ್ಷದಿಂದ ಸತತವಾಗಿ ಕೋರ್ಟ್ಗೆ ಹೋಗಿ ಸ್ಟೇ ತರುತ್ತಿದ್ದಾರೆ. ಹೀಗಾಗಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಗುತ್ತಿದೆ. ಸರ್ಕಾರದಿಂದ ಅಪೀಲ್ ಹೋಗುತ್ತೇವೆ. ಸ್ಟೇ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ

ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಅಭಿಮಾನಿಯಿಂದ ರೂಲ್ಸ್ ಬ್ರೇಕ್!

ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್​ಗೆ ಕುರಿಗಳನ್ನು ಕೊಡುಗೆಯಾಗಿ ನೀಡಿದ ಕಾಂಗ್ರೆಸ್​​ ಕಾರ್ಯಕರ್ತ