AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ವೈ ಪುತ್ರನ ವಿರುದ್ಧ ಈಶ್ವರಪ್ಪ ಸ್ಪರ್ಧೆ; ಕುತೂಹಲ ಮೂಡಿಸಿದ ಶಿವಮೊಗ್ಗ ಲೋಕಸಭಾ ಕ್ಷೇತ್ರ

ಶಿವಮೊಗ್ಗ ಲೋಕಸಭೆ ಕ್ಷೇತ್ರದ ಚುನಾವಣೆ ರಂಗೇರಿದೆ. ಬಿಎಸ್ ಯಡಿಯೂರಪ್ಪ(B. S. Yediyurappa) ಮತ್ತು ಈಶ್ವರಪ್ಪ(K.S Eshwarappa) ಇಬ್ಬರ ನಡುವಿನ ಜಿದ್ದಾಜಿದ್ದಿಗೆ ಶಿವಮೊಗ್ಗ ಕ್ಷೇತ್ರದ ಚುನಾವಣೆ ಸಾಕ್ಷಿಯಾಗಲಿದೆ. ಈಶ್ವರಪ್ಪ ಬಿಜೆಪಿ ಅಭ್ಯರ್ಥಿ ಬಿಎಸ್ ವೈ ಪುತ್ರನ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಸುತ್ತಿದ್ದಾರೆ. ಕಮಲ ಚಿಹ್ನೆ ಬದಲಿಗೆ ಈಶ್ವರಪ್ಪ ಈಗ ಕಬ್ಬಿನ ಜೊತೆ ಇರುವ ರೈತನ ಚಿಹ್ನೆ ಮೂಲಕ ಲೋಕ ಸಮರಕ್ಕೆ ಮುಂದಾಗಿದ್ದಾರೆ. 

ಬಿಎಸ್​ವೈ ಪುತ್ರನ ವಿರುದ್ಧ ಈಶ್ವರಪ್ಪ ಸ್ಪರ್ಧೆ; ಕುತೂಹಲ ಮೂಡಿಸಿದ ಶಿವಮೊಗ್ಗ ಲೋಕಸಭಾ ಕ್ಷೇತ್ರ
ಕೆಎಸ್​ ಈಶ್ವರಪ್ಪ
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್|

Updated on:Apr 23, 2024 | 4:26 PM

Share

ಶಿವಮೊಗ್ಗ, ಏ.23: ರಾಜ್ಯ ಬಿಜೆಪಿಯಲ್ಲಿ ಬಿಜೆಪಿ ಕಟ್ಟಾಳು ಕೆಎಸ್ ಈಶ್ವರಪ್ಪ(K.S Eshwarappa) ಬಿರುಗಾಳಿ ಎಬ್ಬಿಸಿದ್ದಾರೆ. ಪುತ್ರ ಕಾಂತೇಶ್​ಗೆ ಹಾವೇರಿ ಟಿಕೆಟ್ ಫಿಕ್ಸ್ ಆಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು. ಇದರಿಂದ ಈಶ್ವರಪ್ಪ, ಬಿಎಸ್ ಯಡಿಯೂರಪ್ಪ(BS Yediyurappa) ಮತ್ತು ರಾಜ್ಯಾಧ್ಯಕ್ಷ ವಿಜಯೇಂದ್ರ ಮೇಲೆ ಕೆಂಡಾಮಂಡಲವಾಗಿದ್ದಾರೆ. ಇದೀಗ ಬದಲಾದ ಪರಿಸ್ಥಿತಿಯಲ್ಲಿ ಪಕ್ಷವೇ ತಾಯಿ ಎನ್ನುತ್ತಿದ್ದ ಈಶ್ವರಪ್ಪ ಅವರು ಅನಿವಾರ್ಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕಿದ್ದಾರೆ. ಈ ನಡುವೆ ಈಶ್ವರಪ್ಪ ಅವರಿಗೆ ಚುನಾವಣೆ ಚಿಹ್ನೆ ಕಬ್ಬಿನ ಜೊತೆಗಿನ ರೈತ ಸಿಕ್ಕಿದೆ.

ಇನ್ನು ನಾಮಪತ್ರ ವಾಪಸ್ ಪಡೆಯುತ್ತೇನೆ ಎನ್ನುವರಿಗೆ ಈಶ್ವರಪ್ಪ ತಮ್ಮ ಧಾಟಿಯಲ್ಲೇ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿ ಶುದ್ಧೀಕರಣ ಮತ್ತು ಕುಟುಂಬ ರಾಜಕಾರಣದ ವಿರುದ್ಧ ಈಶ್ವರಪ್ಪ ಈಗ ತಿರುಗಿಬಿದ್ದಿದ್ದಾರೆ. ಬಿಎಸ್​ವೈ ಪುತ್ರ ರಾಘವೇಂದ್ರನ ಸೋಲಿಸಲು ಈಶ್ವರಪ್ಪ ಪಣ ತೊಟ್ಟಿದ್ದಾರೆ. ಅತ್ತ ಮತ್ತೊಬ್ಬ ಪುತ್ರ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಈಶ್ವರಪ್ಪ ಗುಡುಗಿದ್ದು, ರಾಜ್ಯಾಧ್ಯಕ್ಷ ಕುರ್ಚಿಯನ್ನ ಚುನಾವಣೆ ಬಳಿಕ ವಿಜಯೇಂದ್ರ ಕಳೆದುಕೊಳ್ಳಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಯಡಿಯೂರಪ್ಪನೇ ನನ್ನನ್ನು ಪಕ್ಷಕ್ಕೆ ವಾಪಸ್ಸು ಕರೆದೊಯ್ಯುತ್ತಾರೆ: ಈಶ್ವರಪ್ಪ

ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆಂದ ಈಶ್ವರಪ್ಪ

ಈಶ್ವರಪ್ಪ ಪಕ್ಷೇತರ ಅಭ್ಯರ್ಥಿ ಆಗಿ ನಿಲ್ಲಲು ಬಿಎಸ್​ವೈ ಕುಟುಂಬ ಕಾರಣ ಎನ್ನುವ ಸಿಟ್ಟು ದಿನೇ ದಿನೇ ಈಶ್ವರಪ್ಪರನ್ನ ಕೆರಳಿಸುತ್ತಿದೆ. ನಾನೇ ಓರಿಜನಲ್ ಬಿಜೆಪಿ, ಬಿಎಸ್​ವೈ ಡುಪ್ಲೀಕೇಟ್ ಬಿಜೆಪಿ ಎಂದು ಈಶ್ವರಪ್ಪ ವ್ಯಂಗ್ಯ ಮಾಡಿದ್ದಾರೆ. ಕೆಜೆಪಿ ಕಟ್ಟಿ ಯಡಿಯೂರಪ್ಪ ಅವರು ಪಕ್ಷ ಬಿಟ್ಟು ಹೋಗಿದ್ದರು. ಟಿಪ್ಪು ಜಯಂತಿ ಮಾಡಿ ಟೋಪಿ ಹಾಕಿಕೊಂಡಿದ್ದರು. ನಾನು ಪಕ್ಷ ಅಂದ್ರೆ ತಾಯಿ ಇದ್ದಂಗೆ. ಹಾಗಾಗಿ ಈ ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆಂದು ಈಶ್ವರಪ್ಪ ವಿಶ್ವಾಸ ಹೊರಹಾಕಿದ್ದಾರೆ.

ಈಶ್ವರಪ್ಪ ಪಕ್ಷದಿಂದ ಉಚ್ಚಾಟನೆ

ಇನ್ನು ನಿನ್ನೆ ನಾಮಪತ್ರ ಕಡೆ ದಿನವಾಗಿದ್ದು, ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯಲಿಲ್ಲ. ಇದರಿಂದ ಕೋಪಗೊಂಡ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇಂದು ಹನುಮ ಜಯಂತಿ ಹಿನ್ನಲೆಯಲ್ಲಿ ಯಡಿಯೂರಪ್ಪ ಕುಟುಂಬವು ತಮ್ಮ ಆರಾಧ್ಯ ದೈವ ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ರಥೋತ್ಸವದಲ್ಲಿ ಬಿಎಸ್ ವೈ ಕುಟುಂಬಸ್ಥರು ಭಾಗವಹಿಸಿದ್ದರು. ಜೊತೆಗೆ ಶಿಕಾರಿಪುರದಲ್ಲಿ ವಿಜಯೇಂದ್ರ ಅವರ ಸಮ್ಮುಖದಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಇದೇ ವೇಳೆ ಈಶ್ವರಪ್ಪ ಉಚ್ಛಾಟನೆಯಲ್ಲಿ ನನ್ನದೇನು ಪಾತ್ರವಿಲ್ಲವೆಂದು ಬಿಎಸ್​ವೈ ಸೈಲೆಂಟ್ ಆದರು. ತಮ್ಮ ವಿರುದ್ಧ ನಿಂತಿರುವ ಈಶ್ವರಪ್ಪ ಅವರ ಬಗ್ಗೆ ರಾಘವೇಂದ್ರ ಅವರು ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ. ಇನ್ನು ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣೆ ಕಾವು ಏರತೊಡಗಿದೆ. ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಮೂಲಕ ಕ್ಷೇತ್ರದ ಚಿತ್ರಣವೇ ಬದಲಾಗಿದೆ. ಈಶ್ವರಪ್ಪ ಎದುರು ಬಿಎಸ್ ವೈ ಪುತ್ರ ರಾಘವೇಂದ್ರ ಗೆಲ್ಲುವುದು ಈಗ ಬಹುದೊಡ್ಡ ಸವಾಲು ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Tue, 23 April 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ