AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jog Falls: ಇದು ನಯಾಗರ ಫಾಲ್ಸ್​ ಅಂದ್ಕೊಂಡ್ರಾ?; ಜೋಗ ಜಲಪಾತದ ರುದ್ರ ರಮಣೀಯ ವಿಡಿಯೋ ವೈರಲ್

ಜೋಗ ಜಲಪಾತದ ಅದ್ಭುತವಾದ ಫೋಟೋ ಮತ್ತು ವೀಡಿಯೊಗಳನ್ನು ಅನೇಕ ಜನರು ಹಂಚಿಕೊಂಡಿದ್ದಾರೆ. ಈ ವಿಡಿಯೋ ಟ್ವಿಟರ್‌ನಲ್ಲಿ ಸುಮಾರು 1.8 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

Jog Falls: ಇದು ನಯಾಗರ ಫಾಲ್ಸ್​ ಅಂದ್ಕೊಂಡ್ರಾ?; ಜೋಗ ಜಲಪಾತದ ರುದ್ರ ರಮಣೀಯ ವಿಡಿಯೋ ವೈರಲ್
ಜೋಗ ಜಲಪಾತ
TV9 Web
| Edited By: |

Updated on:Sep 08, 2023 | 3:37 PM

Share

ಶಿವಮೊಗ್ಗ: ಮಳೆಗಾಲದಲ್ಲಿ ಜಲಪಾತಗಳಿಗೆ ಜೀವಕಳೆ ಬಂದು ಅತ್ಯಂತ ಸುಂದರ ರೂಪ ತಾಳುತ್ತವೆ. ಮಲೆನಾಡು ಈ ಸಮಯದಲ್ಲಿ ಮಳೆನಾಡಾಗಿ ಮಾರ್ಪಡುತ್ತದೆ. ಶಿವಮೊಗ್ಗ (Shivamogga Rain), ಚಿಕ್ಕಮಗಳೂರು (Chikmagalur Rain), ಉತ್ತರ ಕನ್ನಡ (Uttara Kannada Rain), ಕೊಡಗು (Kodagu Rains) ಜಿಲ್ಲೆಯಲ್ಲಿ ಮಳೆಗಾಲದಲ್ಲಿ ನೋಡಿದಲ್ಲೆಲ್ಲ ಸಣ್ಣಪುಟ್ಟ ಜಲಪಾತಗಳು ಕಾಣುತ್ತವೆ. ಕರ್ನಾಟಕದ ಜೋಗ ಜಲಪಾತದ (Jog Falls) ವಿಡಿಯೋ ಇಂಟರ್​ನೆಟ್​​ನಲ್ಲಿ ಎಲ್ಲರ ಮನ ಗೆಲ್ಲುತ್ತಿದೆ. ಶಿವಮೊಗ್ಗದ ಜೋಗ ಜಲಪಾತವು ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ. ಅದರಲ್ಲೂ ಮಳೆಗಾಲದಲ್ಲಿ ಜೋಗ ಭೋರ್ಗರೆಯುತ್ತದೆ.

ಜೋಗ ಜಲಪಾತದ ವಿಡಿಯೋವನ್ನು ನಾರ್ವೆಯ ಮಾಜಿ ರಾಜತಾಂತ್ರಿಕ ಎರಿಕ್ ಸೋಲ್ಹೈಮ್ ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ. “ಇದು ನಯಾಗರಾ ಜಲಪಾತವಲ್ಲ… ಇದು ಭಾರತದ ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿರುವ ಜೋಗ ಜಲಪಾತ” ಎಂದು ಈ ವಿಡಿಯೋಗೆ ಕ್ಯಾಪ್ಷನ್ ನೀಡಲಾಗಿದೆ.

ಜೋಗ ಜಲಪಾತದ ಅದ್ಭುತವಾದ ಫೋಟೋ ಮತ್ತು ವೀಡಿಯೊಗಳನ್ನು ಅನೇಕ ಜನರು ಹಂಚಿಕೊಂಡಿದ್ದಾರೆ. ಈ ವಿಡಿಯೋ ಟ್ವಿಟರ್‌ನಲ್ಲಿ ಸುಮಾರು 1.8 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಇದಕ್ಕೆ ಸಾವಿರಾರು ಜನ ಲೈಕ್ ಮಾಡಿದ್ದಾರೆ. ನೂರಾರು ಬಳಕೆದಾರರು ಈ ಪೋಸ್ಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಳೆ ಹೆಚ್ಚಾಗಿರುವುದರಿಂದ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.

Published On - 3:56 pm, Wed, 13 July 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ