ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಕ್ಷುಲ್ಲಕ ಕಾರಣಗಳಿಗೆ ಅಮೂಲ್ಯವಾದ ಜೀವನವನ್ನು ಅಂತ್ಯಗೊಳಿಸುತ್ತಿದ್ದಾರೆ. ಅದರಂತೆ ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.

ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 09, 2024 | 2:39 PM

ಶಿವಮೊಗ್ಗ, ಆ.09: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಚಂಪಾಕಪುರ ನಿವಾಸಿ ವಾಣಿ (32) ಮತ್ತು ಮಕ್ಕಳಾದ ಸಮರ್ಥ (12), ಸಂಪದ (6) ಮೃತರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನಗರ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ರವಾನೆ ಮಾಡಲಾಗಿದ್ದು, ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸಂಬಳ ಬಾರದಕ್ಕೆ ರಾಯಚೂರು ನಗರಸಭೆ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನ

ರಾಯಚೂರು: ನಗರದ ಮಂಗಳವಾರಪೇಟೆಯಲ್ಲಿ ಸಂಬಳ ಬಾರದ ಹಿನ್ನೆಲೆ ರಾಯಚೂರು ನಗರಸಭೆ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಅಫ್ಸರ್ ಅಲಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ನೌಕರ. ರಾಯಚೂರು ನಗರಸಭೆಯಲ್ಲಿ ವಿದ್ಯುತ್ ನಿರ್ವಹಣಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಫ್ಸರ್​ಗೆ ಕಳೆದ 7 ತಿಂಗಳಿಂದ ಸಂಬಳ ಬಾರದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 15 ವರ್ಷಗಳಿಂದ ನಗರಸಭೆಯಲ್ಲಿ ಅಫ್ಸರ್ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಆತ್ಮಹತ್ಯೆಗೆ ಯತ್ನಿಸಿದ ಅಫ್ಸರ್​​ಗೆ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ‌ ನೀಡಲಾಗುತ್ತಿದೆ. ಸದರಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ:ಇಬ್ಬರು ಪೊಲೀಸ್ ಇನ್ಸ್​ಪೆಕ್ಟರ್ ಅನುಮಾನಸ್ಪದ​​​ ಸಾವಿನ ಬೆನ್ನಲ್ಲೇ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯ ಆತ್ಮಹತ್ಯೆ

ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ

ಬಾಗಲಕೋಟೆ: ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ನಿನ್ನೆ(ಆ.08) ರಾತ್ರಿ ಅಂತರ್ಜಾತಿ ಮದುವೆಗೆ ಪೋಷಕರ‌ ವಿರೋಧದ ಹಿನ್ನಲೆ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ. ಹುಡುಗನ ಮನೆಯಲ್ಲಿ ಮದುವೆಗೆ ವಿರೋಧ ಎಂಬ ಮಾಹಿತಿಯಿದ್ದು, ಇದೇ ಕಾರಣಕ್ಕೆ ಮನನೊಂದು ಹುಡುಗನ ಹೊಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳು. ಘಟನಾ ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:33 pm, Fri, 9 August 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ