ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್; ಮನನೊಂದ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ

ಸಾಗರ ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ವಿದ್ಯಾರ್ಥಿಯೋರ್ವ, ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್​ ಆಗಿದ್ದಕ್ಕೆ ಮನನೊಂದು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ಮಗಳಿಗೆ ಬುತ್ತಿ ಕೊಡಲು ತೆರಳುತ್ತಿದ್ದ ಮಹಿಳೆ ಹಾಗೂ ಯುವಕನ ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೆ ಸಾವನ್ನಪ್ಪಿದ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿ ನಡೆದಿದೆ.

ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್; ಮನನೊಂದ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ
ಮೃತ ವಿದ್ಯಾರ್ಥಿ ಮನುಷ್ ಡಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 14, 2024 | 6:15 PM

ಶಿವಮೊಗ್ಗ, ಜು.14: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್​ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಗರ(Sagara) ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ನಡೆದಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ವ್ಯಾಸಾಂಗ ಮಾಡುತಿದ್ದ ವಿದ್ಯಾರ್ಥಿ ಮನುಷ್ ಡಿ (19) ಮೃತ ರ್ದುದೈವಿ. ಇತ ಸೆಮಿಸ್ಟರ್ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದ.

ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು

ಹೌದು, ಇತ್ತೀಚೆಗೆ ನಡೆದಿದ್ದ ಸೆಮಿಸ್ಟರ್​ ವಿಷಯದಲ್ಲಿ ಅನುತ್ತೀರ್ಣನಾಗಿದ್ದ. ಇದರಿಂದ ಬೇಸತ್ತು ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸದಲ್ಲಿ ಕಳೆನಾಶಕ ಸೇವಿಸಿದ್ದಾನೆ. ವಿಷಯ ತಿಳಿದ ಕೂಡಲೇ ವಿದ್ಯಾರ್ಥಿ ಮನುಷ್​ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಆನಂದಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಳೆ ಹಾನಿ, ಬರ; ಬಾಗಲಕೋಟೆ ಜಿಲ್ಲೆಯಲ್ಲಿ ಒಂದೂವರೆ ವರ್ಷದಲ್ಲಿ 24 ರೈತರು ಆತ್ಮಹತ್ಯೆಗೆ ಶರಣು

ಅಪರಿಚಿತ ವಾಹನ ಡಿಕ್ಕಿ; ಬೈಕ್​ನಲ್ಲಿದ್ದ ಮಹಿಳೆ, ಬಾಲಕ ಸಾವು

ಕೊಪ್ಪಳ: ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮಹಿಳೆ ಹಾಗೂ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕಡೇಕೊಪ್ಪ ಗ್ರಾಮದ ರುಕ್ಮಿಣಿ(36), ವಿಜಯ್(13) ಮೃತ ದುರ್ದೈವಿಗಳು. ಕಡೇಕೊಪ್ಪ ಗ್ರಾಮದ ಬಳಿ ಡಾಬಾ ನಡೆಸುತ್ತಿದ್ದ ಮೃತ ರುಕ್ಮಿಣಿ, ಮಗಳಿಗೆ ಬುತ್ತಿ ಕೊಡಲು ಬಾಗಲಕೋಟೆ ಜಿಲ್ಲೆಯ ಇಳಕಲ್​​ಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಕುಷ್ಟಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ