Crime News: ಅಕ್ರಮ ಗೋಸಾಗಾಟ ಮಾಡುತ್ತಿದ್ದ ವಾಹನ ಬೆನ್ನತ್ತಿದ ಯುವಕರು, ಲಾರಿ ಚಾಲಕನ ಅಜಾಗ್ರತೆಯಿಂದ ಉರುಳಿದ 9 ಕಂಬ

| Updated By: ganapathi bhat

Updated on: Nov 30, 2021 | 7:04 PM

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಗಿ ಗ್ರಾಮದಿಂದ ಸುಮಾರು 20 ಕಿ.ಮೀ.ವರೆಗೆ ಯುವಕರು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನ ಬೆನ್ನತ್ತಿದ್ದಾರೆ. ಈ ವೇಳೆ, ಮಿನಿ ಲಾರಿ ಡಿಕ್ಕಿಯಾಗಿ ಚರಣ್, ಕಿರಣ್​ ಎಂಬವರಿಗೆ ಗಂಭೀರ ಗಾಯ ಆಗಿದೆ.

Crime News: ಅಕ್ರಮ ಗೋಸಾಗಾಟ ಮಾಡುತ್ತಿದ್ದ ವಾಹನ ಬೆನ್ನತ್ತಿದ ಯುವಕರು, ಲಾರಿ ಚಾಲಕನ ಅಜಾಗ್ರತೆಯಿಂದ ಉರುಳಿದ 9 ಕಂಬ
ಸಾಂದರ್ಭಿಕ ಚಿತ್ರ
Follow us on

ಶಿವಮೊಗ್ಗ: ಗೃಹ ಸಚಿವರ ತವರು ಕ್ಷೇತ್ರದಲ್ಲಿ ಅಕ್ರಮ ಗೋಸಾಗಣೆ ಪತ್ತೆ ಆಗಿದೆ. ಜಾನುವಾರು ಸಾಗಿಸುತ್ತಿದ್ದ ಮಿನಿ ಲಾರಿಯನ್ನು ಯುವಕರು ಬೆನ್ನತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಗಿ ಗ್ರಾಮದಿಂದ ಸುಮಾರು 20 ಕಿ.ಮೀ.ವರೆಗೆ ಯುವಕರು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನ ಬೆನ್ನತ್ತಿದ್ದಾರೆ. ಈ ವೇಳೆ, ಮಿನಿ ಲಾರಿ ಡಿಕ್ಕಿಯಾಗಿ ಚರಣ್, ಕಿರಣ್​ ಎಂಬವರಿಗೆ ಗಂಭೀರ ಗಾಯ ಆಗಿದೆ. ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೇಳಗಿಯಿಂದ ಕೆಎ 17, ಸಿ 0624 ವಾಹನದಲ್ಲಿ ಜಾನುವಾರು ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಬಳಿಕ, ಆಸ್ಪತ್ರೆಗೆ ತೆರಳಿದ ಗೃಹಸಚಿವ ಆರಗ ಜ್ಞಾನೇಂದ್ರ ಯುವಕರ ಆರೋಗ್ಯ ವಿಚಾರಿಸಿದ್ದಾರೆ. ಯುವಕರ ಚಿಕಿತ್ಸಾ ವೆಚ್ಚಕ್ಕೆ 35 ಸಾವಿರ ರೂ. ಧನ ಸಹಾಯ ಮಾಡಿದ್ದಾರೆ. ಇಬ್ಬರ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಆರಗ ಜ್ಣಾನೇಂದ್ರ ಹೇಳಿಕೆ ನೀಡಿದ್ದಾರೆ. ಯುವಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಾಳೂರು ಪೊಲೀಸರಿಂದ ಅಕ್ರಮ ಗೋಸಾಗಣೆ ವಾಹನ ಜಪ್ತಿ ಮಾಡಲಾಗಿದೆ. ಇಬ್ಬರು ಆರೋಪಿಗಳ ಬಂಧಿಸಲಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮಿನಿ ಲಾರಿಯಲ್ಲಿ 3 ಹಸು, 2 ಎಮ್ಮೆ ಇತ್ತು ಎಂದು ತಿಳಿದುಬಂದಿದೆ. ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಗಂಭೀರ ಘಟನೆ ನಡೆದಿದೆ. ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಗೋಮಾಂಸ ದಂಧೆಗೆ ಇಂತಹ ದುಷ್ಕೃತ್ಯಗಳು ನಡೆಯುತ್ತಿವೆ. ಈಗಾಗಲೇ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರಿಗೆ ಸೂಚಿಸಲಾಗಿದೆ. ಸ್ಥಳೀಯರ ಸಹಕಾರದಿಂದ ಇಂತಹ ಅಕ್ರಮ ಗೋಸಾಗಣೆ ದಂಧೆ, ಗೋವುಗಳ ಮಾರಾಟ ಮಾಡುವವರ ಮೇಲೆ ನಿಗಾವಹಿಸುತ್ತೇವೆ. ಕಟುಕರಿಗೆ ಗೋವುಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡುತ್ತೇವೆ ಎಂದು ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಯಾದಗಿರಿ: ಮೇಲಧಿಕಾರಿಗಳ ಕಿರುಕುಳ ಆರೋಪ KSRTC ನೌಕರ ಆತ್ಮಹತ್ಯೆ
ಮೇಲಧಿಕಾರಿಗಳ ಕಿರುಕುಳ ಆರೋಪದಿಂದ KSRTC ನೌಕರ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಯಾದಗಿರಿ ಜಿಲ್ಲೆ ಗುರುಮಠಕಲ್​ನ ಲಕ್ಷ್ಮೀ ನಗರದಲ್ಲಿ ನಡೆದಿದೆ. ನೇಣು ಹಾಕಿಕೊಂಡು ಬಸ್ ಚಾಲಕ ಕಾಶಿನಾಥ್ (40) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ಉದನೂರು ಗ್ರಾಮದ ನಿವಾಸಿ ಕಾಶಿನಾಥ್, 11 ವರ್ಷದಿಂದ ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದೀಗ, ಗುರುಮಠಕಲ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನೆಲಮಂಗಲ: ಮನೆ ಬಳಿ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ
ಮನೆ ಬಳಿ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ನಡೆದಿದೆ. ನಂದೀಶ್ ಎಂಬುವವರ ಮಹೀಂದ್ರಾ ಕಾರು ಸುಟ್ಟು ಭಸ್ಮವಾಗಿದೆ. ಬೇಕಂತಲೇ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಮನಗರ: ಪಣಕನಕಲ್ಲು ಗ್ರಾಮದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಪಣಕನಕಲ್ಲು ಗ್ರಾಮದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಹಸು ಮೇಯಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ಮಹದೇವಮ್ಮ ಗಾಯಗೊಂಡಿದ್ದಾರೆ. ಮಹದೇವಮ್ಮ ಅವರನ್ನು ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಮನಗರ: ಲಾರಿ ಚಾಲಕನ ಅಜಾಗರೂಕತೆಯಿಂದ ಧರೆಗುರುಳಿದ 9 ಕಂಬ
ರಾಮನಗರದ ಕೆಂಪೇಗೌಡ ವೃತ್ತದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಲಾರಿ ಚಾಲಕನ ಅಜಾಗರೂಕತೆಯಿಂದ 9 ಕಂಬ ಧರೆಗುರುಳಿದೆ. ನೀಲಗಿರಿ ಪೋಲ್​ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯಿಂದ 9 ಕಂಬಗಳು ಉರುಳಿ ಬಿದ್ದಿವೆ. ಈ ವೇಳೆ ವಿದ್ಯುತ್​ ಕಂಬಕ್ಕೆ ನೀಲಗಿರಿ ಪೋಲ್​ಗಳು ಸಿಲುಕಿವೆ. ಇದನ್ನು ಗಮನಿಸದೆ ಚಾಲಕ ಲಾರಿ ಮುಂದಕ್ಕೆ ಚಲಾಯಿಸಿದ್ದ. ಈ ವೇಳೆ, ಒಂದರ ಹಿಂದೆ ಒಂದರಂತೆ 9 ವಿದ್ಯುತ್ ಕಂಬಗಳು ಧರೆಗುರುಳಿದೆ. ನೀಲಗಿರಿ ಪೋಲ್ ಸಾಗಿಸುತ್ತಿದ್ದ ಲಾರಿ ಜಪ್ತಿ ಮಾಡಲಾಗಿದೆ. ಡ್ರೈವರ್ ವಶಕ್ಕೆ ಪಡೆಯಲಾಗಿದೆ. ರಾಮನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime News: ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿ ದರೋಡೆ, ಬಾರ್​ನಲ್ಲಿದ್ದ ಕಾಣಿಕೆ ಡಬ್ಬಿ ಕಳವು, ಹುಲಿಹೈದರ್ ಗ್ರಾಮದಲ್ಲಿ ಮತ್ತೆ ದೌರ್ಜನ್ಯ

ಇದನ್ನೂ ಓದಿ: Crime News: ಗನ್​ ಜೊತೆ ಸೆಲ್ಫೀ ಕ್ಲಿಕ್ಕಿಸುವಾಗ ಹಣೆಗೆ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಸಾವು!