AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಐದು ದಿನ ಪಾದಯಾತ್ರೆ

545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ನಿಭಾಯಿಸುವಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗೃಹ ಸಚಿವ ಆರಗಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ.

TV9 Web
| Edited By: ಆಯೇಷಾ ಬಾನು|

Updated on:May 06, 2022 | 12:15 PM

Share

ಶಿವಮೊಗ್ಗ: ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಇಂದಿನಿಂದ ಪಾದಯಾತ್ರೆ ಆರಂಭವಾಗಿದೆ. ಗೃಹಸಚಿವರ ಸ್ವಗ್ರಾಮ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪದಿಂದ ಶಿವಮೊಗ್ಗದವರೆಗೆ ಐದು ದಿನಗಳ ವರೆಗೆ ಪಾದಯಾತ್ರೆ ನಡೆಯಲಿದೆ.

545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ನಿಭಾಯಿಸುವಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗೃಹ ಸಚಿವ ಆರಗಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ.

ಪಿಎಸ್ಐ ಅಕ್ರಮ ನೇಮಕಾತಿಯಲ್ಲಿ ಅಧಿಕಾರಿಗಳು ಮತ್ತು ಬಿಜೆಪಿ ರಾಜಕಾರಣಿಗಳು ಶಾಮೀಲಾಗಿದ್ದಾರೆ. ದಿವ್ಯಾ ಹಾಗರಗಿ ಮನೆಗೆ ಗೃಹ ಸಚಿವರು ಭೇಟಿ ನೀಡಿದ್ದಾರೆ. ಈ ನಡುವೆ ದಿವ್ಯಾ ತೀರ್ಥಹಳ್ಳಿಗೆ ಬಂದು ಹೋಗಿದ್ದಾರೆ. ತೀರ್ಥಹಳ್ಳಿ ಸಚಿವರ ಹಿಂಬಾಲಕರು ಈ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿ ಆಗಿರುವ ಸಂಶಯವಿದೆ. ಈಗಾಗಲೇ ತೀರ್ಥಹಳ್ಳಿಯಲ್ಲಿ ಈ ಸುದ್ದಿ ವೈರಲ್ ಆಗಿದೆ. ಹಣ ಆಸ್ತಿ ಪಾಸ್ತಿ ಇಲ್ಲದ ಸಚಿವರ ಹಿಂಬಾಲಕನು ಒಂದೂವರೆ ಕೋಟಿ ಮನೆ ಕಟ್ಟುತ್ತಿದ್ದಾನೆ. ಇನ್ನೂ ಸಚಿವರಾದ ಮೇಲೆ ಬಡವರಿದ್ದ ಅವರು ಈಗ ಶ್ರೀಮಂತರಾಗಿದ್ದಾರೆ. ಅಕ್ರಮ ಮರಳು ದಂಧೆಯಲ್ಲಿ ಕೋಟಿ ಕೋಟಿ ಲೂಟಿ ತೀರ್ಥಹಳ್ಳಿ ನಡೆಯುತ್ತಿದೆ. ಗೃಹ ಸಚಿವರಾಗಿ ಈ ಎಲ್ಲ ಅಕ್ರಮ ತಡೆಯಲು ಗೃಹ ಸಚಿವರು ವಿಫಲರಾಗಿದ್ದಾರೆ. ಐಎಸ್ಐ ಅಕ್ರಮ ನೇಮಕಾತಿ ತನಿಖೆ ನಡೆಯುತ್ತಿದೆ. ನ್ಯಾಯಯುತ ತನಿಖೆ ಆಗಬೇಕು ಅಂದ್ರೆ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ.

ಸಚಿವರ ಮನೆ ಮುಂದೆ ತಮಟೆ ಭಾರಿಸುತ್ತ ನಿಂತ ಕಾರ್ಯಕರ್ತರಿಗೆ ಕಿಮ್ಮನೆ ರತ್ನಾಕರ್ ತರಾಟೆ ತೀರ್ಥಹಳ್ಳಿ ತಾಲೂಕಿನ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಗ್ರಾಮ ಗುಡ್ಡೆಕೊಪ್ಪ ಗ್ರಾಮದಿಂದ ಪಾದಯಾತ್ರೆ ಶುರುವಾಗಿದ್ದು ಸಚಿವರ ಮನೆ ಮುಂದೆ ಪಾದಯಾತ್ರೆ ಸಾಗುವ ವೇಳೆ ಕಾರ್ಯಕರ್ತರು ಡ್ರಮ್ ಭಾರಿಸುತ್ತ ನಿಂತಿದ್ದು ಇದರಿಂದ ಪಾದಯಾತ್ರೆ ಬಿಟ್ಟು ಡ್ರಮ್ ಭಾರಿಸುತ್ತಿದ್ದವರ ಬಳಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೌಡಾಯಿಸಿ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಕಾಂಗ್ರೆಸ್ ಕಾರ್ಯಕರ್ತರು ಗೃಹ ಸಚಿವರ ಮನೆಮುಂದೆ ಡ್ರಮ್ ಭಾರಿಸಿದ್ದಕ್ಕೆ ಆಕ್ರೋಶಗೊಂಡ ರತ್ನಾಕರ್, ಈ ರೀತಿ ಆಗಿ ನಡೆದುಕೊಂಡರೆ ಪಾದಯಾತ್ರೆ ಮೊಟಕುಗೊಳಿಸುವುದಾಗಿ ಎಚ್ಚರಿಕೆ ಕೊಟ್ಟರು.

ಶಿವಮೊಗ್ಗದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Fri, 6 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು