AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ವಹಣೆ ಖಾಸಗಿ ಸಂಸ್ಥೆಗೆ ಹಸ್ತಾಂತರಕ್ಕೆ ಮುಂದಾದ ಸರ್ಕಾರ

ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದ ನಿರ್ವಹಣೆ ಮತ್ತು ಗ್ರೌಂಡ್ ಆಪರೇಷನ್‌ಗಳನ್ನು ಖಾಸಗಿ ಸಂಸ್ಥೆಗೆ ವಹಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಸದ್ಯ, ಆಸಕ್ತ ಸಂಸ್ಥೆಗಳು ಅರ್ಜಿ ಸಲ್ಲಿಸುವಂತೆ KSIIDC ಸೂಚಿಸಿದ್ದು, ಐದು ಪ್ರಮುಖ ಸಂಸ್ಥೆಗಳು ಆಸಕ್ತಿ ತೋರಿಸಿವೆ. ಅಕ್ಟೋಬರ್‌ನಿಂದ ಶಿವಮೊಗ್ಗ-ಬೆಂಗಳೂರು ವಿಮಾನ ಸೇವೆ ಪುನರಾರಂಭವಾಗುವ ನಿರೀಕ್ಷೆಯಿದೆ.

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ವಹಣೆ ಖಾಸಗಿ ಸಂಸ್ಥೆಗೆ ಹಸ್ತಾಂತರಕ್ಕೆ ಮುಂದಾದ ಸರ್ಕಾರ
ಶಿವಮೊಗ್ಗ ಏರ್‌ಪೋರ್ಟ್ (ಸಂಗ್ರಹ ಚಿತ್ರ)Image Credit source: tv9
ಗಣಪತಿ ಶರ್ಮಾ
|

Updated on:Aug 11, 2026 | 11:35 AM

Share

ಮುಖ್ಯಾಂಶಗಳು

  • ಶಿವಮೊಗ್ಗ ವಿಮಾನ ನಿಲ್ದಾಣ ಕಾರ್​ಯನಿರ್ವಹಣೆ ಖಾಸಗಿ ಸಂಸ್ಥೆಗೆ ಹಸ್ತಾಂತರ ಸಾಧ್ಯತೆ
  • ಐದು ಸಂಸ್ಥೆಗಳಿಂದ ನಿರ್ವಹಣೆಗೆ ಆಸಕ್ತಿ
  • ಅಕ್ಟೋಬರ್‌ನಲ್ಲಿ ಬೆಂಗಳೂರು ವಿಮಾನ ಸೇವೆ ಆರಂಭದ ನಿರೀಕ್ಷೆ

ಶಿವಮೊಗ್ಗ, ಆಗಸ್ಟ್ 11: ಕರ್ನಾಟಕ ಸರ್ಕಾರದ ನಿರ್ವಹಣೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ (Shivamogga Airport)  ಕಾರ್ಯಾಚರಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಲು ಸರ್ಕಾರ ಮುಂದಾಗಿದೆ. ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದ ನಿರ್ವಹಣೆಗಾಗಿ ಖಾಸಗಿ ಏರ್‌ಲೈನ್ ಆಪರೇಟರ್‌ಗಳು, ವಿಮಾನ ನಿಲ್ದಾಣ ನಿರ್ವಹಣಾ ಸಂಸ್ಥೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿದಾರರಿಂದ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIIDC) ‘ಎಕ್ಸ್​​ಪ್ರೆಷನ್ ಆಫ್ ಇಂಟರೆಸ್ಟ್ (EoI)’ ಆಹ್ವಾನಿಸಿದೆ.

ಎಕ್ಸ್​​ಪ್ರೆಷನ್ ಆಫ್ ಇಂಟರೆಸ್ಟ್ ಎಂದರೇನು?

‘ಎಕ್ಸ್​​ಪ್ರೆಷನ್ ಆಫ್ ಇಂಟರೆಸ್ಟ್’ ಎಂದರೆ ಯಾವುದೇ ಯೋಜನೆ, ಕಾಮಗಾರಿ, ಸೇವೆ ಅಥವಾ ಖರೀದಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಂಸ್ಥೆಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯವನ್ನು ಪ್ರಾಥಮಿಕವಾಗಿ ವ್ಯಕ್ತಪಡಿಸುವ ದಾಖಲೆಯಾಗಿದೆ. ಇದು ಅಂತಿಮ ಟೆಂಡರ್ ಅಥವಾ ಒಪ್ಪಂದವಲ್ಲ; ಮುಂದಿನ ಹಂತದ ಬಿಡ್ ಅಥವಾ ಆಯ್ಕೆ ಪ್ರಕ್ರಿಯೆಗೆ ಮುನ್ನ ಆಸಕ್ತ ಸಂಸ್ಥೆಗಳನ್ನು ಗುರುತಿಸುವ ಮೊದಲ ಹಂತವಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣ ಮಾರಾಟವಾಗುತ್ತಾ?

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಮಾರಾಟ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ಬದಲಿಗೆ ವಿಮಾನ ನಿಲ್ದಾಣದ ನಿರ್ವಹಣೆ ಮತ್ತು ಗ್ರೌಂಡ್ ಆಪರೇಷನ್‌ಗಳ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗೆ ವಹಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು KSIIDC ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ವಿಮಾನ ನಿಲ್ದಾಣ ನಿರ್ವಹಣೆಗೆ ಅದಾನಿ ಗ್ರೂಪ್, ಜಿಎಂಆರ್ ಗ್ರೂಪ್, ಬೆಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್, ಸ್ಕೈ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಹಾಗೂ ಬೆಂಗಾಲ್ ಏರೋಟ್ರೋಪೊಲಿಸ್ ಪ್ರಾಜೆಕ್ಟ್ಸ್ ಲಿಮಿಟೆಡ್ ಆಸಕ್ತಿ ತೋರಿಸಿವೆ ಎಂದು ಅವರು ತಿಳಿಸಿದ್ದಾರೆ.

ವಿಮಾನ ಸೇವೆ ವಿಸ್ತರಣೆಗೆ ಒತ್ತು

ಶಿವಮೊಗ್ಗ-ಬೆಂಗಳೂರು ನಡುವಿನ ವಿಮಾನ ಸೇವೆ ಕೆಲವು ತಿಂಗಳ ಹಿಂದೆ ಸ್ಥಗಿತಗೊಂಡಿತ್ತು. ಇದೀಗ ಅಕ್ಟೋಬರ್‌ನಿಂದ ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ಸ್ಟಾರ್ ಏರ್ ವಿಮಾನ ಸೇವೆ ಆರಂಭಿಸಲು ಒಪ್ಪಿಗೆ ನೀಡಿದೆ ಎಂದು KSIIDC ಅಧ್ಯಕ್ಷರು ತಿಳಿಸಿದ್ದಾರೆ.

ಸದ್ಯ ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್ ಹಾಗೂ ಚೆನ್ನೈ ನಗರಗಳಿಗೆ ವಿಮಾನ ಸೇವೆ ಲಭ್ಯವಿದೆ. ಮುಂದಿನ ದಿನಗಳಲ್ಲಿ ಶಿವಮೊಗ್ಗದಿಂದ ದೆಹಲಿ ಮತ್ತು ಮುಂಬೈಗೆ ವಿಮಾನ ಸಂಪರ್ಕ ಕಲ್ಪಿಸಲು ಪ್ರಯತ್ನಗಳು ನಡೆಯುತ್ತಿವೆ.

2023ರಲ್ಲಿ ಉದ್ಘಾಟನೆಯಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ

ಶಿವಮೊಗ್ಗ ವಿಮಾನ ನಿಲ್ದಾಣವನ್ನು 2023ರ ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 80ನೇ ಜನ್ಮದಿನದಂದು ವಿಮಾನ ನಿಲ್ದಾಣ ಉದ್ಘಾಟನೆಯಾಗಿತ್ತು.

ಇದನ್ನೂ ಓದಿ: 2ನೇ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಮಹತ್ವದ ಸಭೆ: ಬೆಂಗಳೂರು ದಕ್ಷಿಣದಲ್ಲಿ ಏರ್ಪೋರ್ಟ್ ಮಾಡಲು ಸರ್ಕಾರ ಒಲವು

ಸದ್ಯ KSIIDCಗೆ ಸೇರಿದ 11 ತಾಂತ್ರಿಕ ಸಿಬ್ಬಂದಿ ಹಾಗೂ 27 ಹೌಸ್‌ಕೀಪಿಂಗ್ ಸಿಬ್ಬಂದಿ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಮಾನ ನಿಲ್ದಾಣದ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಿದ ಬಳಿಕ ಸರ್ಕಾರವು ತನ್ನ ಗಮನವನ್ನು ರಾಯಚೂರು ವಿಮಾನ ನಿಲ್ದಾಣ ಯೋಜನೆ ಸೇರಿದಂತೆ ಇತರ ಮೂಲಸೌಕರ್ಯ ಯೋಜನೆಗಳತ್ತ ಕೇಂದ್ರೀಕರಿಸಲು ಉದ್ದೇಶಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:33 am, Tue, 11 August 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ