ಶಿವಮೊಗ್ಗ ಏರ್​ಪೋರ್ಟ್​​ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೆಸರಿಡಲು ಸಂಪುಟ ಅನುಮೋದನೆ: ಸಿಎಂ ಬೊಮ್ಮಾಯಿ

ಶಿವಮೊಗ್ಗ ಏರ್​ಪೋರ್ಟ್​​ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೆಸರಿಡಲು ಸಂಪುಟ ಅನುಮೋದನೆ: ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

BS Yediyurappa | CM Basavaraj Bommai: ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ಏರ್​ಪೋರ್ಟ್​ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿಡಲು ಸಂಪುಟ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

TV9kannada Web Team

| Edited By: shivaprasad.hs

Apr 20, 2022 | 7:23 PM

ಶಿವಮೊಗ್ಗ ಏರ್​ಪೋರ್ಟ್​ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಹೆಸರಿಡಲು ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಘೋಷಿಸಿದ್ದಾರೆ. ಶಿವಮೊಗ್ಗ ಬಳಿ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ಏರ್‌ಪೋರ್ಟ್‌ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ನಂತರ ಅವರು ಮಾತನಾಡಿದರು. ‘‘ಏರ್​ಪೋರ್ಟ್​ಗೆ ಬಿಎಸ್​ವೈ ಹೆಸರಿಡುವ ಬಗ್ಗೆ ಸಂಪುಟದಲ್ಲಿ ನಿರ್ಧಾರವನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ. ಬಿ.ಎಸ್.ಯಡಿಯೂರಪ್ಪ ಪರಿಶ್ರಮದಿಂದ ಏರ್​ಪೋರ್ಟ್ ಆಗುತ್ತಿದ್ದು, ಕರ್ನಾಟಕದ ಹೆಮ್ಮೆಯ ಏರ್​ಪೋರ್ಟ್ ಆಗಲಿದೆ. ನೈಟ್ ಲ್ಯಾಂಡಿಂಗ್​ ವ್ಯವಸ್ಥೆ ಹೊಂದಿರುವ ಇದು, ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಇದು ತಯಾರಾಗಲಿದೆ’’ ಎಂದಿದ್ದಾರೆ.

ಶಿವಮೊಗ್ಗ ಏರ್​ಪೋರ್ಟ್​ಗೆ ಅಗತ್ಯವಿರುವ ವ್ಯವಸ್ಥೆ ಮಾಡಲಾಗಿದೆ ಎಂದಿರುವ ಸಿಎಂ, ಕೈಗಾರಿಕೆ, ಶಿಕ್ಷಣ, ಆರೋಗ್ಯ ಸೇರಿ ಎಲ್ಲಾ ವಲಯಗಳ ಅಭಿವೃದ್ಧಿಗೆ ಏರ್​ಪೋರ್ಟ್​ ಅಗತ್ಯವಾಗಿದೆ. ಬೆಂಗಳೂರು ನಂತರ ಅನೇಕ ಏರ್​ಪೋರ್ಟ್​ಗಳು ಆಗಿವೆ. 2006-07ರಲ್ಲಿ ಶಿವಮೊಗ್ಗ ಏರ್​ಪೋರ್ಟ್​ಗೆ ಅನುಮೋದನೆ ನೀಡಲಾಯಿತು. ಬೆಂಗಳೂರು ಬಳಿಕ ಶಿವಮೊಗ್ಗ ಏರ್​ಪೋರ್ಟ್​ ದೊಡ್ಡ ರನ್​ವೇ ಇದೆ. ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಏರ್​ಬಸ್​ ಲ್ಯಾಂಡ್​ ಆಗಬಹುದು ಎಂದಿದ್ದಾರೆ.

ಶಿವಮೊಗ್ಗ ಏರ್​ಪೋರ್ಟ್​ಗೆ ಭೂಮಿ ನೀಡಿದ ರೈತರಿಗೆ ಧನ್ಯವಾದಗಳನ್ನು ಹೇಳಿದ ಮುಖ್ಯಮಂತ್ರಿ ಬೊಮ್ಮಾಯಿ, ಏರ್​ಪೋರ್ಟ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 50 ಕೋಟಿ ಅನುದಾನ ನೀಡಲಿದೆ. ರೈತರಿಗೆ ಅನುಕೂಲವಾಗುವಂತೆ ಏರ್​ಪೋರ್ಟ್​ ಕಾಂಪೌಂಡ್​ನಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸೂಕ್ತ ರಸ್ತೆ ಸಂಪರ್ಕ ಕಲ್ಪಿಸುತ್ತೇವೆ ಎಂದಿದ್ದಾರೆ.

ಜೋಗದ ಅಭಿವೃದ್ಧಿಯ ಬಗ್ಗೆ ಮಾತನಾಡಿದ ಸಿಎಂ, 300 ಕೋಟಿ ರೂಪಾಯಿ ವೆಚ್ಚದಲ್ಲಿ ಜೋಗ ಅಭಿವೃದ್ಧಿ ಮಾಡುತ್ತಿದ್ದೇವೆ. ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿತಾಣವಾಗಿ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಶಿವಮೊಗ್ಗ-ರಾಣೆಬೆನ್ನೂರು ರೈಲ್ವೆ ಲೈನ್ ಕಾಮಗಾರಿ ಮುಂದುವರಿದಿದೆ. 3,500 ಕಿಲೋಮೀಟರ್​ ಉದ್ದದ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಹಾಗೂ 6,000 ಕಿಲೋಮೀಟರ್​ ರಸ್ತೆ ಅಭಿವೃದ್ಧಿಗೆ ಕೇಂದ್ರ ಅನುದಾನ ನೀಡಿದೆ. ಶಿವಮೊಗ್ಗದ ಪ್ರಮುಖ ರಸ್ತೆ, ರಿಂಗ್ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಏರ್‌ಪೋರ್ಟ್‌ನ ಕೊನೆಯ ಹಂತದ ಕಾಮಗಾರಿಯನ್ನು ವೀಕ್ಷಿಸಿದ ಸಿಎಂಗೆ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ, ಸಚಿವರಾದ ಆರಗ ಜ್ಞಾನೇಂದ್ರ, ಭೈರತಿ ಬಸವರಾಜ್‌ ಸಾಥ್‌ ನೀಡಿದರು.

ಇದನ್ನೂ ಓದಿ: ಕಾಂಗ್ರೆಸ್ಗೆ ಸಿದ್ಧಾಂತ, ನಾಯಕತ್ವ ಇಲ್ಲ -ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

ಸಿಎಂ ಮಾಡಿದ ಘೋಷಣೆಯಿಂದ 2 ಲಿಂಗಾಯತ ಮಠಗಳ ನಡುವೆ ಭುಗಿಲೆದ್ದ ಭಿನ್ನಾಭಿಪ್ರಾಯ

Follow us on

Related Stories

Most Read Stories

Click on your DTH Provider to Add TV9 Kannada