AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ದುರ್ಮರಣ

ವಾಹನ ಚಲಾಯಿಸುವಾಗ ಎಷ್ಟೇ ಕಟ್ಟೇಚ್ಚರ ವಹಿಸಿದರು ಕಡಿಮೆಯೇ, ಅದರಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ(Thirthahalli)ಯ ಅಗಸರಕೋಣೆ ಬಳಿ ಪಿಕಪ್​​ ವಾಹನ ಹಾಗೂ ಬೈಕ್​ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ದುರ್ಮರಣ
ಶಿವಮೊಗ್ಗ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ
Basavaraj Yaraganavi
| Edited By: |

Updated on:Aug 13, 2024 | 8:26 PM

Share

ಶಿವಮೊಗ್ಗ, ಆ.13: ಪಿಕಪ್​​ ವಾಹನ ಹಾಗೂ ಬೈಕ್​ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ(Thirthahalli)ಯ ಅಗಸರಕೋಣೆ ಬಳಿ ನಡೆದಿದೆ. ಬೈಕ್​ನಲ್ಲಿದ್ದ ಓರ್ವ ಹಾಗೂ ಪಿಕಪ್​ ವಾಹನದಲ್ಲಿದ್ದ ಸೇರಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಗಸರಕೋಣೆ ನಿವಾಸಿ ಶರತ್ ಹಾಗೂ ಕೇರಳದ ಮೂಲದ ವ್ಯಕ್ತಿ ಮೃತ ರ್ದುದೈವಿಗಳು. ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಗೋಡೆ ಕುಸಿದು 85 ವರ್ಷದ ವೃದ್ಧೆ ಸಾವು

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರಿನಲ್ಲಿ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ ಘಟನೆ ನಡೆದಿದೆ. ರಂಗಮ್ಮ(85) ಮೃತ ರ್ದುದೈವಿ. ಪುತ್ರಿ ಲಕ್ಷ್ಮಮ್ಮ ಹಾಗೂ ಪುತ್ರ ಪುಟ್ಟರಂಗಯ್ಯ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ಮಳೆಯಿಂದ ನೆನೆದಿದ್ದ ಮನೆ ಗೋಡೆ ಇದ್ದಕ್ಕಿದ್ದಂತೆ ಕುಸಿದಿದೆ.

ಇದನ್ನೂ ಓದಿ:ಹಾಲಿನ ಟ್ಯಾಂಕರ್​ಗೆ ಲಾರಿ ಡಿಕ್ಕಿ, ಮಾನವೀಯತೆ ಮರೆತು ಹಾಲಿಗಾಗಿ ಸ್ವಾರ್ಥಿಯಾದ ಜನ

ಗಾಂಜಾ ಮಾರಾಟ ಮಾಡ್ತಿದ್ದ 9 ಆರೋಪಿಗಳ ಬಂಧನ

ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡುತ್ತಿದ್ದ 9 ಆರೋಪಿಗಳನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೀರಜ್​​ನ ಆಶ್ಪಾಕ್, ಶಿವಕುಮಾರ್, ಇಕ್ಬಾಲ್ ಅಹ್ಮದ್, ಆರೀಫ್, ಅಭಿಷೇಕ್, ಅಮೃತ್, ಮೊಹೈದರ್ ಗೋಕಾಕ್, ಸಾದಿಕ್, ಮೆಹಬೂಬ್ ಮಕಾಂದರ್ ಬಂಧಿತರು. ಬಂಧಿತರ ಬಳಿ ಇದ್ದ 1 ಲಕ್ಷ 25 ಸಾವಿರ ಮೌಲ್ಯದ ಗಾಂಜಾ, ಮೊಬೈಲ್ ಹಾಗೂ ನಗದನ್ನು ಜಪ್ತಿ ಮಾಡಲಾಗಿದೆ. ಈ ಆರೋಪಿಗಳು ಮೀರಜ್​ನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 pm, Tue, 13 August 24

ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..!
ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..!
ಕೆಟ್ಟದ್ದು ಸಂಭವಿಸುವ ಮುನ್ನ ಯಾವೆಲ್ಲಾ ಸೂಚನೆಗಳು ಕಾಣಿಸುತ್ತೆ?
ಕೆಟ್ಟದ್ದು ಸಂಭವಿಸುವ ಮುನ್ನ ಯಾವೆಲ್ಲಾ ಸೂಚನೆಗಳು ಕಾಣಿಸುತ್ತೆ?
ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ
ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್