ಕೌಟುಂಬಿಕ ಕಲಹ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ

ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದರಂತೆ ಇದೀಗ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೌಟುಂಬಿಕ ಕಲಹ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ
ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 06, 2024 | 5:53 PM

ಶಿವಮೊಗ್ಗ, ಸೆ.06: ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಸದಾನಂದ ಭಟ್ ಆತ್ಮಹತ್ಯೆ ಮಾಡಿಕೊಂಡ ಪತಿ. ಹಲ್ಲೆಗೊಳಗಾದ ಪತ್ನಿ ಸಬೀತಾಗೆ ರಿಪ್ಪನ್ ಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ(ಸೆ.05) ಪಟಗುಪ್ಪ ಸೇತುವೆ ಮೇಲಿಂದ ಸದಾನಂದ ಭಟ್ ಹಾರಿದ್ದರು. ಇಂದು ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಈ ಕುರಿತು ರಿಪ್ಪನ್ ಪೇಟೆ ಹಾಗೂ ಹೊಸನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತಕ್ಕೆ ಪೊಲೀಸ್ ಹೆಡ್ ಕಾನಸ್ಟೇಬಲ್ ಸಾವು

ಗದಗ: ನಗರದ ಭೂಮರೆಡ್ಡಿ ಸರ್ಕಲ್​ನಲ್ಲಿ ಕಾಂಕ್ರಿಟ್​​ ಮಿಕ್ಸಿಂಗ್ ವಾಹನ ಹರಿದು ಹೆಡ್​ ಕಾನ್​ಸ್ಟೇಬಲ್​ ರಮೇಶ್ ಡಂಬಳ(42) ಎಂಬುವವರು ಸಾವನ್ನಪ್ಪಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆಯ ಹೆಡ್​ಕಾನ್​​ಸ್ಟೇಬಲ್ ಆಗಿದ್ದ ರಮೇಶ್, ಮನೆಯಲ್ಲಿ ನಾಳೆ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಹೊಂಡಾ ಎಕ್ಟಿವಾ ವಾಹನದಲ್ಲಿ ಹೆಡ್ ಕಾನಸ್ಟೇಬಲ್ ಹಾಗೂ ಆತ ಸಾಕಿದ ನಾಯಿ ಕರೆದುಕೊಂಡು ಹೂವು-ಹಣ್ಣು ಸೇರಿ ಪೂಜೆ ಸಾಮಾಗ್ರಿಗಳನ್ನು ಖರೀದಿ ಮಾಡಿಕೊಂಡು ಮನೆ‌ಗೆ ಹೊರಟ್ಟಿದ್ದರು.

ಮೃತ ಹೆಡ್​ಕಾನ್​​ಸ್ಟೇಬಲ್

ಇದನ್ನೂ ಓದಿ:ಪೋಷಕರಿಗೆ ಕ್ಷಮೆ ಕೋರಿ ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ, ದೇಹದ ಅರ್ಧ ಭಾಗಕ್ಕೆ ಹುಡುಕಾಟ

ಈ ವೇಳೆ ಯಮನಂತೆ ಆಗಮಿಸಿದ ಕಾಂಕ್ರಿಟ್​​ ಮಿಕ್ಸಿಂಗ್ ವಾಹನ ಹರಿದು ಘಟನೆಯಲ್ಲಿ ಮಾಲೀಕ ಸಾವನ್ನಪ್ಪಿದರೆ, ಸಾಕಿದ ನಾಯಿ ಬಚಾವ್ ಆಗಿದೆ. ಇತ್ತ ಮಾಲೀಕನ ಸಾವಿನಿಂದ ನಾಯಿ ಕಂಗಾಲಾಗಿದ್ದು, ಮನೆಯವರ ದುಖಃ ಮುಗಿಲುಮುಟ್ಟಿದೆ. ಸ್ಥಳಕ್ಕೆ ಡಿವೈಎಸ್​ಪಿ ಜೆ.ಹೆಚ್​.ಇನಾಮದಾರ, ಸಿಪಿಐ ಶಿವಯೋಗಿ ಹಾಗೂ ಪಿಎಸ್ಐ ಶಕುಂತಲಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Fri, 6 September 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್