ಜಗದೀಶ್ ಶೆಟ್ಟರ್​ಗೆ​ ಬಹಿರಂಗ ಪತ್ರ ಬರೆಯುತ್ತೇನೆ, ನನ್ನ ಪತ್ರಕ್ಕೆ ಅವರು ಉತ್ತರ ಕೊಡಬೇಕು: ಈಶ್ವರಪ್ಪ

ಬಿಜೆಪಿಗೆ ಇಷ್ಟೆಲ್ಲಾ ಕೆಲಸ ಮಾಡಿ ಕಾಂಗ್ರೆಸ್​ಗೆ ಏಕೆ ಸೇರಿದ್ರಿ ಅಂತಾ ನಿಮ್ಮ ಮೊಮ್ಮಗ ಕೇಳಿದ್ರೆ ಏನು ಹೇಳ್ತೀರಾ? ಅವನು ಸಹ ಛೀ ಥೂ ಅಂತಾನೆ ಎಂದು ಕೆಎಸ್ ಈಶ್ವರಪ್ಪ ಅವರು ಜಗದೀಶ್ ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ.

ಜಗದೀಶ್ ಶೆಟ್ಟರ್​ಗೆ​ ಬಹಿರಂಗ ಪತ್ರ ಬರೆಯುತ್ತೇನೆ, ನನ್ನ ಪತ್ರಕ್ಕೆ ಅವರು ಉತ್ತರ ಕೊಡಬೇಕು: ಈಶ್ವರಪ್ಪ
ಕೆಎಸ್ ಈಶ್ವರಪ್ಪ
Follow us
ಆಯೇಷಾ ಬಾನು
|

Updated on:Apr 17, 2023 | 1:23 PM

ಶಿವಮೊಗ್ಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್(Jagdish Shettar) ಕಾಂಗ್ರೆಸ್​ಗೆ ಸೇರಿದ್ದು ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ಜಗದೀಶ್ ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿಗೆ ಇಷ್ಟೆಲ್ಲಾ ಕೆಲಸ ಮಾಡಿ ಕಾಂಗ್ರೆಸ್​ಗೆ ಏಕೆ ಸೇರಿದ್ರಿ ಅಂತಾ ನಿಮ್ಮ ಮೊಮ್ಮಗ ಕೇಳಿದ್ರೆ ಏನು ಹೇಳ್ತೀರಾ? ಅವನು ಸಹ ಛೀ ಥೂ ಅಂತಾನೆ. ನೀವು ಕ್ಷಮೆ ಕೇಳಿ ಧರ್ಮ ಉಳಿಸಿದ, ತತ್ವ ಸಿದ್ದಾಂತ ಉಳಿಸಿದ ಪಕ್ಷಕ್ಕೆ ವಾಪಸ್ ಬರಬೇಕು. ಈಗಲೂ ಕಾಲ ಮಿಂಚಿಲ್ಲ‌ ನೀವು ವಾಪಸ್ ಬರಬಹುದು ಎಂದು ಈಶ್ವರಪ್ಪ ಆಹ್ವಾನಿಸಿದ್ದಾರೆ.

ಬಿಜೆಪಿಯಲ್ಲಿದ್ದಾಗ ದೊಡ್ಡ ದೊಡ್ಡ ಭಾಷಣ ಮಾಡಿ ನೀವೇ ಜಾರಿಗೆ ತಂದ ಬಿಲ್ ವಾಪಸ್ ಪಡೆಯಲು ಕಾಂಗ್ರೆಸ್​ನಿಂದ ಬೆಂಬಲಿಸುತ್ತೀರಾ? ಶೆಟ್ಟರ್ ಅವರಿಗೆ ಬಹಿರಂಗ ಪತ್ರ ಬರೆಯುತ್ತೇನೆ. ನನ್ನ ಪತ್ರಕ್ಕೆ ಅವರು ಉತ್ತರ ಕೊಡಬೇಕು. ಕೇವಲ ಒಂದು ಶಾಸಕ ಟಿಕೆಟ್ ಮುಖ್ಯವಲ್ಲ. ಸಂಸ್ಕಾರ ಕೊಟ್ಟವರು ಇಂತಹ ವ್ಯಕ್ತಿಗೆ ಸಂಸ್ಕಾರ ಕೊಟ್ಟೆವಲ್ಲ ಅಂತಾ ಯೋಚನೆ ಮಾಡ್ತಾರೆ. ನಾನು ಬಹಿರಂಗ ಪತ್ರ ಬರೆದಾಗ ನಿಮಗೆ ನೋವು ಆಗಬಹುದು. ಅವರು ರಾಜೀನಾಮೆ ಕೊಟ್ಟಿದ್ದು ನನಗೆ ಆಘಾತವಾಯ್ತು. ಹೀಗಾಗಿ ನಾನು ಅವರಿಗೆ ಪತ್ರ ಬರೆಯುತ್ತೇನೆ ಎಂದು ಕೆಎಸ್ ಈಶ್ವರಪ್ಪ ಅವರು ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ಬಗ್ಗೆ ಯಾರು ಏನು ಹೇಳಿದ್ರು? ಇಲ್ಲಿದೆ ನೋಡಿ

ಇನ್ನು ಮಾತು ಮುಂದುವರೆಸಿ, ಧರ್ಮೇಂದ್ರ ಪ್ರಧಾನ್ ನಿವೃತ್ತಿ ತಗೋಬೇಕು ಅಂತಾ ಫೋನ್ ಮಾಡಿದ್ರು. ಅವರು ಫೋನ್ ಮಾಡಿದ 10 ನಿಮಿಷಕ್ಕೆ ನಾನು‌ ಪತ್ರ ಬರೆದೆ. ನಂತರ ನಿವೃತ್ತಿ ತಗೋಬೇಕು ಅಂದಾಗ ಶೆಟ್ಟರ್ ಅವರ ಜೊತೆ ಮಾತನಾಡಿದ್ದೆ. ಟಿಕೆಟ್​​ಗಾಗಿ ಲಕ್ಷ ಲಕ್ಷ ಕಾರ್ಯಕರ್ತರು ಇದ್ದಾರೆ. ನಿನಗೆ ಏಕೆ ಟಿಕೆಟ್ ಕೊಡಬೇಕು? ಯಾರಿಗೆ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು ಅಂತಾ ಪಕ್ಷ ತೀರ್ಮಾನ ಮಾಡುತ್ತೆ. ಪಕ್ಷದ ಹಿರಿಯರು ನಮಗಿಂತ ಬುದ್ದಿವಂತರು ಇದ್ದಾರೆ. ಲಕ್ಷ್ಮಣ ಸವದಿ ಸಂಘ ಪರಿವಾರದಿಂದ ಬಂದವರಲ್ಲ. ಹೀಗಾಗಿ ಅವರ ಬಗ್ಗೆ ನಾನು ಅಷ್ಟು ಮಾತನಾಡಲ್ಲ. ಆದ್ರೆ ಶೆಟ್ಟರ್ ಸಂಘಪರಿವಾರದಿಂದ ಬಂದವರು. ಹೀಗಾಗಿ ಅವರು ಪಕ್ಷ ಬಿಟ್ಟಿದ್ದು ನೋವಾಯ್ತು. ಅವರು ವಾಪಸ್ ಬಂದರೆ ಬಹಳ ಸಂತೋಷ, ಇಲ್ಲದಿದ್ದರೆ ನೋವಾಗುತ್ತದೆ. ಕಾರ್ಯಕರ್ತರ ನೋವಿನ ಬಗ್ಗೆ ಪತ್ರ ಬರೆಯುತ್ತೇನೆ. ಎಲ್ಲಾ ಸೀಟ್ ಕಳೆದುಕೊಂಡರೆ ನಮಗೇನು ಬೇಜಾರಿಲ್ಲ. ಈ ದೇಶ ಉಳಿಯಬೇಕು ಅಂತಾ ಅನೇಕರು ಬೆಂಬಲ ಕೊಡ್ತಿದ್ದಾರೆ. ಚುನಾವಣೆ ಹಿನ್ನಡೆ ಬಹಳ ದೊಡ್ಡದಲ್ಲ. ಎರಡು ಸೀಟ್ ಇದ್ದವರು ಅಧಿಕಾರಕ್ಕೆ ಬಂದ ಪಕ್ಷ ನಮ್ಮದು ಎಂದರು.

ಸಿದ್ದರಾಮಯ್ಯ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಕೋಲಾರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಿತು. ವರುಣದಲ್ಲಿ ಬಿಜೆಪಿ ಸಿದ್ದರಾಮಯ್ಯ ಅವರನ್ನು ಸೋಲಿಸುತ್ತೇವೆ. ನಾನು ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿದ್ದೇನೆ. ಈ ಬಗ್ಗೆ ಅವರಿಗೆ ಈಗಾಗಲೇ ಪತ್ರ ಬರೆದಿದ್ದೇನೆ. ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾನು ಬದ್ದ ಎಂದು ಈಶ್ವರಪ್ಪ ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:23 pm, Mon, 17 April 23

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್