ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್ ಆಗಲು ಪರದಾಡಿದ ಯಡಿಯೂರಪ್ಪ ಇದ್ದ ವಿಮಾನ
ಹವಾಮಾನ ಸಮಸ್ಯೆಯಿಂದಾಗಿ ಇತ್ತೀಚೆಗಷ್ಟೇ ವಿಮಾನವೊಂದು ಶಿವಮೊಗ್ಗ ನಿಲ್ದಾಣದಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸ್ ಆಗಿತ್ತು. ಇದೀಗ ಮತ್ತದೇ ಹವಾಮಾನ ವೈಪರೀತ್ಯದಿಂದಾಗಿ ಶಿವಮೊಗ್ಗ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಲು ಪರದಾಡಿರುವ ಘಟನೆ ನಡೆದಿದೆ.
ಶಿವಮೊಗ್ಗ, (ಅಕ್ಟೋಬರ್ 12): ಇತ್ತೀಚೆಗಷ್ಟೇ ಬೆಂಗಳೂರಿನಿಂದ ಶಿವಮೊಗ್ಗ ನಿಲ್ದಾಣಕ್ಕೆ (Shivamogga Airport) ಬಂದಿದ್ದ ವಿಮಾನವೊಂದು (Flight) ಲ್ಯಾಂಡ್ ಆಗದೇ ಬೆಂಗಳೂರಿಗೆ(Bengaluru) ವಾಪಸ್ ಆಗಿತ್ತು. ಹವಾಮಾನ (Weather) ವೈಪರೀತ್ಯದಿಂದಾಗಿ ಶಿವಮೊಗ್ಗ (Shivamogga) ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗದೇ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗಿತ್ತು. ಇದರ ಬೆನ್ನಲ್ಲೇ ಇದೀಗ ಅಂತಹದ್ದೇ ಘಟನೆ ನಡೆದಿದೆ. ಹೌದು..ಬೆಂಗಳೂರು-ಶಿವಮೊಗ್ಗ ಇಂಡಿಗೋ ವಿಮಾನ ಹವಾಮಾನ ವೈಪರೀತ್ಯದಿಂದಾಗಿ 20 ನಿಮಿಷ ತಡವಾಗಿ ಲ್ಯಾಂಡ್ ಆಗಿದೆ.
ಇಂದು (ಅಕ್ಟೋಬರ್ 12) ಬೆಳಿಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನ 11.05ಕ್ಕೆ ಶಿವಮೊಗ್ಗದ ಸೋಗಾನೆ ಬಳಿ ಇರುವ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದ್ರೆ, ಹವಾಮಾನ ವೈಪರೀತ್ಯದಿಂದಾಗಿ ವಿಮಾನ 20 ನಿಮಿಷ ತಡವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.
ಇದನ್ನೂ ಒದಿ: ಹವಾಮಾನ ವೈಪರೀತ್ಯ: ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್ ಆಗದೆ ಬೆಂಗಳೂರಿಗೆ ವಾಪಸ್ ಆದ ವಿಮಾನ
ಮೋಡ ಕವಿದ ವಾತಾವರಣ ಇರುವುದರಿಂದ ವಿಸಿಬಲಿಟಿ ಇಲ್ಲದಿರುವ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಲ್ಯಾಂಡ್ ವಿಳಂಬವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಇದೇ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.
ಕಳೆದ ಭಾನುವಾರ ಅಂದರೆ ಅಕ್ಟೋಬರ್ 8ರಂದು ಹವಾಮಾನ ವೈಪರೀತ್ಯದಿಂದಾಗಿ ಇಂಡಿಗೋ ವಿಮಾನ ಶಿವಮೊಗ್ಗ ನಿಲ್ದಾಣದಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸ್ ಆಗಿತ್ತು. ಅಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ತುಂತುರು ಮಳೆ ಆಗುತ್ತಿತ್ತು. ಜೊತೆಗೆ ಭಾರೀ ಪ್ರಮಾಣದ ಮೋಡ ಆವರಿಸಿತ್ತು. ಹೀಗಾಗಿ ಪೈಲೆಟ್ಗೆ ರನ್ ವೇ ಸರಿಯಾಗಿ ಕಾಣಿಸಿಲ್ಲ. ಇದರಿಂದ ಆಗಸದಲ್ಲಿ ಸುತ್ತಾಡಿತ್ತು. ಆದರೂ ರನ್ ವೇ ಸರಿಯಾಗಿ ಕಾಣಿಸದಿರುವುದರಿಂದ ಕೊನೆ ವಿಮಾನ ಬೆಂಗಳೂರಿಗೆ ವಾಪಸ್ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.