Kodachadri: ಪ್ರವಾಸಿಗರ ಭೂ ಸ್ವರ್ಗ ಕೊಡಚಾದ್ರಿ ಗಿರಿಗೆ ಇಂದಿನಿಂದ ಪ್ರವೇಶ ನಿಷೇಧ
ರಾಜ್ಯದ ಪ್ರಸಿದ್ಧ ಪ್ರವಾಸಿ ಕೇಂದ್ರ ಹಾಗೂ ಭಕ್ತರ ಶ್ರದ್ಧಾಕೇಂದ್ರ ಕೊಡಚಾದ್ರಿ ಗಿರಿಗೆ ಜುಲೈ 30ರಿಂದ ಮುಂದಿನ ಆದೇಶದವರೆಗೆ ಸಂಪೂರ್ಣ ನಿಷೇಧ ಹೇರಿ ವನ್ಯಜೀವಿ ವಿಭಾಗ ಆದೇಶ ಹೊರಡಿಸಿದೆ.
ಶಿವಮೊಗ್ಗ, ಜುಲೈ 30: ಮುಂಗಾರು(Monsoon) ಮಳೆ ಹಿನ್ನೆಲೆ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ರಾಜ್ಯದ ಪ್ರಸಿದ್ಧ ಪ್ರವಾಸಿ ಕೇಂದ್ರ ಹಾಗೂ ಭಕ್ತರ ಶ್ರದ್ಧಾಕೇಂದ್ರ ಕೊಡಚಾದ್ರಿ ಗಿರಿಗೆ(Kodachadri) ಜುಲೈ 30ರಿಂದ ಮುಂದಿನ ಆದೇಶದವರೆಗೆ ವಾಹನದಲ್ಲಿ ತೆರಳುವುದು ಹಾಗೂ ಚಾರಣ ಮಾಡುವುದನ್ನು ಸಂಪೂರ್ಣ ನಿಷೇಧಿಸಿ ವನ್ಯಜೀವಿ ವಿಭಾಗ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರವಾಸಿ ತಾಣ ಕೊಡಚಾದ್ರಿಗೆ ಕಟ್ಟಿನಹೊಳೆ ಮೂಲಕ ತೆರಳುವ ವಾಹನ ಹಾಗೂ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.
ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ವಿಪರೀತ ಮಳೆಯಿಂದಾಗಿ ಮಲೆನಾಡು ವ್ಯಾಪ್ತಿಯ ಪ್ರವಾಸ ತಾಣಗಳು ಅಸುರಕ್ಷತವಾಗಿವೆ. ಹೀಗಾಗಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಕಟ್ಟಿನಹೊಳೆ ಮೂಲಕ ಕೊಡಚಾದ್ರಿಗೆ ತೆರಳುವ ಜೀಪ್ ಮುಂತಾದ ವಾಹನಗಳು ಹಾಗೂ ವಿವಿಧ ಮಾರ್ಗದ ಮೂಲಕ ಚಾರಣಕ್ಕೆ ಹೋಗುವವರಿಗೆ ನಿಷೇಧಿಸಲಾಗಿದೆ.
ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಮಳೆರಾಯ, ಕರಾವಳಿ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ
ಈ ಮೂಲಕ ನಿಟ್ಟೂರು, ಸಂಪೆಕಟ್ಟೆ, ಕಟ್ಟಿನಹೊಳೆಯಿಂದ ಪ್ರತೀ ದಿನ ಕೊಡಚಾದ್ರಿಗೆ ಜೀಪ್‌ನಲ್ಲಿ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ಸುಮಾರು 150 ಜೀಪ್ ಮಾಲೀಕರು, ಚಾಲಕರ ಜೀವನ ನಿರ್ವಹಣೆಗೆ ಪೆಟ್ಟು ಬಿದ್ದಂತಾಗಿದೆ.
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ
ಕಾಫಿನಾಡು ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ರಾಜ್ಯ ಹೊರರಾಜ್ಯದ ಪ್ರವಾಸಿಗರು ಹೆಚ್ಚಾಗಿ ಭೇಟಿ ನೀಡುತ್ತಾರೆ. ಆದ್ರೆ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು ಚಿಕ್ಕಮಗಳೂರಿನ ಕೆಲ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದ್ದು ನಿರಂತರ ಮಳೆಗೆ ರಸ್ತೆಗೆ ಅಡ್ಡಲಾಗಿ ಗುಡ್ಡದ ಮಣ್ಣು ಕಲ್ಲು ಬಿಳುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರನ್ನ ಚಿಕ್ಕಮಗಳೂರು ಜಿಲ್ಲಾಡಳಿತ ಜುಲೈ 31ರ ವರೆಗೆ ನಿರ್ಬಂಧ ಹೇರಿದೆ. ಚಿಕ್ಕಮಗಳೂರಿನಿಂದ ಚಂದ್ರದ್ರೋಣ ಪರ್ವತಕ್ಕೆ ತೆರಳುವ ಮಾರ್ಗ ಮಧ್ಯದ ಕೈಮರ ಚೆಕ್ ಪೋಸ್ಟ್ ಬಳಿ ಗೇಟ್ ಹಾಕಿದ್ದು ಚಂದ್ರದ್ರೋಣ ಪರ್ವತಕ್ಕೆ ಬರುವ ಪ್ರವಾಸಿಗರನ್ನ ವಾಪಸ್ ಕಳಿಸಲಾಗುತ್ತಿದೆ.
ಶಿವಮೊಗ್ಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ