Shivamogga Riots: ಬಿಜೆಪಿ ಸತ್ಯಶೋಧನಾ ಸಮಿತಿ ಇಂದು ಶಿವಮೊಗ್ಗಕ್ಕೆ ಭೇಟಿ
ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಲವರನ್ನು ಬಂಧಿಸಿದ್ದಾರೆ. ಈ ಮಧ್ಯೆ ಕರ್ನಾಟಕ ಬಿಜೆಪಿಯ ಸತ್ಯಶೋಧನ ಸಮಿತಿ ಇಂದು(ಅಕ್ಟೋಬರ್ 05) ಶಿವಮೊಗ್ಗಕ್ಕೆ ಭೇಟಿ ನೀಡಲಿದೆ.
ಶಿವಮೊಗ್ಗ, (ಅಕ್ಟೋಬರ್ 05): ಶಿವಮೊಗ್ಗದ (Shivamogga) ರಾಗಿಗುಡ್ಡದಲ್ಲಿ ನಡೆದ ಗಲಾಟೆ (Shivamogga Riots) ಪ್ರಕರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಲವರನ್ನು ಬಂಧಿಸಿದ್ದಾರೆ. ಮತ್ತೊಂದೆಡೆ ಈ ಗಲಾಟೆ ವಿಚಾರವಾಗಿ ರಾಜಕೀಯ ನಾಯಕರ ಮಾತಿನ ಕಾಳಗ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕರ್ನಾಟಕ ಬಿಜೆಪಿಯ ಸತ್ಯಶೋಧನ ಸಮಿತಿ(BJP fact finding team) ಇಂದು(ಅಕ್ಟೋಬರ್ 05) ಶಿವಮೊಗ್ಗಕ್ಕೆ ಭೇಟಿ ನೀಡಲಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನ ತಂಡ ಮೊದಲು ಇಂದು ಬೆಳಗ್ಗೆ 11 ಗಂಟೆಗೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಲಾಟೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲಿದೆ.
ಆಸ್ಪತ್ರೆ ಸೇರಿರುವ ಗಾಯಾಳುಗಳನ್ನು ಭೇಟಿ ನಂತರ ಗಲಾಟೆ ನಡೆದ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಲಿದ್ದಾರೆ. ಬಳಿಕ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಇದನ್ನೂ ಓದಿ: ಸಾಹಿತ್ಯ, ಸಂಸ್ಕೃತಿಯ ತೊಟ್ಟಿಲಾಗಿದ್ದ ಶಿವಮೊಗ್ಗದಲ್ಲೀಗ ಕೋಮುಗಲಭೆಯದ್ದೇ ಅಬ್ಬರ
ಮಾಜಿ ಡಿಸಿಎಂಗಳಾದ ಕೆ.ಎಸ್.ಈಶ್ವರಪ್ಪ, ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಪರಿಷತ್ ಸದಸ್ಯರಾದ ರವಿಕುಮಾರ್, ಎಸ್.ರುದ್ರೇಗೌಡ, ಶಾಸಕ ಚನ್ನಬಸಪ್ಪ, ಡಿ.ಎಸ್. ಅರುಣ್, ಭಾರತಿ ಶೆಟ್ಟಿ ಸೇರಿದಂತೆ ಇನ್ನಿತರ ನಾಯಕರು ಸೇರಿದಂತೆ ಇತರೆ ನಾಯಕರು ಉಪಸ್ಥಿತರಿರಲಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:23 am, Thu, 5 October 23