ಸರ್ಕಾರಿ ಶಾಲೆಯಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಆರೋಪ; ಹಿಂದೂ ಸಂಘಟನೆಗಳಿಂದ ಬಿಇಒ ಕಚೇರಿ ಎದುರು ಪ್ರತಿಭಟನೆ

ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ಮಾಸೂರು ಗ್ರಾಮದ ಸರಕಾರಿ ಪ್ರೌಢಶಾಲೆಯ ಕಾರ್ಯಕ್ರಮದ ಆರಂಭದಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಘಟನೆ ನಡೆದಿದ್ದು, ಯೇಸುವಿನ ಗೀತೆ ಹಾಡಿಸಿದ ಶಾಲೆ ಶಿಕ್ಷಕನನ್ನು ಕೂಡಲೇ ಅಮಾನತುಗೊಳಿಸಬೇಕಾಗಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ.

ಸರ್ಕಾರಿ ಶಾಲೆಯಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಆರೋಪ; ಹಿಂದೂ ಸಂಘಟನೆಗಳಿಂದ ಬಿಇಒ ಕಚೇರಿ ಎದುರು ಪ್ರತಿಭಟನೆ
ಸರ್ಕಾರಿ ಶಾಲೆಯಲ್ಲಿ ಯೇಸುವಿನ ಪ್ರಾರ್ಥನೆ; ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 18, 2024 | 5:49 PM

ಶಿವಮೊಗ್ಗ, ಸೆ.18: ಪ್ರತಿಭಾ ಕಾರಂಜಿ ಕಾರ್ಯಕ್ರಮದ ಆರಂಭದಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ಮಾಸೂರು ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಕಳೆದ 13 ರಂದು ಮಾಸೂರು ಪ್ರೌಢಶಾಲೆಯಲ್ಲಿ ನಡೆದಿದ್ದ ಕಾರ್ಯಕ್ರಮದ ಆರಂಭದಲ್ಲಿ ಪ್ರಾರ್ಥನಾ ಗೀತೆಯಾಗಿ ಯೇಸುವಿನ ಗೀತೆ ಹಾಡಿಸಿದ ಆರೋಪ ಶಾಲೆಯ ವಿಜ್ಞಾನ ಶಿಕ್ಷಕ ಫ್ರಾಂಕಿ ಫ್ರಾನ್ಸಿಸ್ ವಿರುದ್ದ ಕೇಳಿ ಬಂದಿದೆ.

ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಇದೀಗ ಯೇಸುವಿನ ಗೀತೆ ಹಾಡಿಸಿದ್ದಕ್ಕೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಆಕ್ಷೇಪ ವ್ಯಕ್ತಪಡಿಸಿದ್ದು, ಶಾಲೆಯಲ್ಲಿ ಒಬ್ಬನೇ ಒಬ್ಬ ಕ್ರಿಶ್ಚಿಯನ್ ವಿದ್ಯಾರ್ಥಿ ಇಲ್ಲ, ಹೀಗಿರುವಾಗ ಯೇಸುವಿನ ಗೀತೆ ಏಕೆ ಹಾಡಿಸಿದರು ಎಂದು ಪ್ರಶ್ನಿಸಲಾಗಿದೆ. ಇನ್ನು ಈ ಘಟನೆ ಮೂಲಕ ಹಿಂದುಗಳ ಭಾವನೆಗೆ ಶಿಕ್ಷಕ ಧಕ್ಕೆ ಉಂಟು ಮಾಡಿದ್ದಾರೆ. ಈ ಕೂಡಲೇ ಶಿಕ್ಷಕನನ್ನು ಅಮಾನತು ಮಾಡುವಂತೆ ಆಗ್ರಹಿಸಿ ಸಾಗರದ ಬಿಇಒ ಕಚೇರಿ ಎದುರು ವಿ ಹೆಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.

ಇದನ್ನೂ ಓದಿ:ತಮಿಳುನಾಡಿನ ಸರ್ಕಾರಿ ಶಾಲೆಯಲ್ಲಿ ವಿಭೂತಿ ಧರಿಸಿದ ವಿದ್ಯಾರ್ಥಿನಿಗೆ ಕಿರುಕುಳ; ಬಲವಂತವಾಗಿ ಮತಾಂತರಕ್ಕೆ ಯತ್ನ

ಬೆಂಗಳೂರು ಗ್ರಾಮಾಂತರ: ಟ್ರಾನ್ಸ್‌ಫರಂ ಬಳಿ ಜಂಪ್ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ನರಸೀಪುರದ ನಾಗರಾಜ್(38) ಮೃತ ರ್ದುದೈವಿ. ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಮಸ್ಯೆ ಸರಿಪಡಿಸದ ಹಿನ್ನಲೆ ಟ್ರಾನ್ಸ್‌ಫರಂ ಬಳಿ ಜಂಪ್ ಹಾಕುವ ವೇಳೆ ಅವಘಡ ಸಂಭವಿಸಿದೆ. ಇತ್ತ ಬೆಸ್ಕಾಂ ಅಧಿಕಾರಿಗಳು, ಮೃತನ ಕುಟುಂಬಕ್ಕೆ  ಯಾವುದೇ ರೀತಿಯ ಪರಿಹಾರವಿಲ್ಲ ಎನ್ನುತ್ತಿದ್ದಾರೆ. ಈ ಕುರಿತು ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Wed, 18 September 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್