ಸಿಎಂ ಡಿಕೆಶಿ ವೈಯಕ್ತಿಕ ಸಹಾಯಕ ಎಂದು ಸುಳ್ಳು ಹೇಳಿ 15 ಲಕ್ಷ ರೂ. ವಂಚನೆ: ಆರೋಪಿ ಅರೆಸ್ಟ್​​

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (PA) ಎಂದು ಸುಳ್ಳು ಹೇಳಿ, ರಿಕ್ರಿಯೇಷನ್ ಕ್ಲಬ್ ಪರವಾನಗಿ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ರೈತರೊಬ್ಬರಿಗೆ 15 ಲಕ್ಷ ವಂಚಿಸಿದ್ದ ಆರೋಪಿಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಇದೇ ರೀತಿಯ ವಿಧಾನ ಬಳಸಿ ಆರೋಪಿ ಇನ್ನೂ ಯಾರಿಗಾದರೂ ವಂಚನೆ ಮಾಡಿದ್ದಾನೆಯೇ ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಎಂ ಡಿಕೆಶಿ ವೈಯಕ್ತಿಕ ಸಹಾಯಕ ಎಂದು ಸುಳ್ಳು ಹೇಳಿ 15 ಲಕ್ಷ ರೂ. ವಂಚನೆ: ಆರೋಪಿ ಅರೆಸ್ಟ್​​
ಸಾಂದರ್ಭಿಕ ಚಿತ್ರ
Image Credit source: Getty Images

Updated on: Jul 30, 2026 | 6:33 PM

ಮುಖ್ಯಾಂಶಗಳು

  • ಸಿಎಂ ಡಿಕೆಶಿ ಪಿಎ ಎಂದು ಸುಳ್ಳು ಹೇಳಿ ವಂಚನೆ
  • ಬರೋಬ್ಬರಿ 15 ಲಕ್ಷ ರೂಪಾಯಿ ಪೀಕಿದ ಆರೋಪಿ
  • ಶಿವಮೊಗ್ಗ ಪೊಲೀಸರಿಂದ ಆರೋಪಿಯ ಬಂಧನ

ಶಿವಮೊಗ್ಗ, ಜುಲೈ 30: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (ಪಿಎ) ಎಂದು ಸುಳ್ಳು ಹೇಳಿ, ರಿಕ್ರಿಯೇಷನ್ ಕ್ಲಬ್ ಪರವಾನಗಿ ಕೊಡಿಸುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ವಂಚನೆ ಮಾಡಿದ್ದ ಆರೋಪದಡಿ ತುಂಗಾನಗರ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಕೆಎಚ್‌ಬಿ ಕಾಲೊನಿಯ ರೈತ ಮಂಜುನಾಥ್ ಹಂಜಿ ನೀಡಿದ ದೂರಿನ ಮೇರೆಗೆ, ತುಂಗಾನಗರ ಪೊಲೀಸರು ಆರೋಪಿ ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು ಎನ್ನಲಾಗಿದೆ.

ಪೊಲೀಸರ ಪ್ರಕಾರ, ಆರೋಪಿ ಹೇಮಂತ್ ಕುಮಾರ್ ತಾನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಿಎ ಎಂದು ಸುಳ್ಳು ಹೇಳಿ, ರಿಕ್ರಿಯೇಷನ್ ಕ್ಲಬ್ ಪರವಾನಗಿ ಪಡೆಸಿಕೊಡುವುದಾಗಿ ಭರವಸೆ ನೀಡಿದ್ದ. ಈ ನೆಪದಲ್ಲಿ ಫೋನ್‌ಪೇ ಮೂಲಕ ಹಾಗೂ ಶಿವಮೊಗ್ಗದ ಸಾಯಿ ಇಂಟರ್‌ನ್ಯಾಷನಲ್ ಹೋಟೆಲ್ ಮತ್ತು ವಡ್ಡಿನಕೊಪ್ಪ ಪ್ರದೇಶದಲ್ಲಿ ನಗದು ರೂಪದಲ್ಲಿ ಒಟ್ಟು 15 ಲಕ್ಷ ಹಣವನ್ನು ಪಡೆದುಕೊಂಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೆ ಲಕ್ಷಾಂತರ ರೂ. ವಂಚನೆ: ಕಿಂಗ್‌ಪಿನ್ ರಾಹುಲ್ ಅರೆಸ್ಟ್!

ಆರೋಪಿಗೆ ನ್ಯಾಯಾಂಗ ಬಂಧನ

ಹಣ ಪಡೆದ ಬಳಿಕ ಪರವಾನಗಿ ಕೊಡಿಸದೇ, ಹಣವನ್ನೂ ಹಿಂತಿರುಗಿಸದೇ ಆರೋಪಿ ತಲೆಮರೆಸಿಕೊಂಡಿದ್ದನು.ಈ ಹಿನ್ನೆಲೆ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ತುಂಗಾನಗರ ಪೊಲೀಸರು ಆರೋಪಿ ಹೇಮಂತ್ ಕುಮಾರ್‌ನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಮಾತನಾಡಿ, ಇದೇ ರೀತಿಯ ವಿಧಾನ ಬಳಸಿ ಆರೋಪಿ ಇನ್ನೂ ಯಾರಿಗಾದರೂ ವಂಚನೆ ಮಾಡಿದ್ದಾನೆಯೇ ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿರೋದಾಗಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:45 pm, Thu, 30 July 26

Loading...
Unable to load recommendations.
Follow Us