AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಂಕಣ ರೈಲ್ವೆ ಸೇರಿ ರಾಜ್ಯದ ರೈಲು ಮಾರ್ಗ ಅಭಿವೃದ್ಧಿಗೆ 9,000 ಕೋಟಿ ರೂ. ಅನುದಾನ ಮಂಜೂರು!

ಕೊಂಕಣ ರೈಲ್ವೆ ಹಾಗೂ ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ಬರೋಬ್ಬರಿ 9,000 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಮಾರ್ಗದ ಹಳೆಯ ಟೆಂಡರ್ ರದ್ದುಗೊಳಿಸಿ ಹೊಸ ಟೆಂಡರ್ ಕರೆಯಲಾಗುವುದು ಎಂದು ಅವರು ಪ್ರಮುಖ ಘೋಷಣೆ ಮಾಡಿದ್ದಾರೆ.

ಕೊಂಕಣ ರೈಲ್ವೆ ಸೇರಿ ರಾಜ್ಯದ ರೈಲು ಮಾರ್ಗ ಅಭಿವೃದ್ಧಿಗೆ 9,000 ಕೋಟಿ ರೂ. ಅನುದಾನ ಮಂಜೂರು!
ಕೊಂಕಣ ರೈಲ್ವೆ ಸೇರಿ ರಾಜ್ಯದ ರೈಲು ಮಾರ್ಗ ಅಭಿವೃದ್ಧಿಗೆ 9,000 ಕೋಟಿ ರೂ. ಅನುದಾನ ಮಂಜೂರು!
ಭಾವನಾ ಹೆಗಡೆ
|

Updated on: Oct 13, 2026 | 1:17 PM

Share

ಮುಖ್ಯಾಂಶಗಳು

  • ಕೊಂಕಣ ರೈಲ್ವೆ ಹಾಗೂ ರಾಜ್ಯದ ರೈಲ್ವೆ ಅಭಿವೃದ್ಧಿಗೆ 9,000 ಕೋಟಿ ಅನುದಾನ ಮಂಜೂರು.
  • ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಯೋಜನೆಗೆ ಹಳೆಯ ಟೆಂಡರ್ ರದ್ದುಪಡಿಸಿ ಹೊಸ ಟೆಂಡರ್.
  • ತಾಳಗುಪ್ಪ-ಹೊನ್ನಾವರ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ 1,511 ಕೋಟಿ ವೆಚ್ಚ ನಿಗದಿ.

ಶಿವಮೊಗ್ಗ, ಅಕ್ಟೋಬರ್ 13: ರಾಜ್ಯದ ರೈಲ್ವೆ ಕ್ಷೇತ್ರದ ಸಮಗ್ರ ವಿಕಾಸ ಹಾಗೂ ಕರಾವಳಿ-ಮಲೆನಾಡು ಭಾಗದ ಸಂಪರ್ಕವನ್ನು ಮತ್ತಷ್ಟು ಕವಲುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಕೊಂಕಣ ರೈಲ್ವೆಯ ಮುಂದುವರಿದ ಅಭಿವೃದ್ಧಿ ಕಾಮಗಾರಿಗಳು ಹಾಗೂ ರಾಜ್ಯದ ಇತರ ರೈಲ್ವೆ ಯೋಜನೆಗಳ ಪ್ರಗತಿಗಾಗಿ ಬರೋಬ್ಬರಿ 9,000 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಮೂಲಸೌಕರ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ರಾಜ್ಯದಲ್ಲಿ ಪ್ರಸ್ತುತ ಸುಮಾರು 52,000 ಕೋಟಿ ರೂ. ವೆಚ್ಚದಲ್ಲಿ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ಚಾಲ್ತಿಯಲ್ಲಿವೆ ಎಂದು ಮಾಹಿತಿ ನೀಡಿದರು. ಮಲೆನಾಡು ಹಾಗೂ ಕರಾವಳಿ ಭಾಗದ ರೈಲು ಪ್ರಯಾಣಿಕರ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಮೂಲಸೌಕರ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ. ದಶಕಗಳಿಂದ ನನೆಗುದಿಗೆ ಬಿದ್ದಿರುವ ಮತ್ತು ಪ್ರಗತಿಯಲ್ಲಿರುವ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸ್ಪಷ್ಟ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದರು.

ಮುಂಬರುವ ಎರಡು ತಿಂಗಳ ಒಳಗಾಗಿ ಹೊಸದಾಗಿ ಟೆಂಡರ್

ಇದೇ ವೇಳೆ, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ ಮಾಡಿರುವ ಸಚಿವರು, ಈ ಹಿಂದಿನ ಗುತ್ತಿಗೆದಾರರ ಲೋಪ ಹಾಗೂ ವಿಳಂಬ ಧೋರಣೆಯಿಂದಾಗಿ ಹಳೆಯ ಟೆಂಡರ್ ಅನ್ನು ರದ್ದುಪಡಿಸಿ ಕಪ್ಪುಪಟ್ಟಿಗೆ ಸೇರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಮುಂಬರುವ ಎರಡು ತಿಂಗಳ ಒಳಗಾಗಿ ಹೊಸದಾಗಿ ಟೆಂಡರ್ ಕರೆಯಲಾಗುವುದು ಹಾಗೂ ಕಾಮಗಾರಿಗಳಿಗೆ ವೇಗ ನೀಡಲಾಗುವುದು ಎಂದು ಭರವಸೆ ನೀಡಿದರು.

ಶೃಂಗೇರಿ ಮಾರ್ಗದ ಹೊಸ ರೈಲು ಪ್ರಸ್ತಾವನೆಗಳ ಕುರಿತು ಚರ್ಚೆ

ಜೊತೆಗೆ, ಶಿವಮೊಗ್ಗ-ಬೀರೂರು ಮಾರ್ಗದ ದ್ವಿಗುಣೀಕರಣ ಕಾರ್ಯವು ಪ್ರಸ್ತುತ ಸರ್ವೆ ಹಂತದಲ್ಲಿದೆ. ಇದರೊಂದಿಗೆ ಮಹತ್ವಾಕಾಂಕ್ಷೆಯ ತಾಳಗುಪ್ಪ-ಹೊನ್ನಾವರ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಈಗಾಗಲೇ 1,511 ಕೋಟಿ ರೂ. ಅಂದಾಜು ವೆಚ್ಚ ನಿಗದಪಡಿಸಲಾಗಿದೆ. ಮಂಗಳೂರು, ಉಡುಪಿ ಹಾಗೂ ಶಿವಮೊಗ್ಗ ಭಾಗದ ರೈಲು ಸಂಪರ್ಕ ಜಾಲವನ್ನು ವಿಸ್ತರಿಸಲು ಹಾಗೂ ಶೃಂಗೇರಿ ಮಾರ್ಗದ ಹೊಸ ರೈಲು ಪ್ರಸ್ತಾವನೆಗಳ ಕುರಿತು ಚರ್ಚೆ ನಡೆದಿದ್ದು, ಮುಂದಿನ ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡಿನ ರೈಲ್ವೆ ಮುಖಚಿತ್ರ ಸಂಪೂರ್ಣ ಬದಲಾಗಲಿದೆ ಎಂದು ವಿ. ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ