ಶಿವಮೊಗ್ಗ, ಜು.14: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಗರ(Sagara) ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ನಡೆದಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ವ್ಯಾಸಾಂಗ ಮಾಡುತಿದ್ದ ವಿದ್ಯಾರ್ಥಿ ಮನುಷ್ ಡಿ (19) ಮೃತ ರ್ದುದೈವಿ. ಇತ ಸೆಮಿಸ್ಟರ್ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದ.
ಹೌದು, ಇತ್ತೀಚೆಗೆ ನಡೆದಿದ್ದ ಸೆಮಿಸ್ಟರ್ ವಿಷಯದಲ್ಲಿ ಅನುತ್ತೀರ್ಣನಾಗಿದ್ದ. ಇದರಿಂದ ಬೇಸತ್ತು ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸದಲ್ಲಿ ಕಳೆನಾಶಕ ಸೇವಿಸಿದ್ದಾನೆ. ವಿಷಯ ತಿಳಿದ ಕೂಡಲೇ ವಿದ್ಯಾರ್ಥಿ ಮನುಷ್ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಆನಂದಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಳೆ ಹಾನಿ, ಬರ; ಬಾಗಲಕೋಟೆ ಜಿಲ್ಲೆಯಲ್ಲಿ ಒಂದೂವರೆ ವರ್ಷದಲ್ಲಿ 24 ರೈತರು ಆತ್ಮಹತ್ಯೆಗೆ ಶರಣು
ಕೊಪ್ಪಳ: ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮಹಿಳೆ ಹಾಗೂ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕಡೇಕೊಪ್ಪ ಗ್ರಾಮದ ರುಕ್ಮಿಣಿ(36), ವಿಜಯ್(13) ಮೃತ ದುರ್ದೈವಿಗಳು. ಕಡೇಕೊಪ್ಪ ಗ್ರಾಮದ ಬಳಿ ಡಾಬಾ ನಡೆಸುತ್ತಿದ್ದ ಮೃತ ರುಕ್ಮಿಣಿ, ಮಗಳಿಗೆ ಬುತ್ತಿ ಕೊಡಲು ಬಾಗಲಕೋಟೆ ಜಿಲ್ಲೆಯ ಇಳಕಲ್ಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಕುಷ್ಟಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ