AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದ್ದು, ಗೃಹ ಇಲಾಖೆಗೆ ಈ ಬಾರಿ ಒಟ್ಟು 19,777 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಈ ಪೈಕಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಮಾಡಲು ಅನುದಾನ ಮೀಸಲರಿಸಲಾಗಿದೆ.

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ
ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದ ಸಿದ್ದರಾಮಯ್ಯ
TV9 Web
| Edited By: |

Updated on: Feb 16, 2024 | 1:57 PM

Share

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 15ನೇ ಬಜೆಟ್ (Karnataka Budget 2024) ಮಂಡನೆ ಮಾಡಿದ್ದು, ಗೃಹ ಇಲಾಖೆಗೆ ಈ ಬಾರಿ ಒಟ್ಟು 19,777 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಈ ಪೈಕಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ (Shivamogga) ಹೈ ಸೆಕ್ಯೂರಿಟಿ ಕಾರಾಗೃಹ (High security prison) ನಿರ್ಮಾಣ ಮಾಡಲು ಅನುದಾನ ಮೀಸಲರಿಸಲಾಗಿದೆ.

ಆಡಳಿತ ವ್ಯವಸ್ಥೆ ಬಲಪಡಿಸಲು ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಿದ ಸಿದ್ದರಾಮಯ್ಯ, ಕನ್ನಡ ಭಾಷಾಂತರಕ್ಕೆ ಕನ್ನಡ ಕಸ್ತೂರಿ ಎಂಬ ನೂತನ ತಂತ್ರಾಂಶ ಅಭಿವೃದ್ಧಿ ಮಾಡಲಾಗುವುದು, ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದರು.

ಇದನ್ನೂ ಓದಿ: Karnataka Budget 2024​​: ಬೆಂಗಳೂರು ಬಡಜನರಿಗಾಗಿ ಹೊಸ ಭ್ಯಾಗ್ಯ ಘೋಷಿಸಿದ ಸಿದ್ದರಾಮಯ್ಯ

ನೂತನ ಪೊಲೀಸ್​ ಠಾಣಾ ಕಟ್ಟಡಗಳಿಗೆ 30 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗುವುದು, ವಿಧಿ ವಿಜ್ಞಾನ ಪ್ರಯೋಗಾಲಯಗಳ ಮೊಬೈಲ್ ಫೊರೆನ್ಸಿಕ್, ಆಡಿಯೋ ಮತ್ತು ವಿಡಿಯೋ ವಿಭಾಗ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. 10 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಉಪಕರಣ, ತಂತ್ರಾಂಶ ಪೂರೈಕೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದರು.

ಎಲ್ಲಾ ಕಾರಾಗೃಹಗಳ ಸುಗಮ ಆಡಳಿತ ಹಾಗೂ ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು. 5 ಕೋಟಿ ರೂಪಾಯಿ ವೆಚ್ಚದಲ್ಲಿ ಎಐ ತಂತ್ರಾಂಶ, ಬ್ಯಾಗೇಜ್​ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣ ಖರೀದಿಗೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು. ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?