CET ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು: ಆಕ್ರೋಶ

ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿ ತೆಗೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಘಟನೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಬ್ರಾಹ್ಮಣ ಸಂಘಗಳು ತೀವ್ರವಾಗಿ ಖಂಡಿಸಿವೆ. ಗಾಯತ್ರಿ ದೀಕ್ಷೆ ಪಡೆದ ವಿದ್ಯಾರ್ಥಿಗಳಿಗೆ ಈ ಕೃತ್ಯ ಅವಮಾನಕಾರಿ ಎಂದು ಹೇಳಲಾಗಿದೆ. ಘಟನೆ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

CET ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು: ಆಕ್ರೋಶ
ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು
Edited By:

Updated on: Apr 17, 2025 | 11:05 PM

ಶಿವಮೊಗ್ಗ, ಏಪ್ರಿಲ್​ 17: ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ಬ್ರಾಹ್ಮಣ (Brahmin) ವಿದ್ಯಾರ್ಥಿಗಳ (Students) ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಖಂಡಿಸಿದ್ದಾರೆ. ನಗರದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕಾಲೇಜಿನ ಒಳಗೆ ತೆರಳುವ ಸಮಯದಲ್ಲಿ ಅಲ್ಲಿನ ಸಿಬ್ಬಂದಿಗಳು ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯಿತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿದ್ದಾರೆ.

ಈ ರೀತಿ ಗಾಯತ್ರಿ ದೀಕ್ಷೆ ಪಡೆದು ಆತ್ಮಸಾಕ್ಷತ್ಕಾರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಅಧಿಕಾರಿಗಳು ತೆಗೆಸಿದ್ದು ಅವಮಾನಕಾರಿಯಾಗಿದೆ. ಈ ಘಟನೆ ಖಂಡನೀಯವಾಗಿದೆ ಎಂದು ಬ್ರಾಹ್ಮಣ ಸಂಘಗಳ ಒಕ್ಕೂಟ ದೂರು ನೀಡಿದೆ.

ಇದನ್ನೂ ಓದಿ: ಲೇಖನ ಸಾಮಾಗ್ರಿ ಬೆಲೆ ಏರಿಕೆ: ಪೋಷಕರು, ವಿದ್ಯಾರ್ಥಿಗಳಿಗೆ ಬರೆ

ಇದನ್ನೂ ಓದಿ
ಶಿವಮೊಗ್ಗ: ಮಠದಲ್ಲಿ 300 ಕೋಟಿ ರೂ ದರೋಡೆಗೆ ಸ್ಕೇಚ್, ಸಿಕ್ಕಿದ್ದು 50 ಸಾವಿರ
ಶಿವಮೊಗ್ಗ ಈದ್ಗಾ ಮೈದಾನ ವಿವಾದ ಕೊನೆಗೂ ಸುಖಾಂತ್ಯ: ನಿರ್ಬಂಧ ತೆರವು
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್​ನನ್ನ ಬಂಧಿಸಿದ ಇಡಿ
ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣ, ಇಡಿ ದಾಳಿ

ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದ್ದು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಕೂಡಲೇ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯಿತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ, ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋಧಿ ಕೃತ್ಯ ಎಸಗಿರುವ ಹೀನ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us