AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪನವರ ರಾಜೀನಾಮೆ ಪಡೆಯಿರಿ ಅಥವಾ ನೀವೇ ರಾಜೀನಾಮೆ ನೀಡಿ; ಸಿಎಂ ಬಸವರಾಜ ಬೊಮ್ಮಾಯಿಗೆ ಡಿಕೆಶಿ ಸವಾಲು

ಸಿದ್ದರಾಮಯ್ಯ ವಿರುದ್ಧ ಸಚಿವ ಸಚಿವ ಕೆ.ಎಸ್​. ಈಶ್ವರಪ್ಪ ವಾಗ್ದಾಳಿ ನಡೆಸಿರುವ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ಸಚಿವ ಈಶ್ವರಪ್ಪ ಸತ್ಯ ಹರಿಶ್ಚಂದ್ರ ಮೊಮ್ಮಗನಾ? ಈಶ್ವರಪ್ಪ ನೀನು ಬಡವನಾ? ಎಂದು ಪ್ರಶ್ನೆ ಮಾಡಿದ್ದಾರೆ.

ಈಶ್ವರಪ್ಪನವರ ರಾಜೀನಾಮೆ ಪಡೆಯಿರಿ ಅಥವಾ ನೀವೇ ರಾಜೀನಾಮೆ ನೀಡಿ; ಸಿಎಂ ಬಸವರಾಜ ಬೊಮ್ಮಾಯಿಗೆ ಡಿಕೆಶಿ ಸವಾಲು
ಡಿ.ಕೆ. ಶಿವಕುಮಾರ್
TV9 Web
| Updated By: ಸುಷ್ಮಾ ಚಕ್ರೆ|

Updated on: Dec 03, 2021 | 8:19 PM

Share

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​. ಈಶ್ವರಪ್ಪನವರಿಗೆ (KS Eshwarappa) ಸ್ವಾಭಿಮಾನವೇ ಇಲ್ಲ. ಬಸವರಾಜ ಬೊಮ್ಮಾಯಿಯವರ ಸರ್ಕಾರದಲ್ಲಿದ್ದು, ಮುರುಗೇಶ್ ನಿರಾಣಿ (Murugesh Nirani) ಮುಖ್ಯಮಂತ್ರಿಯಾಗಲಿ ಎನ್ನುತ್ತಿದ್ದಾರೆ. ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಲಿ ಅಥವಾ ಬೊಮ್ಮಾಯಿಯವರೇ ಸಚಿವ ಕೆ.ಎಸ್​. ಈಶ್ವರಪ್ಪನವರ ರಾಜೀನಾಮೆ ಪಡೆಯಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ (Basavaraj Bommai) ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಸಚಿವ ಸಚಿವ ಕೆ.ಎಸ್​. ಈಶ್ವರಪ್ಪ ವಾಗ್ದಾಳಿ ನಡೆಸಿರುವ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ಸಚಿವ ಈಶ್ವರಪ್ಪ ಸತ್ಯ ಹರಿಶ್ಚಂದ್ರ ಮೊಮ್ಮಗನಾ? ಈಶ್ವರಪ್ಪ ನೀನು ಬಡವನಾ? ಎಂದು ಪ್ರಶ್ನೆ ಮಾಡಿದ್ದಾರೆ. ನಾವು ಮತ್ತೆ ಶಿವಮೊಗ್ಗಕ್ಕೆ ಬಂದು ರಣರಂಗದ ರಾಜಕಾರಣ ಮಾಡ್ತೇವೆ ಎಂದು ಡಿಕೆಶಿ ಸಚಿವ ಈಶ್ವರಪ್ಪನವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಎಂಎಲ್​ಸಿ ಕ್ಷೇತ್ರದ ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿ ಆಡಳಿತ ಇರುವ ರಾಜ್ಯದಲ್ಲಿ ಚುನಾವಣೆಯಲ್ಲಿ ಸೋಲು ಖಚಿತ. ಬಿಜೆಪಿ ಸರ್ಕಾರ ನಮ್ಮ ದೇಶದ ಭ್ರಷ್ಟ ಸರ್ಕಾರವಾಗಿದೆ. ಸಚಿವ ಈಶ್ವರಪ್ಪನವರಿಗೆ ಸ್ವಾಭಿಮಾನವೆಂಬುದೇ ಇಲ್ಲ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿಎಸ್​ ಯಡಿಯೂರಪ್ಪನವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈಗ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿದ್ದರೂ ಮುರುಗೇಶ್ ನಿರಾಣಿ ಸಿಎಂ ಆಗಬೇಕು ಎನ್ನುವ ಹೇಳಿಕೆ ನೀಡುತ್ತಿದ್ದಾರೆ ಎಂದು ಡಿಕೆಶಿ ಕಿಡಿ ಕಾರಿದ್ದಾರೆ.

ಜನವರಿಯಲ್ಲಿ ಮೇಕೆದಾಟು ಯೋಜನೆ ಕುರಿತು ಪಾದಯಾತ್ರೆ ಆರಂಭಿಸಲಾಗುವುದು ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದು ಐತಿಹಾಸಿಕ ಪಾದಯಾತ್ರೆ ಆಗಲಿದೆ. ಈ ಪಾದಯಾತ್ರೆ ಬೆಂಗಳೂರು ಜನರ ಕುಡಿಯುವ ಕಾವೇರಿ ನೀರನ್ನು ನಂಬಿಕೊಂಡ ರೈತರ ಬದುಕಿನ ಹೋರಾಟವಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.

ಹಾನಗಲ್ ಗೆಲುವಿನ ಬಳಿಕ ಕಾಂಗ್ರೆಸ್​​ಗೆ ಹೊಸ ಅಲೆ ಆರಂಭವಾಗಲಿದೆ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ ರಾಜ್ಯದ ಚುಕ್ಕಾಣಿ ಹಿಡಿದಿದೆ. ಇಷ್ಟು ಬಲಿಷ್ಠ ಸರ್ಕಾರ ಇರಬೇಕಾದರೆ ಯಡಿಯೂರಪ್ಪ ಕಣ್ಣೀರು ಹಾಕಿ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿದ ಯಡಿಯೂರಪ್ಪ ಕಣ್ಣೀರು ಹಾಕಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರು. ಇದು ಏನನ್ನು ಸೂಚಿಸುತ್ತಿದೆ? ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಒಬ್ಬ ಕುಡುಕ, ಕುಡಿಯದೇ ಇದ್ದಾಗ ಒಂದು ಕುಡಿದಾಗಲೇ ಮತ್ತೊಂದು ಮಾತಾಡ್ತಾರೆ; ಕೆಎಸ್ ಈಶ್ವರಪ್ಪ ಗರಂ

ನಮ್ಮ ನಾಯಕ ಮುರುಗೇಶ್ ನಿರಾಣಿ ಆದಷ್ಟು ಬೇಗ ಸಿಎಂ ಆಗುತ್ತಾರೆ: ಕೆಎಸ್ ಈಶ್ವರಪ್ಪ ಹೇಳಿಕೆ